ನಾಳೆ ತುಮಕೂರಿಗೆ ಪ್ರಧಾನಿ : ವಿವಿಧ ಸಚಿವರು, ಗಣ್ಯರ ದಂಡು

 ತುಮಕೂರು  :       ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಗರದಲ್ಲಿ ಜನವರಿ 2ರಂದು ಪಾಲ್ಗೊಳ್ಳಲಿರುವ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಕಾರ್ಯಕ್ರಮ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸೇರಿದಂತೆ ವಿವಿಧ ರಾಜ್ಯಗಳ ಸಚಿವರು ಭಾಗವಹಿಸಲಿದ್ದಾರೆ.       ಸಮಾರಂಭದಲ್ಲಿ ಕೇಂದ್ರದ ಕ್ಯಾಬಿನೆಟ್ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರಾಜ್ಯ ಕೃಷಿ ಸಚಿವರಾದ ಪರ್ಷೋತ್ತಮ್ ರೂಪಾಲ ಹಾಗೂ ಕೈಲಾಶ್ ಚೌಧರಿ, ರಾಜ್ಯ ರೈಲ್ವೇ ಸಚಿವ ಸುರೇಶ್ ಸಿ.ಅಂಗಡಿ, ಹರಿಯಾಣ ರಾಜ್ಯದ ಕೃಷಿ ಸಚಿವ ಜೆ.ಪಿ.ದಲಾಲ್, ತ್ರಿಪುರ ರಾಜ್ಯದ ಕೃಷಿ ಸಚಿವ ಪ್ರಣಜಿತ್ ಸಿಂಗ್ ರಾಯ್, ಹಿಮಾಚಲ್ ಪ್ರದೇಶದ ಕೃಷಿ ಸಚಿವ ಡಾ: ರಾಮ್ ಲಾಲ್ ಮರ್‍ಕಂದ, ಛತ್ತೀಸ್‍ಗಡ್‍ನ ಕೃಷಿ ಅಭಿವೃದ್ಧಿ ಸಚಿವ ರವೀಂದ್ರ ಚೌಬೇಜಿ, ಬಿಹಾರ್ ರಾಜ್ಯದ ಕೃಷಿ ಸಚಿವ ಪ್ರೇಮ್‍ಕುಮಾರ್, ಉತ್ತರ ಪ್ರದೇಶದ ಕೃಷಿ…

ಮುಂದೆ ಓದಿ...

32 ರೈತ ಬಾಂಧವರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ-ಸಚಿವ ಪ್ರಹ್ಲಾದ್ ಜೋಶಿ

ತುಮಕೂರು :       ನಗರದಲ್ಲಿ ಜನವರಿ 2ರಂದು ನಡೆಯಲಿರುವ ಕೃಷಿ ಸಮ್ಮಾನ್ ಕಾರ್ಯಕ್ರಮದಲ್ಲಿ 16 ಮಹಿಳಾ ರೈತರು ಹಾಗೂ 16 ಪುರುಷ ರೈತರು ಸೇರಿದಂತೆ ಒಟ್ಟು 32 ರೈತ ಬಾಂಧವರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.       ನಗರದ ಪ್ರವಾಸಿ ಮಂದಿರದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಕ್ಕೆ ಪ್ರಧಾನ ಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ನಗರದ ಜೂನಿಯರ್ ಕಾಲೇಜು ಮೈದಾನದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದರು.       ಕೇಂದ್ರ ಕೃಷಿ ಇಲಾಖೆಯಿಂದ ಕೃಷಿ ಸಮ್ಮಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ರೈತರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಆಯ್ಕೆಯಲ್ಲಿ ಕರ್ನಾಟಕ 3ನೇ…

ಮುಂದೆ ಓದಿ...

ಕೃಷಿ ಸಮ್ಮಾನ್‍ಗೆ ಸುಮಾರು 1.5 ಲಕ್ಷ ಜನರು ಸೇರುವ ಸಾಧ್ಯತೆ!

ತುಮಕೂರು :       ತುಮಕೂರು ನಗರದಲ್ಲಿ ಜನವರಿ 2ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಕಾರ್ಯಕ್ರಮ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಒಂದೂವರೆ ಲಕ್ಷ ರೈತರು ಸೇರುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.       ನಗರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠ ಹಾಗೂ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ ಹಾಗೂ ಅಧಿಕಾರಿಗಳ ಸಭೆ ನಡೆಸಿ ಅನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ/ರೈತರಿಗೆ ಅನುಕೂಲವಾಗುವಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ರಸ್ತೆಗಳಲ್ಲಿ ಧ್ವನಿವರ್ಧಕಗಳನ್ನು ಹಾಗೂ ಎಲ್‍ಇಡಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.       ಜನವರಿ 2ರಂದು ಮಧ್ಯಾಹ್ನ ಸುಮಾರು 2.15ಕ್ಕೆ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ…

ಮುಂದೆ ಓದಿ...