ಸ್ವಚ್ಛತೆ ಇರುವ ಕಡೆ ನೆಮ್ಮದಿ ಇರುತ್ತದೆ-ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ

ತುಮಕೂರು :       ನಮ್ಮ ಸುತ್ತಮುತ್ತ ಸ್ವಚ್ಛತೆ ಇದ್ದಲ್ಲಿ ಸಾಂಕ್ರಾಮಿಕ ರೋಗಗಳು ಹರಡದೇ ಆರೋಗ್ಯ ಕಾಪಾಡಿಕೊಂಡು ನೆಮ್ಮದಿಯಾಗಿರಬಹುದು ಎಂದು ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು.       ಜಿಲ್ಲಾ ಪಂಚಾಯತ್ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಿಲ್ಲಾ ಬಾಲಭವನದಲ್ಲಿಂದು ಹಮ್ಮಿಕೊಂಡಿದ್ದ “ಸ್ವಚ್ಛತೆಯೇ ಸಮೃದ್ಧಿ ಘನತ್ಯಾಜ್ಯ ನಿರ್ವಹಣೆ” ಬಗ್ಗೆ ಸಮಾಲೋಚನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.        ಗಾಂಧೀಜಿಯವರ ಕನಸು ಸ್ವಚ್ಛಭಾರತ. ಇದಕ್ಕಾಗಿ ಅವರು ನಿರಂತರ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ಸ್ಮರಿಸುತ್ತಾ, ನಾವು ಭಾರತೀಯರು ಖಾಸಗಿಯಾಗಿ ಶುದ್ಧವಾಗಿರುತ್ತೇವೆ ಆದರೆ ಸಾರ್ವಜನಿಕವಾಗಿ ಅಶುದ್ಧವಾಗಿರುತ್ತೇವೆ. ಆದ್ದರಿಂದ ಮನೆಯ ಹಂತದಲ್ಲಿ ತಮ್ಮ ಸ್ವಂತ ಕೆಲಸವಾಗಿ ಕಸವನ್ನು ಒಣ ಹಾಗೂ ಹಸಿ ಕಸವಾಗಿ…

ಮುಂದೆ ಓದಿ...

ಅಂಗನವಾಡಿಗಳಲ್ಲೇ ಎಲ್‍ಕೆಜಿ, ಯುಕೆಜಿ ಆರಂಭಿಸಲು ಆಗ್ರಹ!

ತುಮಕೂರು :      ಅಂಗನವಾಡಿ ಸಂಬಂಧ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ವಾಪಸ್ ಪಡೆಯಬೇಕು. ಅಂಗನವಾಡಿಗಳಲ್ಲೇ ಎಲ್‍ಕೆಜಿ ಮತ್ತು ಯುಕೆಜಿ ಆರಂಭಿಸಬೇಕು ಎಂದು ಒತ್ತಾಯಿಸಿ ಸಹಸ್ರ ಸಹಸ್ರ ಅಂಗನವಾಡಿ ಕಾರ್ಯಕರ್ತೆಯರು ತುಮಕೂರು ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.       ತುಮಕೂರು ನಗರದ ಟೌನ್‍ಹಾಲ್‍ನಲ್ಲಿ ಸಮಾವೇಶಗೊಂಡ ಸುಮಾರು 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತೆಯರು ಬಿಎಚ್.ರಸ್ತೆ ಎಂ.ಜಿ.ರಸ್ತೆ ಮೂಲಕ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು. ರಾಜ್ಯ ಸರ್ಕಾರದ ವಿರುದ್ದ ಗೋµಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.       ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಅಂಗನವಾಡಿ ಕೇಂದ್ರ ವೇಳಾಪಟ್ಟಿಯಲ್ಲಿ ಮೂರು ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮಾತೃಪೂರ್ಣ ಯೋಜನೆ ಯಶಸ್ವಿಗೆ ಹೆಚ್ಚುವರಿ ಸಹಾಯಕಿಯನ್ನು ಕೊಡಬೇಕು.…

ಮುಂದೆ ಓದಿ...