ತುಮಕೂರಿನಲ್ಲಿ ಯಶಸ್ವಿಯಾಗಿ ನಡೆದ ರಾಜ್ಯಮಟ್ಟದ ದೇಹದಾಢ್ಯ ಸ್ಪರ್ಧೆ

ತುಮಕೂರು :       ನಗರದ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಡಾ.ಶ್ರೀಶಿವಕುಮಾರಸ್ವಾಮೀಜಿ ಸಭಾಂಗಣದಲ್ಲಿ ಕರ್ನಾಟಕ ಫಿಟ್‍ನೆಸ್ ಅಂಡ್ ಬಾಡಿ ಬಿಲ್ಡರ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ದೇಹದಾಢ್ಯ ಸ್ಪರ್ಧೆ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮಗಳು ಜರುಗಿದವು.      ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 150ಕ್ಕೂ ಹೆಚ್ಚು ದೇಹದಾಢ್ಯಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆರು ವಿಭಾಗಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆಯುವ ದೇಹದಾಢ್ಯ ಪಟುವನ್ನು ಮುಂದಿನ ತಿಂಗಳು ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಅವಕಾಶ ದೊರೆಯಲಿದೆ.      ಪ್ರಮುಖವಾಗಿ ಮೆನ್ ಫಿಸಿಕ್,ಹುಮೆನ್ ಫಿಸಿಕ್,ಕರ್ನಾಟಕ ಉದಯ,ಕರ್ನಾಟಕ ಕುಮಾರ್,ಕರ್ನಾಟಕ ಕಿಶೋರ್, ಕರ್ನಾಟಕ ಕೇಸರಿ ವಿಭಾಗಗಳಲ್ಲಿ ತಲಾ ನಾಲ್ಕು ಸುತ್ತುಗಳಿದ್ದು,ಪ್ರತಿ ಸುತ್ತಿನಲ್ಲಿ ಮೊದಲು ಐದು ಸ್ಥಾನ ಪಡೆಯುವ ಕ್ರೀಡಾಪಟುಗಳಲ್ಲಿ ಅತಿ ಹೆಚ್ಚು ಅಂಕ ಪಡೆಯುವ ದೇಹಾದಾಢ್ಯ ಪಟುಗಳಿಗೆ ಕರ್ನಾಟಕ ಉದಯ…

ಮುಂದೆ ಓದಿ...

ಜ.3 ರಂದು ತುಮಕೂರು ನಗರಕ್ಕೆ ಪ್ರಧಾನಿ ಆಗಮನ

ತುಮಕೂರು :        ಮುಂಬರುವ 2020ರ ಜನವರಿ 3ರಂದು ತುಮಕೂರು ನಗರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.       ಈ ಸಂಬಂಧ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಅವರು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.       ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ತುಮಕೂರು ನಗರದಲ್ಲಿ ಜನವರಿ 3ರಂದು ಪ್ರಧಾನ ಮಂತ್ರಿಗಳ ರಾಷ್ಟ್ರ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಕಾರ್ಯಕ್ರಮದಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. ಇಂತಹ ಕಾರ್ಯಕ್ರಮವನ್ನು ಯಾವುದೇ ಲೋಪದೋಷವಿಲ್ಲದೆ ಯಶಸ್ವಿಯಾಗುವಂತೆ ಎಲ್ಲರೂ ನೋಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.…

ಮುಂದೆ ಓದಿ...

ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ-ಡಿಸಿ

ತುಮಕೂರು :       ಜಿಲ್ಲೆಯಲ್ಲಿ ಈಗಾಗಲೇ ಇರುವ 7 ಖರೀದಿ ಕೇಂದ್ರಗಳಲ್ಲಿ ಕನಿಷ್ಟ ಬೆಂಬಲ ಬೆಲೆ (ಎಂಎಸ್‍ಪಿ) ಯೋಜನೆಯಡಿ ರಾಗಿಯನ್ನು ಖರೀದಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ನಡೆದ 2019-20ನೇ ಸಾಲಿನ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಗಿ ಖರೀದಿ ಕೇಂದ್ರ ತೆರೆಯುವ ಬಗ್ಗೆ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿರುವ ಗುಬ್ಬಿ, ಚಿಕ್ಕನಾಯಕನಹಳ್ಳಿ, ಕುಣಿಗಲ್, ತಿಪಟೂರು, ತುಮಕೂರು, ತುರುವೇಕೆರೆ, ಹುಳಿಯಾರ್ ಖರೀದಿ ಕೇಂದ್ರಗಳಲ್ಲಿ ಈ ಬಾರಿಯೂ ಖರೀದಿ ಪ್ರಕ್ರಿಯೆಯನ್ನು ಮುಂದುವರೆಸುವುದು ಸೂಕ್ತ ಎಂದು ಅವರು ತಿಳಿಸಿದರು.       2019-20ನೇ ಸಾಲಿನ ಎಂಎಸ್‍ಪಿ ಯೋಜನೆಯಡಿ ರಾಗಿ ಖರೀದಿ ಬೆಲೆಯು ಕ್ವಿಂಟಾಲ್‍ಗೆ 3150 ರೂ.ಗಳಾಗಿದ್ದು, ಜನವರಿ ಎರಡನೇ…

ಮುಂದೆ ಓದಿ...