ದಾಖಲೆಯಿಲ್ಲದೆ ಪೌರತ್ವ ನೀಡುವ ಕಾಯ್ದೆ ಇದಾಗಿದೆ-ಸಚಿವ ಜೆ.ಸಿ.ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ :       1914 ರ ಡಿಸೆಂಬರ್‍ಗೂ ಹಿಂದೆ ನಮ್ಮ ದೇಶಕ್ಕೆ ಮೂರು ಇಸ್ಲಾಂ ದೇಶದಿಂದ ಕಿರುಕುಳಕ್ಕೊಳಗಾಗಿ ಇಲ್ಲಿಗೆ ಬಂದ 6 ಧಾರ್ಮಿಕ ನಿರಾಶ್ರಿತರಿಗೆ ಯಾವುದೇ ದಾಖಲೆಯಿಲ್ಲದೆ ಪೌರತ್ವ ನೀಡುವ ಕಾಯ್ದೆ ಇದಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಸ್ಪಷ್ಟಪಡಿಸಿದರು.       ಅವರು ಪಟ್ಟಣದ ಕಾರ್ಯನಿರತ ಪತ್ರಕರ್ತರ ಕಾರ್ಯಾಲಯದಲ್ಲಿ ಈ ಕುರಿತು ಮಾತನಾಡಿ ಈ ಕಾಯ್ದೆಯಿಂದ ಈ ದೇಶದ ಮಸ್ಲಿಂರಿಗೆ ಕಿಂಚಿತ್‍ಭಾದೆಯಿಲ್ಲ. ಮುಸ್ಲಿಂ ರಾಷ್ಟ್ರಗಳೆನಿಸಿದ ಪಾಕಿಸ್ಥಾನ, ಆಫ್ಘಾಸ್ಥಾನ ಹಾಗೂ ಬಾಂಗ್ಲಾದೇಶದಿಂದ ಮುಸ್ಲಿಂಮೇತರರಾದ ಆರು ಧರ್ಮಿಯರು ಅಲ್ಲಿನ ಕಿರುಕುಳ ಸಹಿಸಲಾರದೆ ಬದುಕುಳಿಯಲು ನಮ್ಮ ದೇಶಕ್ಕೆ ವಲಸೆ ಬಂದಿದ್ದಾರೆ. ಇವರಲ್ಲಿ ಯಾವುದೇ ದಾಖಲೆಗಳಿಲ್ಲ. ದಾಖಲೆಗಳಿದ್ದ ಕಾರಣ ಇವರಿಗೆ ದೇಶದ ಯಾವುದೇ ಸವಲತ್ತುಗಳು ದೊರೆಯುತ್ತಿಲ್ಲ. ಇಂತಹ ಆರು ಧರ್ಮೀಯರಾದ ಹಿಂದೂ, ಪಾರ್ಸಿ, ಸಿಖ್, ಕ್ರಿಶ್ಚಯನ್, ಜೈನ, ಭೌದ್ದಮತದ ಸುಮಾರು 30 ಸಾವಿರ…

ಮುಂದೆ ಓದಿ...

10 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಮಂದಗತಿಯಲ್ಲಿ!!

ತುಮಕೂರು :       ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ನಾಡಿನ ಸುಪ್ರಸಿದ್ದ ದೇವರಾಯನ ದುರ್ಗದಲ್ಲಿ 10 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಭರದಿಂದ ಸಾಗಿದೆ.       ನಾಡಿನ ಮೂಲೆಮೂಲೆಯಲ್ಲಿ ಭಕ್ತಾಧಿಗಳನ್ನು ಹೊಂದಿರುವ ದೇವರಾಯನದುರ್ಗದ ಯೋಗ ನರಸಿಂಹಸ್ವಾಮಿ ಕ್ಷೇತ್ರ ಹಲವು ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿತ್ತು, ದೇವರಾಯನ ದುರ್ಗಕ್ಕೆ ಬರುವ ಭಕ್ತಾಧಿಗಳು ಅನುಭವಿಸುತ್ತಿದ್ದ ಸಮಸ್ಯೆಯನ್ನು ಸ್ತಳೀಯರು ಚುನಾವಣಾ ಪ್ರಚಾರಕ್ಕೆ ತೆರಳಿದ್ದಾದ ಡಿ ಸಿ ಗೌರೀಶಂಕರ್ ಅವರ ಗಮನಕ್ಕೆ ತಂದಿದ್ದರು, ಸ್ತಳೀಯರ ಸಮಸ್ಯೆ ಆಲಿಸಿದ್ದ ಡಿ ಸಿ ಗೌರೀಶಂಕರ್ ಅವರು ಶಾಸಕರಾಗಿ ಆಯ್ಕೆಯಾದ ಮೇಲೆ ಆದ್ಯತೆ ಮೇಲೆ ದೇವರಾಯನದುರ್ಗದಲ್ಲಿ ಮೂಲಬೂತ ಸೌಕರ್ಯ ಕಲ್ಪಿಸಲು ಸಂಕಲ್ಪ ತೊಟ್ಟು ಸಾಕಾರಗೊಳಿಸಿದ್ದಾರೆ.       ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಗ್ರಾಮಾಂತರ ಶಾಸಕ ಡಿ ಸಿ ಗೌರೀಶಂಕರ್ ಮುಖ್ಯಂಮಂತ್ರಿಗಳಿಗೆ ಒತ್ತಡ ತಂದು…

ಮುಂದೆ ಓದಿ...

ವಿಜ್ಞಾನದ ಆವಿಷ್ಕಾರಗಳು ಅಭಿವೃದ್ಧಿಗೆ ಪೂರಕವಾಗಿರಬೇಕು – ಶ್ರೀ ಸಿದ್ಧಲಿಂಗಸ್ವಾಮೀಜಿಗಳು

ತುಮಕೂರು:       ವಿಜ್ಞಾನದ ಆವಿಷ್ಕಾರಗಳು ಮನುಷ್ಯ ಹಾಗೂ ಸಮಾಜದ ಬೆಳವಣಿಗೆಗೆ ಪೂರಕವಾಗಬೇಕೇ ಹೊರತು ಮಾರಕವಾಗಬಾರದು ಎಂದು ಶ್ರೀ ಸಿದ್ಧಗಂಗಾ ಮಠದ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮೀಜಿಗಳು ಅಭಿಪ್ರಾಯಪಟ್ಟರು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ತುಮಕೂರು(ದ)ಜಿಲ್ಲೆ ಇವರ ಸಹಯೋಗದಲ್ಲಿಂದು ಶ್ರೀ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ 2019-20 ನೇ ಸಾಲಿನ “ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ” ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಅವರು, ವಿಜ್ಞಾನವೆಂಬುದು ಸತ್ಯದ ಅನ್ವೇಷಣೆಯಾಗಿದ್ದು, ವಿಜ್ಞಾನದ ನೂತನ ಆವಿಷ್ಕಾರಗಳು ಮನುಷ್ಯನ ಯೋಗಕ್ಷೇಮಕ್ಕೆ ಅನುಗುಣವಾಗಿರಬೇಕು ಎಂದು ಅವರು ತಿಳಿಸಿದರು.       ವಿಜ್ಞಾನದ ಆವಿಷ್ಕಾರಗಳಿಂದ ಸೌಲಭ್ಯಗಳು ಹೆಚ್ಚಾದಂತೆ ಮನುಷ್ಯ ಸೋಮಾರಿತನ ಬೆಳೆಸಿಕೊಂಡು ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾನೆ. ವಿಜ್ಞಾನದ ಆವಿಷ್ಕಾರಗಳು ನಮಗೆ ಬೇಕು ಆದರೆ ಎಷ್ಟು ಬೇಕು ಅಷ್ಟನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.       ಮಕ್ಕಳಲ್ಲಿ…

ಮುಂದೆ ಓದಿ...

ಕೃಷಿ ಸಮ್ಮಾನ್‍ಗೆ 1 ಲಕ್ಷ ರೈತರು ಸೇರುವ ಸಾಧ್ಯತೆ!

ತುಮಕೂರು :       ಪ್ರಧಾನ ನರೇಂದ್ರ ಮೋದಿ ಅವರು ಜನವರಿ 2ರಂದು ತುಮಕೂರು ಆಗಮಿಸಿ, ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಕಾರ್ಯಕ್ರಮ ಹಾಗೂ ರೈತ ಸಮಾವೇಶಕ್ಕೆ ರಾಜ್ಯದ ವಿವಿಧ ಜಿಲ್ಲೆಯಿಂದ ಸುಮಾರು 1 ಲಕ್ಷ ರೈತರು ಸೇರುವ ಸಾಧ್ಯತೆಯಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.       ನಗರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ ಮಾತನಮಾಡಿದ ಅವರು ಜನವರಿ 2ರಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಜಿಲ್ಲೆಗೆ ಆಗಮಿಸಲಿದ್ದು, ಮೊದಲು ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂ.ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ನಂತರ ಮಠದ ಮಕ್ಕಳ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.       ದೇಶದ 6 ರಾಜ್ಯಗಳಲ್ಲಿ ಕೃಷಿ ಇಲಾಖೆಯಲ್ಲಿ…

ಮುಂದೆ ಓದಿ...

ಬಸ್ ಸಮಸ್ಯೆ ಪರಿಹರಿಸದಿದ್ದರೆ ಕಚೇರಿಗೆ ಮುತ್ತಿಗೆ : ಎಚ್ಚರಿಕೆ!!

ತುಮಕೂರು :       ವಿದ್ಯಾರ್ಥಿಗಳು ಬೆಳಗಿನ ವೇಳೆಯಲ್ಲಿ ಶಾಲೆ-ಕಾಲೇಜುಗಳಿಗೆ ಬರಲು ಅನುಕೂಲವಾಗುವಂತೆ ಶೀಘ್ರವಾಗಿ ಬಸ್ ಸೌಲಭ್ಯ ಕಲ್ಪಿಸದಿದ್ದರೆ, ತುಮಕೂರಿನ ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಮುಂದೆ ವಿದ್ಯಾರ್ಥಿಗಳ ಸಹಿತ ಮುತ್ತಿಗೆ ಹಾಕಿ ಹೋರಾಟ ಮಾಡುವುದಾಗಿ ಬಿಜೆಪಿ ತಾ.ಪಂ. ಸದಸ್ಯೆ ಆರ್. ಕವಿತಾ ರಮೇಶ್ ಸಾರಿಗೆ ಸಂಸ್ಥೆಗೆ ಎಚ್ಚರಿಕೆ ನೀಡಿದರು.       ತುಮಕೂರು ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ ತಾ.ಪಂ., ಅಧ್ಯಕ್ಷ ಗಂಗಾಂಜನೇಯ ಅವರ ಅಧ್ಯಕ್ಷತೆಯಲ್ಲಿ ಏರ್ಪಟ್ಟಿದ್ದ ತಾ.ಪಂ. ಸಾಮಾನ್ಯ ಸಭೆಯಲ್ಲಿ ಈ ಪ್ರಸಂಗ ಜರುಗಿತು.ತುಮಕೂರು-ಶಿರಾ ಹೆದ್ದಾರಿಯಲ್ಲಿ ತುಮಕೂರು ತಾಲ್ಲೂಕಿಗೆ ಒಳಪಡುವ ಶೀಬಿ ಕಡೆಯಿಂದ ತುಮಕೂರು ಕಡೆಗೆ ದೊಡ್ಡ ಸಂಖ್ಯೆಯಲ್ಲಿ ಶಾಲೆ-ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರತಿನಿತ್ಯ ಬಂದು ಹೋಗುತ್ತಾರೆ.        ಶೀಬಿ, ಸೋಮಸಾಗರ ಗೇಟ್, ನೆಲಹಾಳ್, ಸೋರೆಕುಂಟೆ ಗೇಟ್, ತಿಮ್ಮರಾಜನಹಳ್ಳಿ ಗೇಟ್, ಬೆಳ್ಳಾವಿ ಕ್ರಾಸ್‍ನಿಂದ ಬರುವ ಬಡಕುಟುಂಬಕ್ಕೆ ಸೇರಿದ…

ಮುಂದೆ ಓದಿ...

ವಿದ್ಯಾರ್ಥಿಗಳ ಯಕ್ಷಗಾನಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ!

ತುಮಕೂರು:       ವಿದ್ಯಾರ್ಥಿಗಳೇ ಪ್ರದರ್ಶಿಸಿದ ಯಕ್ಷಗಾನ ‘ಏಕಾದಶಿ ದೇವಿ ಮಹಾತ್ಮೆ’ ಹಾಗೂ ಹವ್ಯಾಸಿ ಕಲಾವಿದರು ಪ್ರದರ್ಶಿಸಿದ ‘ಗದಾಯುದ್ಧ’ ತುಮಕೂರಿನ ಕಲಾರಸಿಕರ ಮೆಚ್ಚುಗೆಗೆ ಪಾತ್ರವಾದವು. ನಗರದ ‘ಯಕ್ಷದೀವಿಗೆ’ಯ ನೇತೃತ್ವದಲ್ಲಿ ನಡೆದ ಐದು ಗಂಟೆಗಳ ಸುದೀರ್ಘ ಯಕ್ಷಗಾನ ಪ್ರದರ್ಶನವು ಪ್ರೇಕ್ಷಕರ ಮನರಂಜಿಸಿತು.       ಕರ್ನಾಟಕ ಯಕ್ಷಗಾನ ಅಕಾಡೆಮಿಯು ದಕ್ಷಿಣ ಕನ್ನಡ ಮಿತ್ರವೃಂದ ಹಾಗೂ ಯಕ್ಷದೀವಿಗೆಯ ಸಹಕಾರದೊಂದಿಗೆ ಎಸ್.ಎಸ್.ಪುರಂನ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಸಿದ ಒಂದು ದಿನದ ವಿಚಾರ ಸಂಕಿರಣದ ಅಂಗವಾಗಿ ಎರಡು ಯಕ್ಷಗಾನ ಪ್ರದರ್ಶನಗಳು ನಡೆದವು.       ಯಕ್ಷದೀವಿಗೆಯ ಅಧ್ಯಕ್ಷೆ ಹಾಗೂ ಯಕ್ಷಗಾನ ಅಕಾಡೆಮಿ ಸದಸ್ಯೆ ಆರತಿ ಪಟ್ರಮೆಯವರಿಂದ ತರಬೇತಿ ಪಡೆದ ನಗರದ ವಿವಿಧ ಶಾಲೆಯ ವಿದ್ಯಾರ್ಥಿಗಳು ಬಣ್ಣಹಚ್ಚಿ ಗೆಜ್ಜೆ ತೊಟ್ಟು ‘ಏಕಾದಶಿ ದೇವಿ ಮಹಾತ್ಮೆ’ ಎಂಬ ಯಕ್ಷಗಾನವನ್ನು ಪ್ರದರ್ಶಿಸಿದರು. ಮಾರುತಿ ವಿದ್ಯಾಕೇಂದ್ರ, ಬಿಷಪ್ ಸಾರ್ಜೆಂಟ್ ಶಾಲೆ, ಶ್ರೀ ಗುರುಕುಲ್, ಚೇತನ…

ಮುಂದೆ ಓದಿ...

ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿ – ಶಾಸಕ

ತುಮಕೂರು :       ಸರ್ಕಾರಿ ನೌಕರರು ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಹೇಳಿದರು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕಗಳ ಸಹಯೋಗದಲ್ಲಿ ನಗರದ ಎಸ್.ಐ.ಟಿ ಕಾಲೇಜಿನ ಶ್ರೀ ಶಿವಕುಮಾರಸ್ವಾಮೀಜಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಸರ್ಕಾರಿ ನೌಕರರಲ್ಲಿ ಅತಿಯಾದ ಒತ್ತಡ ಇರುವುದರಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳುವಲ್ಲಿ ಅನುಕೂಲವಾಗುವುದು ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ಕ್ರೀಡಾಸಕ್ತಿಯನ್ನು ಪ್ರದರ್ಶಿಸಬೇಕು ಎಂದರಲ್ಲದೇ ಕ್ರೀಡಾಕೂಟದಲ್ಲಿ ಭಾಗವಹಿಸಲು ಹೇಗೆ ಉತ್ಸುಕರಾಗಿದ್ದೀರೋ.. ಅದೇ ರೀತಿ ಕಚೇರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು…

ಮುಂದೆ ಓದಿ...

ಚಾರ್ಮಾಡಿ ಘಾಟ್ : ಕೆ.ಎಸ್.ಆರ್.ಟಿ.ಸಿ, ಮಿನಿ ಬಸ್ ಸಂಚಾರಕ್ಕೆ ಅನುಮತಿ!!

      ಚಿಕ್ಕಮಗಳೂರು:        ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಬರೊಬ್ಬರಿ 5 ತಿಂಗಳ ಬಳಿಕ ಸಂಚಾರಕ್ಕೆ ಅವಕಾಶ ನೀಡಲಾಗಿದೆ.       ಈ ವರ್ಷ ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿದ್ದರಿಂದ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಸುಮಾರು 30 ಕಿಲೋಮೀಟರ್ ವ್ಯಾಪ್ತಿಯ ರಸ್ತೆಯಲ್ಲಿ ಗುಡ್ಡ ಕುಸಿದು ರಸ್ತೆಗೆ ಬಂಡೆಗಳು ಉರುಳಿಬಿದ್ದ ಪರಿಣಾಮ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.       ನಂತರದ ಎರಡು ತಿಂಗಳ ಬಳಿಕ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ರಾತ್ರಿ ವೇಳೆ ಆಂಬುಲೆನ್ಸ್ ಹೊರತುಪಡಿಸಿ ಯಾವುದೇ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿರಲಿಲ್ಲ.       ಇದರಿಂದಾಗಿ ಚಾರ್ಮಾಡಿ ಘಾಟ್ ಮೂಲಕ ಸಂಚರಿಸುವವರಿಗೆ ಸಮಸ್ಯೆಯಾಗಿತ್ತು. ಈಗ ಜಿಲ್ಲಾಡಳಿತ ಪ್ರಯಾಣಿಕರು…

ಮುಂದೆ ಓದಿ...

ಜನವರಿ 8 ರಂದು ಗ್ರಾಮೀಣ ಕರ್ನಾಟಕ ಬಂದ್!

ತುಮಕೂರು :       ಎಲ್ಲಾ ವಿಭಾಗದ ರೈತರು, ಕೃಷಿಕೂಲಿಕಾರರನ್ನು ಸಾಲದಿಂದ ಸಂಪೂರ್ಣ ಮುಕ್ತಗೊಳಿಸುವ ಋಣಮುಕ್ತ ಕಾಯ್ದೆ, ಡಾ.ಸ್ವಾಮಿನಾಥನ್ ವರದಿ ಆಧಾರಿತ ಕನಿಷ್ಠ ಬೆಂಬಲಬೆಲೆ ಖಾತರಿಕಾಯ್ದೆ ಜಾರಿ, ಪ್ರವಾಹಪೀಡಿತ ಜನರಿಗೆ ಸೂಕ್ತಪರಿಹಾರ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 8ರಂದು ಗ್ರಾಮೀಣ ಕರ್ನಾಟಕ ಬಂದ್‍ಗೆ ರೈತ-ಕೃಷಿಕೂಲಿಕಾರರ ಸಂಘಟನೆಗಳು ಕರೆ ನೀಡಿವೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ರಾಜ್ಯ ಕಾರ್ಯದರ್ಶಿ ಜಿ.ಸಿ.ಬೈಯ್ಯಾರೆಡ್ಡಿ ತಿಳಿಸಿದರು.       ತುಮಕೂರಿನ ದ್ವಾರಕ ಹೋಟೆಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ದೇಶದಲ್ಲಿ ಕೃಷಿಬಿಕ್ಕಟ್ಟು ಹೆಚ್ಚಿದ್ದು ರೈತ ಸಮುದಾಯ ಸಂಕಷ್ಟ ಅನುಭವಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ಜನರ ನೆರವಿಗೆ ಬರುತ್ತಿಲ್ಲ. ಕೇಂದ್ರ ಸರ್ಕಾರ ರೈತರ ಸಮಸ್ಯೆಗಳನ್ನು ಬಿಟ್ಟು ಬೇರೆ ವಿಷಯಗಳನ್ನು ಪ್ರಸ್ತಾಪಿಸುತ್ತ ಕಾಲ ಕಳೆಯುತ್ತಿದೆ. ಹೀಗಾಗಿ ರೈತ ಸಮಸ್ಯೆಗಳನ್ನು ನಿವಾರಿಸುವಂತೆ ಗಮನ ಸೆಳೆಯಲು ಬಂದ್…

ಮುಂದೆ ಓದಿ...

ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ !!

ತುರುವೇಕೆರೆ :        ತಾಲೂಕು ಮಾವಿನಹಳ್ಳಿ ಅಂಗನವಾಡಿ ಕಾರ್ಯಕರ್ತೆ ಪದ್ಮ ಅವರ ಮೇಲೆ ಪ್ರಕಾಶ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್ ಸೇರಿದಂತೆ ಗುಂಪೊಂದು ತೀವ್ರ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾರ್ಯಕರ್ತೆ ಪದ್ಮ ಅವರನ್ನು ಅವರ ತೋಟದ ಮನೆಯಲ್ಲಿ ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಪದ್ಮಾ ಅವರ ಕೈಬೆರಳು ಕತ್ತರಿಸಿ ಹೋಗಿವೆ. ತೀವ್ರ ಗಾಯಗೊಂಡಿರುವ ಪದ್ಮಾ ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.       ಅಂಗನವಾಡಿ ಕಾರ್ಯಕರ್ತೆ ಪದ್ಮಾ ಅವರು ಮಾವಿನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಪಕ್ಕದ ಮಾಲೆ ಗ್ರಾಮದ ಪ್ರಕಾಶ್ ಮತ್ತು ಪತ್ನಿಯ ನಡುವೆ ನಡೆದ ಜಗಳದಲ್ಲಿ ಪದ್ಮಾ ಕೌನ್ಸಿಲಿಂಗ್ ನಡೆಸಿದ್ದರು. ಈ ಸಂಬಂಧ ಪ್ರಕಾಶ್ ಕೌನ್ಸಿಲಿಂಗ್‍ನಲ್ಲಿ ತನ್ನ ಪರ ನಿಲ್ಲಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಪದ್ಮಾ ಮೇಲೆ ಒತ್ತಡ ಹೇರಿದ್ದರು. ಹೀಗಾಗಿ ಪ್ರಕಾಶ್ ಮಾತನ್ನು ಪದ್ಮಾ ಕೇಳಿರಲಿಲ್ಲ ಎನ್ನಲಾಗಿದೆ.        ಹೀಗಾಗಿ…

ಮುಂದೆ ಓದಿ...