ಸಹಕಾರ ರಂಗವನ್ನು ಜಿಎಸ್ಟಿ, ಟಿಡಿಎಸ್ ನಿಂದ ಕೈ ಬಿಡಲು ಒತ್ತಾಯ!

ತುಮಕೂರು:       ಕೇಂದ್ರ ಸರ್ಕಾರ ಸಹಕಾರ ಸಂಸ್ಥೆಗಳ ಮೇಲೆ ಆದಾಯ ತೆರಿಗೆ, ಟಿಡಿಎಸ್ ಹಾಗೂ ಜಿಎಸ್ಟಿ ವಿಧಿಸಿರುವುದನ್ನು ಖಂಡಿಸಿ ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಸೊಸೈಟೀಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.       ಈ ವೇಳೆ ಮಾತನಾಡಿದ ರಾಜ್ಯ ಸಂಚಾಲಕ ಕೆ.ಎನ್.ಮಂಜುನಾಥ್ ಅವರು, ದೇಶದ ಕೃಷಿಕರು, ಮಧ್ಯಮ ವರ್ಗದವರಿಗೆ ಸೇವೆ ನೀಡುವ ಮೂಲಕ ದೇಶದ ಆರ್ಥಿಕ ವ್ಯವಸ್ಥೆಗೆ ಅತ್ಯಮೂಲ್ಯ ಕೊಡುಗೆಯನ್ನು ನೀಡಿರುವ ಸಹಕಾರಿ ಕ್ಷೇತ್ರದ ಮೇಲೆ ಕೇಂದ್ರ ಸರ್ಕಾರ ಕ್ರಮ ಆಕ್ರಮಣಕಾರಿಯಾಗಿದೆ ಎಂದರು.       ಸಹಕಾರ ಕ್ಷೇತ್ರದ ಮೇಲೆ ನಿಯಂತ್ರಣವನ್ನು ಹಾಕುವ ಮೂಲಕ ಕ್ಷೇತ್ರದ ಬೆಳವಣಿಗೆ ಕುಂಠಿತವಾಗುತ್ತಿದ್ದು, ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರದ ಮೇಲೆ ಪ್ರಹಾರ ಮಾಡುವುದನ್ನು ನಿಲ್ಲಿಸಬೇಕು, ಕೇಂದ್ರ ಸರ್ಕಾರದ ಈ ನೀತಿಯಿಂದ ರಾಷ್ಟ್ರದಲ್ಲಿರುವ 52 ಸಾವಿರ ಸಹಕಾರ ಸಂಸ್ಥೆಗಳ ಬೆಳವಣಿಗೆಗೆ ತೊಂದರೆಯಾಗಲಿದೆ ಎಂದು…

ಮುಂದೆ ಓದಿ...

ಡಿ.14 – 15 : ಗೂಳೂರು ಗಣೇಶ ವಿಸರ್ಜನಾ ಮಹೋತ್ಸವ

ತುಮಕೂರು:       ಮಳೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಇತಿಹಾಸ ಪ್ರಸಿದ್ದ ಗೂಳೂರು ಗಣೇಶ ವಿಸರ್ಜನಾ ಮಹೋತ್ಸವ ಡಿ. 14 ಶನಿವಾರ ಮತ್ತು 15 ಭಾನುವಾರ ನಡೆಯಲಿದೆ.       ಕಳೆದ ಬಲಿಪಾಢ್ಯಮಿಯಂದು ಇತಿಹಾಸ ಪ್ರಸಿದ್ದ ಗೂಳೂರು ಗಣೇಶನನ್ನು ಪ್ರತಿಷ್ಠಾಪಿಸಿ ಅಂದಿನಿಂದ ಪ್ರತಿನಿತ್ಯ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತಿದ್ದು, 18 ಕೋಮಿನ ಜನರ ಸಹಕಾರದೊಂದಿಗೆ ಗಣೇಶಮೂರ್ತಿ ವಿಸರ್ಜನಾ ಮಹೋತ್ಸವವನ್ನು ಡಿ. 14 ಮತ್ತು 15 ರಂದು ನಡೆಸಲು ತೀರ್ಮಾನಿಸಿದ್ದಾರೆ.       ಮಳೆ ಹಿನ್ನೆಲೆಯಲ್ಲಿ ದೇವಾಲಯದ ಗೋಪುರದ ಅಡಿ ಕೂರಿಸಲಾಗಿರುವ ಗಣೇಶಮೂರ್ತಿಗೆ ಕಿರೀಟ ಧಾರಣೆ, ಪುಣ್ಯ ಮಾಡಿ ಭಕ್ತಾದಿಗಳಿಗೆ ನೆರವೇರಿಸಿ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲು ಗ್ರಾಮಸ್ಥರು ನಿರ್ಧಾರ ಕೈಗೊಂಡಿದ್ದಾರೆ.       ಗ್ರಾಮಸ್ಥರ ತೀರ್ಮಾನದಂತೆ ಡಿ. 14 ರಂದು ರಾತ್ರಿ ಗಣೇಶಮೂರ್ತಿಯು ದೇವಾಲಯದ ಗೋಪುರದಿಂದ 18 ಕೋಮಿನ ಜನರ ಸಹಕಾರದೊಂದಿಗೆ ರಥಕ್ಕೆ ಕೂರಿಸಿ…

ಮುಂದೆ ಓದಿ...

ತುಮಕೂರು : ಎಸಿಬಿ ದಾಳಿ ; ೯ ಲಕ್ಷ ಮೌಲ್ಯದ ಕಲ್ಲು ಜಪ್ತಿ

ತುಮಕೂರು :        ಪರವಾನಗಿ ನವೀಕರಣ ಮಾಡಿಸಿಕೊಳ್ಳದೇ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.        ತಾಲ್ಲೂಕಿನ ಕೋರ ಹೋಬಳಿಯ ನರಸೀಪುರ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರಾದ ಬಿ.ಉಮಾಶಂಕರ್ ರವರು ಮಾಹಿತಿ ಸಂಗ್ರಹಿಸಿ ಬೆಳಧರ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಮೋಹನ್ ಎಂಬುವವರು ಕಲ್ಲು ಗಣಿಗಾರಿಕೆ ನಡೆಸಲು 2011 ರಿಂದ 2016 ರವರೆಗೂ ಪರವಾನಗಿ ಪಡೆದಿದ್ದು, 2016 ರ ನಂತರ ಪರವಾನಗಿ ಅವಧಿ ಮುಕ್ತಾಯವಾಗಿದ್ದರೂ ಪರವಾನಗಿ ನವೀಕರಣ ಮಾಡಿಸಿಕೊಳ್ಳದೇ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಾ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವುದನ್ನು ಪತ್ತೆ ಹಚ್ಚಲಾಗಿತ್ತು.       ಇಂದು ಬೆಳಗ್ಗೆ…

ಮುಂದೆ ಓದಿ...