ವಿಜ್ಞಾನದ ಆವಿಷ್ಕಾರಗಳು ಅಭಿವೃದ್ಧಿಗೆ ಪೂರಕವಾಗಿರಬೇಕು – ಶ್ರೀ ಸಿದ್ಧಲಿಂಗಸ್ವಾಮೀಜಿಗಳು

ತುಮಕೂರು:       ವಿಜ್ಞಾನದ ಆವಿಷ್ಕಾರಗಳು ಮನುಷ್ಯ ಹಾಗೂ ಸಮಾಜದ ಬೆಳವಣಿಗೆಗೆ ಪೂರಕವಾಗಬೇಕೇ ಹೊರತು ಮಾರಕವಾಗಬಾರದು ಎಂದು ಶ್ರೀ ಸಿದ್ಧಗಂಗಾ ಮಠದ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮೀಜಿಗಳು ಅಭಿಪ್ರಾಯಪಟ್ಟರು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ತುಮಕೂರು(ದ)ಜಿಲ್ಲೆ ಇವರ ಸಹಯೋಗದಲ್ಲಿಂದು ಶ್ರೀ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ 2019-20 ನೇ ಸಾಲಿನ “ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ” ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಅವರು, ವಿಜ್ಞಾನವೆಂಬುದು ಸತ್ಯದ ಅನ್ವೇಷಣೆಯಾಗಿದ್ದು, ವಿಜ್ಞಾನದ ನೂತನ ಆವಿಷ್ಕಾರಗಳು ಮನುಷ್ಯನ ಯೋಗಕ್ಷೇಮಕ್ಕೆ ಅನುಗುಣವಾಗಿರಬೇಕು ಎಂದು ಅವರು ತಿಳಿಸಿದರು.       ವಿಜ್ಞಾನದ ಆವಿಷ್ಕಾರಗಳಿಂದ ಸೌಲಭ್ಯಗಳು ಹೆಚ್ಚಾದಂತೆ ಮನುಷ್ಯ ಸೋಮಾರಿತನ ಬೆಳೆಸಿಕೊಂಡು ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾನೆ. ವಿಜ್ಞಾನದ ಆವಿಷ್ಕಾರಗಳು ನಮಗೆ ಬೇಕು ಆದರೆ ಎಷ್ಟು ಬೇಕು ಅಷ್ಟನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.       ಮಕ್ಕಳಲ್ಲಿ…

ಮುಂದೆ ಓದಿ...