ನೆರೆ ಪರಿಹಾರ ಕೊಡಿ ಎಂದ ಬಿಎಸ್‍ವೈ : ವಿಷಯವನ್ನೇ ಪ್ರಸ್ತಾಪಿಸದ ಮೋದಿ

ಬೆಂಗಳೂರು:       `ಕರ್ನಾಟಕ ನೆರೆಯಿಂದ ತತ್ತರಿಸಿದೆ. ?30 ಸಾವಿರ ಕೋಟಿಗೂ ಮಿಗಿಲಾದ ನಷ್ಟವಾಗಿದೆ. ಆದರೆ ಸೂಕ್ತ ಪರಿಹಾರ ಬಂದಿಲ್ಲ. ಕೇಂದ್ರ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸಬೇಕು,’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತುಮಕೂರಿನ ರೈತ ಸಮಾವೇಶದಲ್ಲಿ ಮೋದಿ ಸಮ್ಮುಖದಲ್ಲೇ ಒತ್ತಾಯಿಸಿದರು.       ಗುರುವಾರ ತಮಕೂರಿನ ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ ನೇರವಾಗಿ ರೈತ ಸಮಾವೇಶಕ್ಕೆ ಆಗಮಿಸಿದ ಪ್ರಧಾನಿ ಮೋದಿ ಎಂಟು ಮಂದಿ ರೈತರಿಗೆ `ಕೃಷಿ ಕರ್ಮಣ ಪ್ರಶಸ್ತಿ,’ ಪ್ರದಾನ ಮಾಡಿದರು. ನಂತರ ಪ್ರಸ್ತಾವಿಕವಾಗಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೆರೆ ಪರಿಹಾರಕ್ಕಾಗಿ ಒತ್ತಾಯಿಸಿದರು.       `ಆಹಾರ ಉತ್ಪಾದನೆ ದ್ವಿಗುಣಗೊಳಿಸಲು ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದಾರೆ. ರೈತರಿಗೆ ಪ್ರೋತ್ಸಾಹ ಧನ, ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಅದನ್ನು ಸಾಧಿಸಬೇಕು. ರಾಜ್ಯದ ನೀರಾವರಿಗೆ 50 ಸಾವಿರ ಕೋಟಿ…

ಮುಂದೆ ಓದಿ...

ಶಿವಕುಮಾರ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದ ಪ್ರಧಾನಿ ಮೋದಿ

ತುಮಕೂರು :       ಪ್ರಧಾನಿ ನರೇಂದ್ರ ಮೋದಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯ ಗದ್ಧುಗೆ ದರ್ಶನ ಪಡೆದರು.       ಮಧ್ಯಾಹ್ನ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಾಲು ಹೊದೆಸಿ, ಮೈಸೂರು ಪೇಟಾ ತೊಡಿಸಿ ಸ್ವಾಗತಿಸಿದರು. ನಂತರ ವಿಶೇಷ ಹೆಲಿಕಾಫ್ಟರ್ ಮೂಲಕ ತುಮಕೂರಿಗೆ ತೆರಳಿದರು.       ತುಮಕೂರು ಹೆಲಿಪ್ಯಾಡ್‍ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪ್ರಧಾನಿಯವರನ್ನು ಸ್ವಾಗತಿಸಿದರು. ಈ ವೇಳೆ ಯಡಿಯೂರಪ್ಪ ಸಹ ಇದ್ದರು. ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಠದ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಸ್ವಾಗತಿಸಿದರು.        ಮೋದಿ ಅವರು ಡಾ.ಶಿವಕುಮಾರ ಸ್ವಾಮೀಜಿ ವಸ್ತು ಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ಮತ್ತು ಮಠದ ಆವರಣದಲ್ಲಿ ಬಿಲ್ವಪತ್ರೆ…

ಮುಂದೆ ಓದಿ...