ತುಮಕೂರು : ತಾತ್ಕಾಲಿಕ ಬಸ್ ನಿಲ್ದಾಣ

ತುಮಕೂರು :       ಸ್ಮಾರ್ಟ್ ಸಿಟಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ನಿಗಮದ ತುಮಕೂರು ಬಸ್‍ನಿಲ್ದಾಣವನ್ನು ಹೈಟೆಕ್ ಬಸ್‍ನಿಲ್ದಾಣವನ್ನಾಗಿ ಮಾರ್ಪಾಡು ಮಾಡುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಹಾಲಿ ಇರುವ ಬಸ್‍ನಿಲ್ದಾಣವನ್ನು ಬಸವೇಶ್ವರ ರಸ್ತೆಯಲ್ಲಿರುವ ನಿಗಮದ ತುಮಕೂರು ಘಟಕ-1ರ ಸ್ಥಳಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಗಿದ್ದು ಈ ಸಂಚಾರ ವ್ಯವಸ್ಥೆಗೆ ಸಾರ್ವಜನಿಕರು ಹೊಂದಿಕೊಂಡು ಸಹಕರಿಸಬೇಕೆಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಮನವಿ ಮಾಡಿದರು. ಕಾರ್ಯಾಚರಣೆ ಮಾಡಲಿರುವ ತಾತ್ಕಾಲಿಕ ಬಸ್ ನಿಲ್ದಾಣಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು, ಅಶೋಕ ರಸ್ತೆಯಲ್ಲಿರುವ ಹಳೆಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಭಾಗದಲ್ಲಿ ನೂತನ ಅತ್ಯಾಧುನಿಕ ಬಸ್‍ನಿಲ್ದಾಣ ನಿರ್ಮಿಸಲು ಸುಮಾರು 82 ಕೋಟಿ ರೂ.ಗಳ ಕಾಮಗಾರಿ ಕೆಲಸಗಳನ್ನು ಪ್ರಾರಂಭಿಸಲಾಗಿದ್ದು ಸುಮಾರು ಒಂದೂವರೆಯಿಂದ ಎರಡು ವರ್ಷಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಅದಕ್ಕೆ ಪರ್ಯಾಯ ವ್ಯವಸ್ಥೆಯನ್ನು ಬಸವೇಶ್ವರ ರಸ್ತೆಯಲ್ಲಿರುವ ನಿಗಮದ ತುಮಕೂರು ಘಟಕ-1ರ ಸ್ಥಳಕ್ಕೆ ಸ್ಥಳಾಂತರಗೊಳಿಸಿದ್ದು, ಪ್ರಯಾಣಿಕರಿಗೆ ಯಾವುದೇ…

ಮುಂದೆ ಓದಿ...

ಸಾರ್ವತ್ರಿಕ ಮುಷ್ಕರ-ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ತುಮಕೂರು :      ಬೆಲೆ ಏರಿಕೆಗೆ ಕಡಿವಾಣ, ಉದ್ಯೋಗ ಸೃಷ್ಟಿ, 21 ಸಾವಿರ ರೂಪಾಯಿ ಕನಿಷ್ಟ ಕೂಲಿ, ಆರ್ಥಿಕ ಪ್ರಗತಿಗೆ ತಡೆಯೊಡ್ಡಿರುವ ನೀತಿಗಳನ್ನು ಬದಲಿಸಲು, ರೈತರ ಆತ್ಮಹತ್ಯೆ ತಡೆ, ಬೆಳೆ ವೈಜ್ಞಾನಿಕ ಬೆಂಬಲ ಬೆಲೆ, ಕೃಷಿ ಬಿಕ್ಕಟ್ಟು ನಿವಾರಣೆಗೆ ಆಗ್ರಹಿಸಿ, ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ ವಿರೋಧಿಸಿ, ಸ್ಕೀಂ ನೌಕರರ ಕಾಯಂಮಾತಿಗೆ, ಗುತ್ತಿಗೆ ಪದ್ದತಿ ರದ್ದತಿಗೆ ಒತ್ತಾಯಿಸಿ, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗೆ ಆಗ್ರಹಿಸಿ, ಮಾಸಿಕ 10 ಸಾವಿರ ರೂಪಾಯಿ ಕನಿಷ್ಠ ಪಿಂಚಣಿಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳಾದ, ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಐಎನ್‍ಟಿಯುಸಿ ಸಂಘಟನೆಗಳ ನೂರಾರು ಕಾರ್ಯಕರ್ತರು ತುಮಕೂರು ನಗರದ ಬಿಎಸ್‍ಎನ್‍ಎಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಈ ಮುಷ್ಕರವನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ವಿವಿಧ ಸಂಘಟನೆಗಳ ನಾಯಕರನ್ನು ಹೆದರಿಸಿರುವುದು ಮತ್ತು ಮುಚ್ಚಳಿಕೆ ಪತ್ರ ಬರೆಸಿಕೊಳ್ಳುವ ಪ್ರಕ್ರಿಯೆಗೆ…

ಮುಂದೆ ಓದಿ...