ನಾಗರೀಕ ತಿದ್ದುಪಡಿ ಮಸೂದೆಗೆ ಎಸ್ಡಿಪಿಐ ವಿರೋಧ

 ತುಮಕೂರು:       ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಏಕರೂಪ ನಾಗರಿಕ ಕಾಯ್ದೆಯನ್ನು ವಿರೋಧಿಸಿ ಎಸ್ಡಿಪಿಐ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.       ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮುಫ್ತಿಯಾರ್ ಅವರು, ದೇಶದಲ್ಲಿ ಹಿಂದೂ ಮುಸ್ಲಿಂರು ಶಾಂತಿಯುತವಾಗಿ ಸಹಬಾಳ್ವೆ ನಡೆಸುತ್ತಿರುವಾಗ, ಕೇಂದ್ರ ಸರ್ಕಾರ ವಿಷ ಬೀಜವನ್ನು ಬಿತ್ತಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.       ಕೇಂದ್ರ ಸರ್ಕಾರ ಒಪ್ಪಿರುವ ಕಾಯ್ದೆಯ ಪ್ರಕಾರ ಅಫ್ಘಾನಿಸ್ತಾನ, ಪಾಕಿಸ್ತಾನ ಸೇರಿದಂತೆ ಬೇರೆ ದೇಶಗಳಿಂದ ಭಾರತಕ್ಕೆ ಬಂದ ಮುಸ್ಲಿಂತೇರರಿಗೆ ಪೌರತ್ವ ನೀಡುವುದಾಗಿ ಹೇಳಿದ್ದು, ಭಾರತದಲ್ಲಿ ಮುಸ್ಲಿಂರನ್ನು ವಿಭಜಿಸಲು ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದರು.       ಭಾರತ ಸ್ವಾತಂತ್ರ ಹೋರಾಟದಲ್ಲಿ ಭಾಗಿಯಾಗಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮುಸ್ಲಿಂ ಸಮುದಾಯವನ್ನು ಕಡೆಗಣಿಸಿ, ಕೀಳು ಭಾವನೆಯಿಂದ ಮುಸ್ಲಿಂರಿಗೆ ಪೌರತ್ವವನ್ನು ನೀಡಲು ಒಪ್ಪದ ಕರಾಳ ಕಾನೂನು ಜಾರಿಗೆ ತಂದಿದೆ…

ಮುಂದೆ ಓದಿ...

ಜಿಎಸ್‍ಟಿ ನಿಯಮ ಸರಳೀಕರಣಕ್ಕೆ ಆಗ್ರಹ!

ತುಮಕೂರು :       ಜಿಎಸ್‍ಟಿ ಕಾಯ್ದೆಯ ನಿಯಮಗಳನ್ನು ಪದೆಪದೆ ತಿದ್ದುಪಡಿ ಮಾಡಿ ಗೊಂದಲ ಉಂಟುಮಾಡಲಾಗುತ್ತದೆ, ಕಾಯ್ದೆಯ 36(4) ನಿಯಮ ರದ್ದುಪಡಿಸಬೇಕು ಎಂದು ಒತ್ತಾಯಿಸಿ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಮುಖಂಡರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.       ಕೇಂದ್ರ ಸರಕು ಮತ್ತು ಸೇವಾ ಕಾಯ್ದೆ ಅನ್ವಯ ಇತ್ತೀಚೆಗೆ ಹೊರಡಿಸಿರುವ ಅಧಿಸೂಚನೆಯಂತೆ ಪ್ರತಿ ತಿಂಗಳು ಜಿಎಸ್‍ಟಿ ರಿಟರ್ನ್ ಸಲ್ಲಿಸಲು ಕಷ್ಟವಾಗುತ್ತಿದೆ ಎಂದು ಹೇಳಿ, ಜಿಎಸ್‍ಟಿ ಕಾಯ್ದೆ ನಿಯಮಗಳನ್ನು ಸರಳೀಕರಣಗೊಳಿಸಬೇಕು ಎಂದು ಒತ್ತಾಯಿಸಿದರು.       ಬಿಜಿಎಸ್ ವೃತ್ತದಲ್ಲಿ ಜಮಾವಣೆಗೊಂಡ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದರು. ಡಿಸಿ ಕಚೇರಿ ಬಳಿ ಕೆಲ ಕಾಲ ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರದ ಹಣಕಾಸು ಸಚಿವರಿಗೆ…

ಮುಂದೆ ಓದಿ...

ದಬ್ಬಾಳಿಕೆ, ದಮನಕಾರಿ ನೀತಿ ಸಲ್ಲದು-ಕೆ.ದೊರೈರಾಜ್

 ತುಮಕೂರು:       ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದ ರಾಜ್ಯ ಸರ್ಕಾರ ದಬ್ಬಾಳಿಕೆ, ದಮನಕಾರಿ ನೀತಿ ಅನುಸರಿಸುತ್ತಿರುವುದು ಬಿಡಬೇಕು ಎಂದು ಪಿಯುಜಿಎಲ್ ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ.ದೊರೈರಾಜ್ ಹೇಳಿದ್ದಾರೆ.       ತುಮಕೂರಿನ ಅಮಾನಿಕೆರೆಯಲ್ಲಿ ಅಂಗನವಾಡಿ ನೌಕರರ ಸಂಘ ಸಿಐಟಿಉ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಯ ಭಾಗವಾಗಿ ನಡೆಸುತ್ತಿರುವ ಧರಣಿನಿರತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರು 1975ರಿಂದ ಮಕ್ಕಳ ಪೋಷಣೆ ಮತ್ತು ಕಲಿಕೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಬೇಡಿಕೆಗಳು ಸರಿಯಾಗಿವೆ. ಹಾಗಾಗಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.       ಮಾತೃದೇವೋಭವ ಎನ್ನುವವರು ಅಂಗನವಾಡಿ ಕಾರ್ಯಕರ್ತೆಯರನ್ನು ಕಡೆಗಣಿಸಿದ್ದಾರೆ. ಅಂಗನವಾಡಿಗಳನ್ನ ರಾಜ್ಯ ಸರ್ಕಾರ ದಮನ ಮಾಡುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು. ಅಂಗನವಾಡಿಗಳನ್ನು ಬಲಿಷ್ಠಗೊಳಿಸಲು ಪ್ರಯತ್ನಿಸಬೇಕು. ಅಂಗನವಾಡಿಗಳನ್ನು ಮುಚ್ಚಿದರೆ ಲಕ್ಷಾಂತರ ಮಂದಿಯ ಬದುಕು ಬೀದಿಗೆ ಬೀಳುತ್ತದೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು…

ಮುಂದೆ ಓದಿ...