ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಒತ್ತಾಯಿಸಿ ಸಿಪಿಎಂ, ಸಿಐಟಿಯು ಪ್ರತಿಭಟನೆ

ತುಮಕೂರು:       ಕೇಂದ್ರ ಸರ್ಕಾರ ಜನಸಾಮಾನ್ಯರ ಆಹಾರ ಬಳಕೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಈರುಳ್ಳಿ ಬೆಲೆ ನಿಯಂತ್ರಣದಲ್ಲಿ ವಿಫಲವಾಗಿರುವುದನ್ನು ಖಂಡಿಸಿ, ಪಡಿತರ ವ್ಯವಸ್ಥೆಯಡಿ ನಿಯಂತ್ರಿತ ಬೆಲೆಯಲ್ಲಿ ಈರುಳ್ಳಿ ವಿತರಣೆ ಮಾಡುವಂತೆ ಆಗ್ರಹಿಸಿ ದಿನಾಂಕ:09-12-2019ರಂದು ತುಮಕೂರು ನಗರದ ಬಿಎಸ್‍ಎನ್‍ಎಲ್ ಕಚೇರಿ ಎದುರು ಸಿಪಿಎಂ ಮತ್ತು ಸಿಐಟಿಯು ಜಂಟಿಯಾಗಿ ಪ್ರತಿಭಟನೆ ನಡೆಸಿದವು.      ಸಿಪಿಐಎಂ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಈರುಳ್ಳಿ ಬೆಲೆ ಏರಿಕೆಯಿಂದ ರೈತರಿಗೂ ಲಾಭವಿಲ್ಲ. ಬಳಸುವ ಜನಸಾಮಾನ್ಯರಿಗೂ ಸಂಕಷ್ಟ ತಂದಿದೊಡ್ಡಿರುವ ಈರುಳ್ಳಿ ಬೆಲೆ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಈ ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಬೆಲೆ ಏರಿಕೆಯ ವಿರುದ್ಧ ದೊಡ್ಡ ದನಿ ಎತ್ತಿ ಅಧಿಕಾರಕ್ಕೆ ಬಂದ ಬಿಜೆಪಿಯ ದ್ವಿಮುಖ ನೀತಿ ಬಯಲಾಗಿದೆ ಎಂದು ಟೀಕಿಸಿದರು. ಕಾಳದಾಸ್ತಾನುಕೋರರನ್ನು ಮಟ್ಟಹಾಕಿ ಬೆಲೆ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.       ಪ್ರಾಂತ…

ಮುಂದೆ ಓದಿ...

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲೆಗೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ

ತುಮಕೂರು :       ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿದ್ದು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿರುವ ತಲಾ 11 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಕಂಪ್ಯೂಟರ್ ಆಪರೇಟರ್‍ಗಳನ್ನು ಸನ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್ ತಿಳಿಸಿದರು.       ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಲ್ಲಿ ನಡೆದ ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಪ್ರತಿಯೊಬ್ಬ ಗರ್ಭಿಣಿ, ಬಾಣಂತಿಯರ ಮನೆಗೆ ಭೇಟಿ ನೀಡಿ ಈ ಯೋಜನೆಯಡಿ ಸೌಲಭ್ಯ ಕಲ್ಪಿಸಲು ಶ್ರಮಿಸಿರುವುದು ಶ್ಲಾಘನೀಯ ಎಂದರಲ್ಲದೆ ಮುಂದೆಯೂ ಸಹ ಇದೇ ರೀತಿ ಉತ್ತಮ ಸೇವೆ ಸಲ್ಲಿಸಿ ಎಲ್ಲಾ ಅರ್ಹ ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯುವಂತೆ ಮಾಡಬೇಕು ಎಂದು ಕರೆ ನೀಡಿದರು.       ಮಕ್ಕಳ ಕಲ್ಯಾಣ ಸಮಿತಿಯ…

ಮುಂದೆ ಓದಿ...

ತಿಂಗಳೊಳಗಾಗಿ ಪಿಎಫ್, ಇಎಸ್‍ಐ ಹಣ ಖಾತೆಗೆ ಜಮೆ ಮಾಡಲು ಸೂಚನೆ

ತುಮಕೂರು:       ಜಿಲ್ಲೆಯಲ್ಲಿರುವ ಸಫಾಯಿ ಕರ್ಮಚಾರಿಗಳ ಬಾಕಿಯಿರುವ ಪಿಎಫ್, ಇಎಸ್‍ಐ ಹಣವನ್ನು ಒಂದು ತಿಂಗಳೊಳಗಾಗಿ ಪೌರಕಾರ್ಮಿಕರ ಖಾತೆಗೆ ನೇರ ಜಮೆ ಮಾಡುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೆಮಣಿ ಅವರು ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಸಫಾಯಿ ಕರ್ಮಚಾರಿಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಸಫಾಯಿ ಕರ್ಮಚಾರಿಗಳಿಗೆ ಮನೆಗಳ ಸಮಸ್ಯೆಯಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು ನಿವೇಶನವನ್ನು ವಿತರಿಸಲು ಅಗತ್ಯ ಜಮೀನು ಗುರುತಿಸಲಾಗಿದೆ. ಮನೆಗಳನ್ನು ನಿರ್ಮಿಸಿ ವಿತರಿಸಲಾಗುವುದು ಸಫಾಯಿ ಕರ್ಮಚಾರಿಗಳಿಗೆ ಉತ್ತಮ ಜೀವನ ಭದ್ರತೆ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಅದಕ್ಕಾಗಿಯೇ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಇನ್ನಿತರೆ ಸೌಲಭ್ಯಗಳನ್ನು ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.       ಸಫಾಯಿ ಕರ್ಮಚಾರಿಗಳು ನಿರ್ವಹಿಸುವ ಕೆಲಸಕ್ಕೆ ಬೇಕಾಗುವ ಸುರಕ್ಷತಾ ಕಿಟ್, ಸಮವಸ್ತ್ರ,…

ಮುಂದೆ ಓದಿ...