ಕೃಷಿ ಸಮ್ಮಾನ್‍ಗೆ 1 ಲಕ್ಷ ರೈತರು ಸೇರುವ ಸಾಧ್ಯತೆ!

ತುಮಕೂರು :       ಪ್ರಧಾನ ನರೇಂದ್ರ ಮೋದಿ ಅವರು ಜನವರಿ 2ರಂದು ತುಮಕೂರು ಆಗಮಿಸಿ, ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಕಾರ್ಯಕ್ರಮ ಹಾಗೂ ರೈತ ಸಮಾವೇಶಕ್ಕೆ ರಾಜ್ಯದ ವಿವಿಧ ಜಿಲ್ಲೆಯಿಂದ ಸುಮಾರು 1 ಲಕ್ಷ ರೈತರು ಸೇರುವ ಸಾಧ್ಯತೆಯಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.       ನಗರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ ಮಾತನಮಾಡಿದ ಅವರು ಜನವರಿ 2ರಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಜಿಲ್ಲೆಗೆ ಆಗಮಿಸಲಿದ್ದು, ಮೊದಲು ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂ.ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ನಂತರ ಮಠದ ಮಕ್ಕಳ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.       ದೇಶದ 6 ರಾಜ್ಯಗಳಲ್ಲಿ ಕೃಷಿ ಇಲಾಖೆಯಲ್ಲಿ…

ಮುಂದೆ ಓದಿ...