ಶೀಘ್ರದಲ್ಲೇ KSRTC ಬಸ್ ನಿಲ್ದಾಣ ತಾತ್ಕಾಲಿಕ ನಿಲ್ದಾಣಕ್ಕೆ ಸ್ಥಳಾಂತರ!

ತುಮಕೂರು :       ತಾತ್ಕಾಲಿಕ ಬಸ್ ನಿಲ್ದಾಣದ ಕಾಮಗಾರಿ ಕೊನೆಯ ಹಂತದಲ್ಲಿದ್ದು ಶೀಘ್ರದಲ್ಲಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಸ್ಥಳಾಂತರಿಸಲಾಗುವುದು ಎಂದು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ತಿಳಿಸಿದರು.       ತಾತ್ಕಾಲಿಕ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣವನ್ನು ಸಂಪೂರ್ಣವಾಗಿ ತೆರವುಗೊಳಿಸಿ 5 ಮಹಡಿಗಳುಳ್ಳ ಇಂಟಿಗ್ರೇಟೆಡ್ ಬಸ್ ನಿಲ್ದಾಣ ಮಾಡಲಾಗುವುದು. ನೂತನ ಸ್ಮಾರ್ಟ್ ಬಸ್ ನಿಲ್ದಾಣವಾಗುವವರೆಗೂ ಪರ್ಯಾಯವಾಗಿ ಕೆಎಸ್‍ಆರ್‍ಟಿಸಿ ಡಿಪೋದಲ್ಲಿ ತಾತ್ಕಾಲಿಕ ಬಸ್‍ನಿಲ್ದಾಣ ಮಾಡಲು ಕಾಮಗಾರಿ ನಡೆಸುತ್ತಿದ್ದು, ಸದರಿ ಕಾಮಗಾರಿ ಕೊನೆಯ ಹಂತದಲ್ಲಿದೆ ಎಂದರು.       ತಾತ್ಕಾಲಿಕ ಬಸ್ ನಿಲ್ದಾಣ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕಿಂತ ಕಡಿಮೆ ಸ್ಥಳಾವಕಾಶ ಹೊಂದಿದ್ದು, ಸಾರ್ವಜನಿಕರು ಸ್ಮಾರ್ಟ್ ಬಸ್ ನಿಲ್ದಾಣವಾಗುವರೆಗೂ ಸಹಕರಿಸಬೇಕು ಎಂದರಲ್ಲದೇ ಅಧಿಕಾರಿಗಳು ಮತ್ತು ಸ್ಮಾರ್ಟ್ ಸಿಟಿಯವರ ಸಹಕಾರದಲ್ಲಿ ಕಾಮಗಾರಿಗಳು ತುರ್ತಾಗಿ ನಡೆಯುತ್ತಿದೆ. ಬಸ್‍ಗಳ ಸಂಚಾರ ಮಾರ್ಗದ ಬಗ್ಗೆ…

ಮುಂದೆ ಓದಿ...

ಸಿನಿಮೀಯ ರೀತಿಯಲ್ಲಿ ಯುವಕನ ಬರ್ಬರ ಹತ್ಯೆ

ಕೊರಟಗೆರೆ :       ಪ್ರೀತಿಸಿದ ಯುವತಿಯ ಜೊತೆ ಯುವಕ ತನ್ನ ಸ್ವಗ್ರಾಮಕ್ಕೆ ಬಂದು ಹಿಂದಿರುಗುವ ವೇಳೆ ಪಾವಗಡ-ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಕಾರನ್ನು ಅಡ್ಡಗಟ್ಟಿ ಕಾರಿನಿಂದ ಯುವಕನನ್ನು ಹೊರಗೆಳೆದ 6ಜನ ದುಷ್ಕರ್ಮಿಗಳ ತಂಡ ತಲೆ ಮತ್ತು ಕುತ್ತಿಗೆಗೆ ಲಾಂಗು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.       ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂ ಜಿ.ನಾಗೇನಹಳ್ಳಿ ಸಮೀಪದ ರಾಜ್ಯ ಹೆದ್ದಾರಿಯ ಮೂಲಕ ಬೆಂಗಳೂರಿಗೆ ತೆರಳುವ ವೇಳೆ ಮಾರ್ಗಮಧ್ಯೆ ಪಾವಗಡದಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದ 6ಜನ ದುಷ್ಕರ್ಮಿಗಳ ತಂಡ ಯುವಕನ ಕಾರನ್ನು ಅಡ್ಡಗಟ್ಟಿ ಕಾರಿನಿಂದ ಶ್ರೀನಿವಾಸ್‍ನನ್ನು ಹೊರಗೆಳೆದು ತಲೆ ಮತ್ತು ಕುತ್ತಿಗೆಗೆ ಲಾಂಗಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ.       ಬೆಂಗಳೂರು ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಗಲುಕುಂಟೆ ನಿವಾಸಿ ಶ್ರೀನಿವಾಸ್(25) ಹತ್ಯೆಯಾದ…

ಮುಂದೆ ಓದಿ...

ಮಹಾನಗರಪಾಲಿಕೆಯ ಪಟ್ಟಣ ವ್ಯಾಪಾರ ಸಮಿತಿ ಚುನಾವಣೆ ಮುಂದೂಡಿಕೆ

 ತುಮಕೂರು:       ತುಮಕೂರು ಮಹಾನಗರಪಾಲಿಕೆಯಲ್ಲಿನ ಪಟ್ಟಣ ವ್ಯಾಪಾರ ಸಮಿತಿಗೆ ಅಲ್ಪಸಂಖ್ಯಾತ ಮೀಸಲಾತಿ ಸ್ಥಾನಕ್ಕೆ ಡಿಸೆಂಬರ್ 21ರಂದು ನಡೆಯಬೇಕಿದ್ದ ಚುನಾವಣೆಯನ್ನು ಡಿಸೆಂಬರ್ 26ರಂದು ಮುಂದೂಡಲಾಗಿದೆ ಎಂದು ಪಟ್ಟಣ ವ್ಯಾಪಾರ ಸಮಿತಿ ಚುನಾವಣಾಧಿಕಾರಿ ತಿಳಿಸಿದ್ದಾರೆ.       ಜಿಲ್ಲಾದ್ಯಂತ ಡಿಸೆಂಬರ್ 18ರ ರಾತ್ರಿ 8 ಗಂಟೆಯಿಂದ 21ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಸದರಿ ಚುನಾವಣೆಯು ಡಿಸೆಂಬರ್ 26 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಹಾನಗರಪಾಲಿಕೆ ಆವರಣದ ನಗರ ವಸತಿ ರಹಿತರ ಆಶ್ರಯ ಕೇಂದ್ರ ಹಾಗೂ ನಲ್ಮ್ ಯೋಜನೆಯ ಕಚೇರಿಯಲ್ಲಿ ನಡೆಯಲಿದೆ.       ಪಟ್ಟಣ ವ್ಯಾಪಾರ ಸಮಿತಿ ಚುನಾವಣೆಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತ ಮೀಸಲಾತಿಯ 01 ಸ್ಥಾನಕ್ಕೆ ಶಾಂತಿನಗರದ ಅಭ್ಯರ್ಥಿ ಬಾಬಾ ಬಿನ್ ಷೇಕ್‍ಅಮೀರ್(ಮಾರಾಟ ನೋಂದಣಿ ಸಂಖ್ಯೆ – 1487), ಜಿ.ಸಿ.ಕಾಲೋನಿಯ ಮಹಮ್ಮದ್ ರಫೀಕ್ ಬಿನ್ ಅಬ್ದುಲ್‍ಕುದ್ದೂಸ್(ಮಾರಾಟ ನೋಂದಣಿ…

ಮುಂದೆ ಓದಿ...