ಚಾರ್ಮಾಡಿ ಘಾಟ್ : ಕೆ.ಎಸ್.ಆರ್.ಟಿ.ಸಿ, ಮಿನಿ ಬಸ್ ಸಂಚಾರಕ್ಕೆ ಅನುಮತಿ!!

      ಚಿಕ್ಕಮಗಳೂರು:        ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಬರೊಬ್ಬರಿ 5 ತಿಂಗಳ ಬಳಿಕ ಸಂಚಾರಕ್ಕೆ ಅವಕಾಶ ನೀಡಲಾಗಿದೆ.       ಈ ವರ್ಷ ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿದ್ದರಿಂದ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಸುಮಾರು 30 ಕಿಲೋಮೀಟರ್ ವ್ಯಾಪ್ತಿಯ ರಸ್ತೆಯಲ್ಲಿ ಗುಡ್ಡ ಕುಸಿದು ರಸ್ತೆಗೆ ಬಂಡೆಗಳು ಉರುಳಿಬಿದ್ದ ಪರಿಣಾಮ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.       ನಂತರದ ಎರಡು ತಿಂಗಳ ಬಳಿಕ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ರಾತ್ರಿ ವೇಳೆ ಆಂಬುಲೆನ್ಸ್ ಹೊರತುಪಡಿಸಿ ಯಾವುದೇ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿರಲಿಲ್ಲ.       ಇದರಿಂದಾಗಿ ಚಾರ್ಮಾಡಿ ಘಾಟ್ ಮೂಲಕ ಸಂಚರಿಸುವವರಿಗೆ ಸಮಸ್ಯೆಯಾಗಿತ್ತು. ಈಗ ಜಿಲ್ಲಾಡಳಿತ ಪ್ರಯಾಣಿಕರು…

ಮುಂದೆ ಓದಿ...

ಜನವರಿ 8 ರಂದು ಗ್ರಾಮೀಣ ಕರ್ನಾಟಕ ಬಂದ್!

ತುಮಕೂರು :       ಎಲ್ಲಾ ವಿಭಾಗದ ರೈತರು, ಕೃಷಿಕೂಲಿಕಾರರನ್ನು ಸಾಲದಿಂದ ಸಂಪೂರ್ಣ ಮುಕ್ತಗೊಳಿಸುವ ಋಣಮುಕ್ತ ಕಾಯ್ದೆ, ಡಾ.ಸ್ವಾಮಿನಾಥನ್ ವರದಿ ಆಧಾರಿತ ಕನಿಷ್ಠ ಬೆಂಬಲಬೆಲೆ ಖಾತರಿಕಾಯ್ದೆ ಜಾರಿ, ಪ್ರವಾಹಪೀಡಿತ ಜನರಿಗೆ ಸೂಕ್ತಪರಿಹಾರ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 8ರಂದು ಗ್ರಾಮೀಣ ಕರ್ನಾಟಕ ಬಂದ್‍ಗೆ ರೈತ-ಕೃಷಿಕೂಲಿಕಾರರ ಸಂಘಟನೆಗಳು ಕರೆ ನೀಡಿವೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ರಾಜ್ಯ ಕಾರ್ಯದರ್ಶಿ ಜಿ.ಸಿ.ಬೈಯ್ಯಾರೆಡ್ಡಿ ತಿಳಿಸಿದರು.       ತುಮಕೂರಿನ ದ್ವಾರಕ ಹೋಟೆಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ದೇಶದಲ್ಲಿ ಕೃಷಿಬಿಕ್ಕಟ್ಟು ಹೆಚ್ಚಿದ್ದು ರೈತ ಸಮುದಾಯ ಸಂಕಷ್ಟ ಅನುಭವಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ಜನರ ನೆರವಿಗೆ ಬರುತ್ತಿಲ್ಲ. ಕೇಂದ್ರ ಸರ್ಕಾರ ರೈತರ ಸಮಸ್ಯೆಗಳನ್ನು ಬಿಟ್ಟು ಬೇರೆ ವಿಷಯಗಳನ್ನು ಪ್ರಸ್ತಾಪಿಸುತ್ತ ಕಾಲ ಕಳೆಯುತ್ತಿದೆ. ಹೀಗಾಗಿ ರೈತ ಸಮಸ್ಯೆಗಳನ್ನು ನಿವಾರಿಸುವಂತೆ ಗಮನ ಸೆಳೆಯಲು ಬಂದ್…

ಮುಂದೆ ಓದಿ...

ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ !!

ತುರುವೇಕೆರೆ :        ತಾಲೂಕು ಮಾವಿನಹಳ್ಳಿ ಅಂಗನವಾಡಿ ಕಾರ್ಯಕರ್ತೆ ಪದ್ಮ ಅವರ ಮೇಲೆ ಪ್ರಕಾಶ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್ ಸೇರಿದಂತೆ ಗುಂಪೊಂದು ತೀವ್ರ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾರ್ಯಕರ್ತೆ ಪದ್ಮ ಅವರನ್ನು ಅವರ ತೋಟದ ಮನೆಯಲ್ಲಿ ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಪದ್ಮಾ ಅವರ ಕೈಬೆರಳು ಕತ್ತರಿಸಿ ಹೋಗಿವೆ. ತೀವ್ರ ಗಾಯಗೊಂಡಿರುವ ಪದ್ಮಾ ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.       ಅಂಗನವಾಡಿ ಕಾರ್ಯಕರ್ತೆ ಪದ್ಮಾ ಅವರು ಮಾವಿನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಪಕ್ಕದ ಮಾಲೆ ಗ್ರಾಮದ ಪ್ರಕಾಶ್ ಮತ್ತು ಪತ್ನಿಯ ನಡುವೆ ನಡೆದ ಜಗಳದಲ್ಲಿ ಪದ್ಮಾ ಕೌನ್ಸಿಲಿಂಗ್ ನಡೆಸಿದ್ದರು. ಈ ಸಂಬಂಧ ಪ್ರಕಾಶ್ ಕೌನ್ಸಿಲಿಂಗ್‍ನಲ್ಲಿ ತನ್ನ ಪರ ನಿಲ್ಲಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಪದ್ಮಾ ಮೇಲೆ ಒತ್ತಡ ಹೇರಿದ್ದರು. ಹೀಗಾಗಿ ಪ್ರಕಾಶ್ ಮಾತನ್ನು ಪದ್ಮಾ ಕೇಳಿರಲಿಲ್ಲ ಎನ್ನಲಾಗಿದೆ.        ಹೀಗಾಗಿ…

ಮುಂದೆ ಓದಿ...