ಬಸ್ ಸಮಸ್ಯೆ ಪರಿಹರಿಸದಿದ್ದರೆ ಕಚೇರಿಗೆ ಮುತ್ತಿಗೆ : ಎಚ್ಚರಿಕೆ!!

ತುಮಕೂರು :       ವಿದ್ಯಾರ್ಥಿಗಳು ಬೆಳಗಿನ ವೇಳೆಯಲ್ಲಿ ಶಾಲೆ-ಕಾಲೇಜುಗಳಿಗೆ ಬರಲು ಅನುಕೂಲವಾಗುವಂತೆ ಶೀಘ್ರವಾಗಿ ಬಸ್ ಸೌಲಭ್ಯ ಕಲ್ಪಿಸದಿದ್ದರೆ, ತುಮಕೂರಿನ ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಮುಂದೆ ವಿದ್ಯಾರ್ಥಿಗಳ ಸಹಿತ ಮುತ್ತಿಗೆ ಹಾಕಿ ಹೋರಾಟ ಮಾಡುವುದಾಗಿ ಬಿಜೆಪಿ ತಾ.ಪಂ. ಸದಸ್ಯೆ ಆರ್. ಕವಿತಾ ರಮೇಶ್ ಸಾರಿಗೆ ಸಂಸ್ಥೆಗೆ ಎಚ್ಚರಿಕೆ ನೀಡಿದರು.       ತುಮಕೂರು ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ ತಾ.ಪಂ., ಅಧ್ಯಕ್ಷ ಗಂಗಾಂಜನೇಯ ಅವರ ಅಧ್ಯಕ್ಷತೆಯಲ್ಲಿ ಏರ್ಪಟ್ಟಿದ್ದ ತಾ.ಪಂ. ಸಾಮಾನ್ಯ ಸಭೆಯಲ್ಲಿ ಈ ಪ್ರಸಂಗ ಜರುಗಿತು.ತುಮಕೂರು-ಶಿರಾ ಹೆದ್ದಾರಿಯಲ್ಲಿ ತುಮಕೂರು ತಾಲ್ಲೂಕಿಗೆ ಒಳಪಡುವ ಶೀಬಿ ಕಡೆಯಿಂದ ತುಮಕೂರು ಕಡೆಗೆ ದೊಡ್ಡ ಸಂಖ್ಯೆಯಲ್ಲಿ ಶಾಲೆ-ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರತಿನಿತ್ಯ ಬಂದು ಹೋಗುತ್ತಾರೆ.        ಶೀಬಿ, ಸೋಮಸಾಗರ ಗೇಟ್, ನೆಲಹಾಳ್, ಸೋರೆಕುಂಟೆ ಗೇಟ್, ತಿಮ್ಮರಾಜನಹಳ್ಳಿ ಗೇಟ್, ಬೆಳ್ಳಾವಿ ಕ್ರಾಸ್‍ನಿಂದ ಬರುವ ಬಡಕುಟುಂಬಕ್ಕೆ ಸೇರಿದ…

ಮುಂದೆ ಓದಿ...

ವಿದ್ಯಾರ್ಥಿಗಳ ಯಕ್ಷಗಾನಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ!

ತುಮಕೂರು:       ವಿದ್ಯಾರ್ಥಿಗಳೇ ಪ್ರದರ್ಶಿಸಿದ ಯಕ್ಷಗಾನ ‘ಏಕಾದಶಿ ದೇವಿ ಮಹಾತ್ಮೆ’ ಹಾಗೂ ಹವ್ಯಾಸಿ ಕಲಾವಿದರು ಪ್ರದರ್ಶಿಸಿದ ‘ಗದಾಯುದ್ಧ’ ತುಮಕೂರಿನ ಕಲಾರಸಿಕರ ಮೆಚ್ಚುಗೆಗೆ ಪಾತ್ರವಾದವು. ನಗರದ ‘ಯಕ್ಷದೀವಿಗೆ’ಯ ನೇತೃತ್ವದಲ್ಲಿ ನಡೆದ ಐದು ಗಂಟೆಗಳ ಸುದೀರ್ಘ ಯಕ್ಷಗಾನ ಪ್ರದರ್ಶನವು ಪ್ರೇಕ್ಷಕರ ಮನರಂಜಿಸಿತು.       ಕರ್ನಾಟಕ ಯಕ್ಷಗಾನ ಅಕಾಡೆಮಿಯು ದಕ್ಷಿಣ ಕನ್ನಡ ಮಿತ್ರವೃಂದ ಹಾಗೂ ಯಕ್ಷದೀವಿಗೆಯ ಸಹಕಾರದೊಂದಿಗೆ ಎಸ್.ಎಸ್.ಪುರಂನ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಸಿದ ಒಂದು ದಿನದ ವಿಚಾರ ಸಂಕಿರಣದ ಅಂಗವಾಗಿ ಎರಡು ಯಕ್ಷಗಾನ ಪ್ರದರ್ಶನಗಳು ನಡೆದವು.       ಯಕ್ಷದೀವಿಗೆಯ ಅಧ್ಯಕ್ಷೆ ಹಾಗೂ ಯಕ್ಷಗಾನ ಅಕಾಡೆಮಿ ಸದಸ್ಯೆ ಆರತಿ ಪಟ್ರಮೆಯವರಿಂದ ತರಬೇತಿ ಪಡೆದ ನಗರದ ವಿವಿಧ ಶಾಲೆಯ ವಿದ್ಯಾರ್ಥಿಗಳು ಬಣ್ಣಹಚ್ಚಿ ಗೆಜ್ಜೆ ತೊಟ್ಟು ‘ಏಕಾದಶಿ ದೇವಿ ಮಹಾತ್ಮೆ’ ಎಂಬ ಯಕ್ಷಗಾನವನ್ನು ಪ್ರದರ್ಶಿಸಿದರು. ಮಾರುತಿ ವಿದ್ಯಾಕೇಂದ್ರ, ಬಿಷಪ್ ಸಾರ್ಜೆಂಟ್ ಶಾಲೆ, ಶ್ರೀ ಗುರುಕುಲ್, ಚೇತನ…

ಮುಂದೆ ಓದಿ...

ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿ – ಶಾಸಕ

ತುಮಕೂರು :       ಸರ್ಕಾರಿ ನೌಕರರು ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಹೇಳಿದರು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕಗಳ ಸಹಯೋಗದಲ್ಲಿ ನಗರದ ಎಸ್.ಐ.ಟಿ ಕಾಲೇಜಿನ ಶ್ರೀ ಶಿವಕುಮಾರಸ್ವಾಮೀಜಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಸರ್ಕಾರಿ ನೌಕರರಲ್ಲಿ ಅತಿಯಾದ ಒತ್ತಡ ಇರುವುದರಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳುವಲ್ಲಿ ಅನುಕೂಲವಾಗುವುದು ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ಕ್ರೀಡಾಸಕ್ತಿಯನ್ನು ಪ್ರದರ್ಶಿಸಬೇಕು ಎಂದರಲ್ಲದೇ ಕ್ರೀಡಾಕೂಟದಲ್ಲಿ ಭಾಗವಹಿಸಲು ಹೇಗೆ ಉತ್ಸುಕರಾಗಿದ್ದೀರೋ.. ಅದೇ ರೀತಿ ಕಚೇರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು…

ಮುಂದೆ ಓದಿ...