ಸಿದ್ದಗಂಗಾ ಮಠಕ್ಕೆ ಮೈಸೂರು ರಾಜವಂಶಸ್ಥರ ಭೇಟಿ!!

ತುಮಕೂರು :      ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಮೈಸೂರು ಸಂಸ್ಥಾನದ ಕೊನೆಯ ರಾಜ ಜಯಚಾಮರಾಜೇಂದ್ರ ಒಡೆಯರ್ ಜನ್ಮಶತಾಬ್ದಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮೈಸೂರು ಸಂಸ್ಥಾನದ ರಾಜವಂಶಸ್ಥರು ಜಯಚಾಮರಾಜೇಂದ್ರ ಒಡೆಯರ್ ಅವರ ಅಳಿಯ ರ್. ರಾಜಚಂದ್ರ, ಒಡೆಯರ್ ಮೊಮ್ಮಗ ವರ್ಚಸ್ವಿ ಎಂ.ಆರ್. ಅರಸು ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.       ನಂತರ ಧ್ಯಾನ ಮಂದಿರಲದಲ್ಲಿ ಸ್ವಲ್ಪ ಸಮಯ ಧ್ಯಾನ ಮಾಡಿದರು. ಶಿವಕುಮಾರ ಸ್ವಾಮೀಜಿ ವಾಸಿಸುತ್ತಿದ್?ದ ಹಳೆಯ ಮಠಕ್ಕೆ ಭೇಟಿ ನೀಡಿ ಪೂಜಾ ಸ್ಥಳ, ಆಸೀನ ಸ್ಥಳಗಳನ್ನು ವೀಕ್ಷಿಸಿದರು. ನಂತರ ಸಿದ್ದಗಂಗಾ ಮಠದ ದಾಸೋಹ ಮಂದಿರ, ಉಗ್ರಾಣ ಸ್ಥಳ, ?ಡಿಗೆ ಮನೆ ಮೊದಲಾದ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.       ಶ್ರೀಮಠದಲ್ಲಿ ಪ್ರಸಾದ ಸ್ವೀಕರಿಸಿದ ಒಡೆಯರ್ ಅವರ ಅಳಿಯ…

ಮುಂದೆ ಓದಿ...

ಸಿದ್ದರಾಮಯ್ಯ ರಾಜೀನಾಮೆ ವಾಪಸ್‍ಗೆ ಒತ್ತಾಯ!!

ತುಮಕೂರು :       ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ವಾಪಾಸ್ ಪಡೆಯಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹ ವ್ಯಕ್ತಪಡಿಸಿದರು.       ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆಯನ್ನು ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಲಕ್ಕಪ್ಪ ಅವರು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಅವರನ್ನು ಹೊಣೆ ಮಾಡಿರುವುದು ಸರಿಯಲ್ಲ, ಅವರು ರಾಜೀನಾಮೆ ಹಿಂಪಡೆಯುವ ಮೂಲಕ ಅವರನ್ನು ಮುಂದುವರೆಸುವಂತೆ ಒತ್ತಾಯಿಸಿದರು.       ಕಾಂಗ್ರೆಸ್ ಪಕ್ಷವನ್ನು ಉಳಿಸಬೇಕೆಂದರೆ ಸಿದ್ದರಾಮಯ್ಯ ಅವರನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕು, ಏಕಾಂಗಿ ಪಕ್ಷದ ಪರ ಪ್ರಚಾರ ಮಾಡಿದ ಸಿದ್ದರಾಮಯ್ಯ ಅವರಿಗೆ ಮುಖಂಡರ ಅಸಹಕಾರವೇ ಕಾರಣ ಎಂದರು.       ಪ್ರಚಾರದಲ್ಲಿ ಭಾಗವಹಿಸದ ಮುಖಂಡರ ಮೇಲೆ ಪಕ್ಷ ಶಿಸ್ತುಕ್ರಮ ಜರುಗಿಸಬೇಕೆ ಹೊರತು, ಪಕ್ಷದ ಗೆಲುವಿಗಾಗಿ…

ಮುಂದೆ ಓದಿ...

ಚಿಕ್ಕನಾಯಕನಹಳ್ಳಿ : ಜಾತ್ರಾ ಮಹೋತ್ಸವ ಸಂಭ್ರಮದಲ್ಲಿ ಸಿಎಂ ಭಾಗಿ!!

ತುಮಕೂರು :       `ಉಪಚುನಾವಣೆಯಲ್ಲಿ ಗೆದ್ದಿರುವವರಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದನ್ನು ಕೇಂದ್ರದ ನಾಯಕರು ನಿರ್ಧರಿಸುತ್ತಾರೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.       ಚಿಕ್ಕನಾಯಕನಹಳ್ಳಿಯ ಕುಪ್ಪೂರು ಗದ್ದುಗೆ ಮಠದಲ್ಲಿ ನಡೆಯುತ್ತಿರುವ ಕುಪ್ಪೂರೊಡೆಯನ ಜಾತ್ರಾ ಮಹೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.       `ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ 12ರಲ್ಲಿ ಬಿಜೆಪಿಗೆ ಗೆಲುವಾಗಿದೆ. ಗೆಲ್ಲದೆ ಇದ್ದಿದ್ದರೆ, ಇಷ್ಟು ಸಮಾಧಾನದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇನ್ನು ಮೂರುವರೆ ವರ್ಷ ಯಾವುದೇ ತಂಟೆ ತಕರಾರು ಇಲ್ಲದೆ ಕೆಲಸ ಮಾಡಬಹುದು’ ಎಂದು ಆಶಯ ವ್ಯಕ್ತಪಡಿಸಿದರು.        `ಫೆಬ್ರುವರಿಯಲ್ಲಿ ಮಂಡಿಸುವ ಬಜೆಟ್‍ನಲ್ಲಿ ಉತ್ತಮ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಉದ್ದೇಶವಿದೆ. ರೈತರ ಸಂಕಷ್ಟಗಳನ್ನು ಬಗೆಹರಿಸುವುದಕ್ಕೆ ಆದ್ಯತೆ ನೀಡುತ್ತೇನೆ. ಜಾತಿ ಮತಗಳ ಬೇಧವಿಲ್ಲದೆ ಸೇವೆ ನೀಡುತ್ತಿರುವ ಸೇವೆ ಸಲ್ಲಿಸುತ್ತಿರುವ…

ಮುಂದೆ ಓದಿ...