ಪಶು ವೈದ್ಯೆ ಮೇಲೆ ಅತ್ಯಾಚಾರ : ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ

ತುಮಕೂರು:      ತೆಲಂಗಾಣದಲ್ಲಿ ಪಶುವೈದ್ಯೆ ಡಾ.ಪ್ರಿಯಾಂಕರೆಡ್ಡಿ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ, ಕರ್ನಾಟಕ ಪಶುವೈದ್ಯಕೀಯ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತೆಲಂಗಾಣ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.       ಈ ವೇಳೆ ಮಾತನಾಡಿದ ಕರ್ನಾಟಕ ಪಶುವೈದ್ಯಕೀಯ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಡಾ.ರುದ್ರಪ್ರಸಾದ್ ಅವರು, ಪ್ರಿಯಾಂಕ ರೆಡ್ಡಿ ಮೇಲೆ ನಡೆಸಿರುವ ಅತ್ಯಾಚಾರ ಘಟನೆಯಿಂದಾಗಿ, ಪಶುವೈದ್ಯರು ಮಾನಸಿಕವಾಗಿ ಕುಗ್ಗಿದ್ದಾರೆ. ಹಳ್ಳಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ವಿಶ್ವಾಸದ ಮೇಲೆ ಚಿಕಿತ್ಸೆಗೆಂದು ತೆರಳುತ್ತಾರೆ, ಇಂತಹ ಘಟನೆಯಿಂದಾಗಿ ಹಳ್ಳಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯರು ಭಯಭೀತರಾಗಿದ್ದಾರೆ ಎಂದರು.       ಸಿಸಿ ಕ್ಯಾಮರಾ ಇರುವ ಪ್ರದೇಶದಲ್ಲಿಯೇ ವೈದ್ಯೆಯ ಮೇಲೆ ಇಂತಹ ಕೃತ್ಯ ನೆಡೆದಿರುವುದು ಪ್ರಜ್ಞಾವಂತ ಸಮಾಜ ತಲೆ ತಗ್ಗಿಸುವಂತಹ ಘಟನೆಯಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಇಂತಹ ಘಟನೆಗಳಿಂದ ಪಶುವೈದ್ಯರು ಕಾರ್ಯನಿರ್ವಹಿಸುವುದಕ್ಕೆ…

ಮುಂದೆ ಓದಿ...

ನಗರದಲ್ಲಿ ನಾಲ್ಕು ಕೊಲೆ ಪ್ರಕರಣದಿಂದಾಗಿ ಸಾರ್ವಜನಿಕರಿಗೆ ಆತಂಕ – ಶಾಸಕ

ಗುಬ್ಬಿ:       ಜಿಲ್ಲೆಯಲ್ಲಿ ಹೆಚ್ಚಿದ ಅಪರಾಧ ಕೃತ್ಯಗಳ ಬಗ್ಗೆ ಜನತೆಯಲ್ಲಿ ಆತಂಕ ಮೂಡಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಗಮನಹರಿಸಬೇಕಿದೆ. ಸೂಕ್ಷ್ಮವಾದ ಈ ವಿಚಾರವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಮಾಜಿ ಸಚಿವ ಮತ್ತು ಶಾಸಕ ಎಸ್.ಆರ್.ಶ್ರೀನಿವಾಸ್ ಆಗ್ರಹಿಸಿದರು.       ತಾಲ್ಲೂಕಿನ ಕೆ.ಜಿ.ಟೆಂಪಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ರೈತ ಸಂಘ, ಸ್ಥಳೀಯ ಮುಖಂಡರು, ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ಹಾಗೂ ಲಯನ್ಸ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಆರೋಗ್ಯ ಶಿಬಿರದಲ್ಲಿ ಮಾತನಾಡಿದ ಅವರು ತುಮಕೂರು ನಗರದಲ್ಲಿ ನಾಲ್ಕು ಕೊಲೆ ಪ್ರಕರಣ ಭಯ ಹುಟ್ಟಿಸಿದೆ. ಈ ಜತೆಗೆ ಕಳ್ಳತನ, ಸರಗಳ್ಳತನದಂತಹ ಕೃತ್ಯಗಳು ಈಚೆಗೆ ಜಿಲ್ಲೆಯಲ್ಲಿ ಹೆಚ್ಚಾಗಿದೆ. ಗುಬ್ಬಿ ತಾಲ್ಲೂಕಿನಲ್ಲೂ ಅಪರಾಧ ಕೃತ್ಯಗಳು ಹೆಚ್ಚಾದ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದರು.       ಗುಬ್ಬಿ…

ಮುಂದೆ ಓದಿ...