ಜಯಂತಿಗಳನ್ನು ಸರಳವಾಗಿ ಆಚರಿಸುವಂತೆ ಎಡಿಸಿ ಸೂಚನೆ

ತುಮಕೂರು:       ಜನವರಿ 14ರಂದು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಜನವರಿ 19ರಂದು ಮಹಾಯೋಗಿ ವೇಮನ ಜಯಂತಿ ಹಾಗೂ ಜನವರಿ 21ರಂದು ನಡೆಯುವ ಅಂಬಿಗರ ಚೌಡಯ್ಯ ಜಯಂತಿಗಳನ್ನು ಸರಳವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಅವರು ತಿಳಿಸಿದರು.       ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಮಹಾಯೋಗಿ ವೇಮನ ಜಯಂತಿ, ಅಂಬಿಗರ ಚೌಡಯ್ಯ ಜಯಂತಿಗಳ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಕೆಲವು ಭಾಗಗಳಲ್ಲಿ ಸಂಭವಿಸಿದ ನೆರೆಪ್ರವಾಹದ ಕಾರಣ ಸರ್ಕಾರದ ನಿರ್ದೇಶನದಂತೆ ಸಂಭ್ರಮದ ಆಚರಣೆ ಮಾಡದೆ, ನಿಗಧಿತ ದಿನಾಂಕಗಳಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಹಾಪುರುಷರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಾತ್ವಿಕವಾಗಿ ಆಚರಣೆ ಮಾಡುವಂತೆ ಅವರು ಸೂಚಿಸಿದರು.       ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ, ಪಾಲಿಕೆಯ…

ಮುಂದೆ ಓದಿ...

ಮೂಡಲಪಾಯ ಯಕ್ಷಗಾನ ಅಕಾಡೆಮಿಗೆ ಶಿಫಾರಸ್ಸು-ಸಚಿವ

ತುಮಕೂರು :       ಕಲೆ, ಸಾಹಿತ್ಯ, ಸಂಸ್ಕøತಿ ಹಾಗೂ ಸ್ಥಳೀಯ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಮೂಡಲಪಾಯ ಯಕ್ಷಗಾನ ಅಕಾಡೆಮಿ ಸ್ಥಾಪನೆಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತೇನೆ. ಈ ಸಂಬಂಧ ಸಂಬಂಧಪಟ್ಟ ಸಚಿವರೊಂದಿಗೂ ಮಾತನಾಡಿ ಒತ್ತಾಯಿಸುತ್ತೇನೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ ನೀಡಿದರು.       ಕರ್ನಾಟಕ ಯಕ್ಷಗಾನ ಅಕಾಡೆಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಸಂಘ ಮತ್ತು ಕರ್ನಾಟಕ ಜಾನಪದ ಪರಿಷತ್ತು ತುಮಕೂರು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಮೂಡಲಪಾಯ ಯಕ್ಷಗಾನ ಪರಂಪರೆ-ಪುನಶ್ಚೇತನ ವಿಚಾರ ಸಂಕಿರಣ ಮತ್ತು ಭಾಗವತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಸಂಘದ ಅಧ್ಯಕ್ಷ ಜಯಪ್ರಕಾಶಗೌಡ ಮನವಿ ಸ್ವೀಕರಿಸಿದ ಸಚಿವರು ಮೂಡಲಪಾಯ ಯಕ್ಷಗಾನ ಅಕಾಡೆಮಿ ಸ್ಥಾಪನೆಗೆ ನೆರವು ನೀಡುವುದಾಗಿ ಹೇಳಿದರು.       ಕಲೆ ಸಾಹಿತ್ಯ, ಭಾಷೆ ಮತ್ತು ಸಂಸ್ಕøತಿಗೆ ಪೂರಕವಾಗಿ ಶಕ್ತಿತುಂಬುವ ಕೆಲಸ ಮಾಡಿದರೆ…

ಮುಂದೆ ಓದಿ...

ರಸ್ತೆ ಸುರಕ್ಷತಾ ನಿಯಮವನ್ನು ಪಾಲಿಸಿ-ಸಾರಿಗೆ ಆಯುಕ್ತ

ತುಮಕೂರು:       ರಾಜ್ಯದಲ್ಲಿಯೇ ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ವಾಹನ ಸವಾರರು ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಆಯುಕ್ತ ಎನ್.ಶಿವಕುಮಾರ್ ಅವರು ಹೇಳಿದರು.       ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಹಾಗೂ ತುಮಕೂರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ರಾಜ್ಯದ ಮೊದಲ ರಸ್ತೆ ಸುರಕ್ಷತಾ ಜಾಗೃತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ದೇಶದಲ್ಲಿ ರಸ್ತೆ ಅಪಘಾತಗಳಿಂದ ಹೆಚ್ಚು ಅಕಾಲಿಕ ಮರಣ ಹೊಂದುತ್ತಿದ್ದಾರೆ. ಈ ರೀತಿಯ ರಸ್ತೆ ಅಪಘಾತಗಳು ಜನರಿಗೆ ಭಯವನ್ನುಂಟು ಮಾಡುತ್ತಿವೆ. ರಸ್ತೆಯ ನಿಯಮಗಳನ್ನು ಮರೆತು ಇಷ್ಟಬಂದ ಹಾಗೆ ರಸ್ತೆಗಳನ್ನು ಉಪಯೋಗಿಸಿಕೊಳ್ಳುತ್ತಿರುವುದು ಅಪಘಾತಕ್ಕೆ ಕಾರಣ. ರಸ್ತೆ ಅಪಘಾತಗಳನ್ನು ತಡೆಟ್ಟುವಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಜಿಲ್ಲೆಯಿಂದ…

ಮುಂದೆ ಓದಿ...