ಡಿಸಿಯಂದ ಸಖಿ (ಒನ್ ಸ್ಟಾಪ್ ಸೆಂಟರ್) ಕೇಂದ್ರದ ಪರಿಶೀಲನೆ!

 ತುಮಕೂರು:       ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್ ಹಾಗೂ ಕಾನೂನು ಸೇವೆ ಸೇರಿದಂತೆ ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಕೇಂದ್ರ ಸರ್ಕಾರದ ಸಖಿ (ಒನ್ ಸ್ಟಾಪ್ ಸೆಂಟರ್) ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ|| ರಾಕೇಶ್ ಕುಮಾರ್ ಇಂದು ಭೇಟಿ ನೀಡಿ ಕೇಂದ್ರದಲ್ಲಿ ದಾಖಲಾಗಿರುವ ಪ್ರಕರಣಗಳು ಹಾಗೂ ಕೇಂದ್ರದ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು.       ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ತುಮಕೂರು ಸಾರ್ವಜನಿಕ ಆಸ್ಪತ್ರೆಯ ಮೊದಲನೇ ಮಹಡಿಯಲ್ಲಿ ಇಂದಿನಿಂದ ಪ್ರಾರಂಭಿಸಲಾಗಿರುವ ಸಖಿ ಕೇಂದ್ರವನ್ನು ಪರಿಶೀಲಿಸಿದ ನಂತರ ಕೇಂದ್ರದ ಕಟ್ಟಡವು ತುಂಬಾ ಕಿರಿದಾಗಿದ್ದು, ಸಮಾಲೋಚನೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.       ಸಖಿ (ಒನ್ ಸ್ಟಾಪ್ ಸೆಂಟರ್) ಕೇಂದ್ರವನ್ನು ರಾಜ್ಯ ಸರ್ಕಾರದ ವತಿಯಿಂದ 2015-16ನೇ ಸಾಲಿನಿಂದ ವಿಶೇಷ ಚಿಕಿತ್ಸಾ ಘಟಕ…

ಮುಂದೆ ಓದಿ...

ವಿಶ್ವ ಸ್ಮಾರ್ಟ್‍ಸಿಟಿ ಮೇಳದಲ್ಲಿ ಪಾಲ್ಗೊಂಡ ತುಮಕೂರು ಸ್ಮಾರ್ಟ್‍ಸಿಟಿ ತಂಡ

ತುಮಕೂರು:       ಸ್ಪೇನ್ ದೇಶದ ಬಾರ್ಸಿಲೋನಾದಲ್ಲಿ ಇತ್ತೀಚೆಗೆ ಜರುಗಿದದ “9ನೇ ಆವೃತ್ತಿ ಸ್ಮಾರ್ಟ್ ಸಿಟಿ ಎಕ್ಸ್ಪೋ ವಲ್ರ್ಡ್ ಕಾಂಗ್ರೆಸ್ 2019 ಮೇಳ”ದಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ಅಧಿಕಾರಿಗಳು ಪಾಲ್ಗೊಂಡಿದ್ದರು.       ನಗರಗಳನ್ನು ಸಬಲೀಕರಣಗೊಳಿಸಲು ಹಾಗೂ ಪ್ರಪಂಚದ ವಿವಿಧ ನಗರಗಳ ಆವಿಷ್ಕಾರಗಳನ್ನು ಸಂಗ್ರಹಿಸಲು ನವೆಂಬರ್ 19 ರಿಂದ ಮೂರು ದಿನಗಳ ಕಾಲ ಈ ಮೇಳವನ್ನು ಆಯೋಜಿಸಲಾಗಿತ್ತು. ಸಾಮಾಜಿಕ ನಾವೀನ್ಯತೆಯನ್ನು ಉತ್ತೇಜಿಸುವ ಮೂಲಕ ಪಾಲುದಾರಿಕೆಗಳನ್ನು ಸ್ಥಾಪಿಸಲು ಹಾಗೂ ವ್ಯಾಪಾರದ ಅವಕಾಶಗಳನ್ನು ಗುರುತಿಸುವ ಮೂಲಕ ಈವೆಂಟ್ ನಗರ ಮತ್ತು ಆ ನಗರಗಳ ನಾಗರಿಕರಿಗೆ ವಿಶ್ವಾದ್ಯಂತ ಉತ್ತಮ ಭವಿಷ್ಯವನ್ನು ಸೃಷ್ಟಿಸಲು ಈ ಮೇಳ ಪ್ರಯೋಜನವಾಯಿತು.       ಮೇಳದಲ್ಲಿ ಹಲವಾರು ಮುಂಚೂಣಿಯ ದೇಶ/ವಿದೇಶಿ ಬ್ರಾಂಡ್, ಸ್ಮಾರ್ಟ್ ಸಿಟಿ, ಸ್ಮಾರ್ಟ್ ಸಾರಿಗೆ, ಸ್ಮಾರ್ಟ್ ಎನರ್ಜಿ, ಇಂಟರ್ನೆಟ್ ಆಫ್ ಥಿಂಗ್ಸ್(ಐಒಟಿ), ಅತ್ಯಾಧುನಿಕ ಲ್ಯಾಪ್ ಟಾಪ್, ಸ್ಕ್ಯಾನರ್, ಹಾರ್ಡ್…

ಮುಂದೆ ಓದಿ...

ಗರ್ಭಿಣಿ ಸ್ತ್ರೀಯರು, ಮಕ್ಕಳು ತಪ್ಪದೇ ಇಂದ್ರಧನುಷ್ ಲಸಿಕೆ ಪಡೆಯಲು ಸಿಇಓ ಮನವಿ

ತುಮಕೂರು:       ಗರ್ಭಿಣಿ ಸ್ತ್ರೀಯರು ಹಾಗೂ 0-2 ವರ್ಷದೊಳಗಿನ ಮಕ್ಕಳು ತಪ್ಪದೇ ಇಂದ್ರಧನುಷ್ ಲಸಿಕೆಯನ್ನು ಪಡೆಯಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.       ನಗರದ ಮರಳೂರು ದಿಣ್ಣೆ ಅಂಗನವಾಡಿ ಕೇಂದ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಇಂದ್ರಧನುಷ್ ಲಸಿಕಾ ಅಭಿಯಾನದಲ್ಲಿ ಮಕ್ಕಳಿಗೆ ಸಾಂಕೇತಿಕವಾಗಿ ಲಸಿಕೆ ನೀಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.       ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಬಿ.ಆರ್. ಚಂದ್ರಿಕಾ ಮಾತನಾಡಿ, ಇಂದ್ರಧನುಷ್ ಲಸಿಕಾ ಅಭಿಯಾನದಲ್ಲಿ ಲಸಿಕೆ ವಂಚಿತರಾಗಿರುವ, ಬಿಟ್ಟು ಹೋಗಿರುವ, ಅಪಾಯಕಾರಿ ಪ್ರದೇಶದಲ್ಲಿರುವ ಫಲಾನುಭವಿಗಳನ್ನು ಗುರುತಿಸಿದ್ದು, ಲಸಿಕೆಗಳನ್ನು ನೀಡಲು ಕ್ರಮವಹಿಸಲಾಗಿದೆ. ಫಲಾನುಭವಿಗಳು ತಪ್ಪದೆ ಈ ಅಭಿಯಾನದಲ್ಲಿ ಲಸಿಕೆಯನ್ನು ಪಡೆದು ರೋಗಮುಕ್ತರಾಗಬೇಕು ಎಂದು ಮನವಿ ಮಾಡಿದರು.       ಆರ್.ಸಿ.ಹೆಚ್ ಅಧಿಕಾರಿ ಡಾ|| ಕೇಶವರಾಜು ಮಾತನಾಡಿ, ಜಿಲ್ಲೆಯಲ್ಲಿ…

ಮುಂದೆ ಓದಿ...

ಸಮುದಾಯಗಳ ನಡುವೆ ವೈಷಮ್ಯದ ಭಾವನೆ ಬೆಳೆಸುವ ಕೇಬಲ್ ಟಿವಿಗಳ ವಿರುದ್ಧ ಕ್ರಮ!!

 ತುಮಕೂರು:       ಧರ್ಮ, ಜಾತಿ ಅಥವಾ ಸಮುದಾಯಗಳ ನಡುವೆ ವೈಷಮ್ಯದ ಭಾವನೆಗಳನ್ನು ಬೆಳೆಸುವ ಕಾರ್ಯಕ್ರಮಗಳ ಪ್ರಸಾರ ಮಾಡುವ ಕೇಬಲ್ ಟಿವಿಗಳ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ತಿಳಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೇಬಲ್ ಟೆಲಿವಿಷನ್ ನೆಟ್‍ವರ್ಕ್ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಯಾವುದೇ ಕಾರ್ಯಕ್ರಮ, ಸಾರ್ವಜನಿಕ ಶಾಂತಿಗೆ ಭಂಗವುಂಟು ಮಾಡುವ ಸಂಭವವಿದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ಕಾರ್ಯಕ್ರಮಗಳ ಪ್ರಸರಣವನ್ನು ನಿಷೇಧಿಸಬಹುದಾಗಿದೆ ಎಂದರು.       ಸ್ಥಳೀಯ ಮಟ್ಟದಲ್ಲಿ ಕೇಬಲ್ ಟೆಲಿವಿಷನ್ ಚಾನೆಲ್‍ಗಳು ಪ್ರಸಾರ ಮಾಡಿದ ವಿಷಯಗಳ ಬಗ್ಗೆ ಅಧಿಕೃತ ಅಧಿಕಾರಿಗಳು ನಿಗಾವಹಿಸಬೇಕು. ಅಲ್ಲದೇ ಅನಧಿಕೃತ ಅಥವಾ ನಕಲಿ ಚಾನೆಲ್‍ಗಳು ಕಾರ್ಯನಿರ್ವಹಿಸದಂತೆ ಮತ್ತು ಕೇಬಲ್ ಟೆಲಿವಿಷನ್ ಆಪರೇಟರ್‍ಗಳು ನಿಷ್ಪಕ್ಷಪಾತವಾಗಿ ಮತ್ತು ಯಾವುದೇ ಸಮುದಾಯಕ್ಕೆ ಭಂಗ ಉಂಟು ಮಾಡದಂತೆ ನೋಡಿಕೊಳ್ಳಬೇಕು ಎಂದು ಅವರು…

ಮುಂದೆ ಓದಿ...