ಚೇಳೂರು ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ!!

ಗುಬ್ಬಿ :       ನಿತ್ಯ ಸಾವಿರಾರು ಮಂದಿ ಸಂಚರಿಸುವ ಪ್ರಮುಖ ಚೇಳೂರು ರಸ್ತೆ ಹಾದು ಹೋಗುವ ಮಧ್ಯೆ ಪಟ್ಟಣದ ರೈಲ್ವೆ ನಿಲ್ದಾಣದಿಂದ ಅಂಡರ್‍ಪಾಸ್ ಸೇತುವೆ ದಾಟಿ ಸಾಗುವ ಒಂದು ಕಿಮೀ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ದುರಸ್ಥಿ ಕಾರ್ಯಕ್ಕೆ ಸ್ಥಳೀಯ ಪಟ್ಟಣ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆ ಜವಾಬ್ದಾರಿ ವಹಿಸದೆ ಒಬ್ಬರನ್ನಬ್ಬರು ದೂರುತ್ತಿದ್ದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಸುತ್ತಮುತ್ತಲಿನ ಗ್ರಾಮಸ್ಥರು ಚೇಳೂರು ರಸ್ತೆ ಬಂದ್ ಮಾಡಿ ಮೂರು ತಾಸು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆಯಿತು.         ಬೆಳಿಗ್ಗೆ ಚೇಳೂರು ಮತ್ತು ಅಮ್ಮನಘಟ್ಟ ಸಾಗುವ ಸರ್ಕಲ್ ಬಳಿ ರಸ್ತೆ ತಡೆ ನಡೆಸಿದ ನಾಗರೀಕ ಹೋರಾಟ ಸಮಿತಿ ಹಾಗೂ ನೂರಾರು ಗ್ರಾಮಸ್ಥರು ಒಂದು ಕಿಮೀ ರಸ್ತೆ ದುರಸ್ಥಿ ಕಾರ್ಯ ನಡೆಸಿ ಅಗಲೀಕರಣ ಮಾಡುವಂತೆ ಆಗ್ರಹಿಸಿ ಧರಣಿ ನಡೆಸಿದರು.       ಈ ಹಿಂದೆ…

ಮುಂದೆ ಓದಿ...

ಬ್ಯಾಂಕ್ ರೈತರಿಂದ ಜಪ್ತಿ ಮಾಡಿದ್ದ ಟ್ರಾಕ್ಟರ್ ರೈತರಿಂದ ಮರು ಜಪ್ತಿ!!

ತುಮಕೂರು :       ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ ನೇತೃತ್ವದಲ್ಲಿ ಪ್ರಾಥಮಿಕ ಕೃಷಿ ಅಭಿವೃದ್ದಿ ಬ್ಯಾಂಕ್ ರೈತರಿಂದ ಜಪ್ತಿ ಮಾಡಿದ್ದ ಟ್ರಾಕ್ಟರ್‍ನನ್ನು ಮರು ಜಪ್ತಿ ಮಾಡುವ ಕಾರ್ಯ ನಡೆಯಿತು.       ನಗರದ ಭದ್ರಮ್ಮ ಸರ್ಕಲ್‍ನಲ್ಲಿರುವ ಪಿಎಲ್‍ಡಿ ಬ್ಯಾಂಕಿನಿಂದ ಸಾಲ ಪಡೆದಿದ್ದ ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿಯ ರೈತ ರಂಗನಾಥ ಎಂಬುವವರಿಗೆ ಯಾವುದೇ ನೊಟೀಸ್ ನೀಡದೆ ಬ್ಯಾಂಕ್ ಅಧಿಕಾರಿಗಳು, ಕುಟುಂಬಕ್ಕೆ ಆಧಾರವಾಗಿದ್ದ ಟ್ರಾಕ್ಟರ್ ಜಪ್ತಿ ಮಾಡಿ ತಂದ ಬ್ಯಾಂಕ್ ಗೋಡೌನ್‍ನಲ್ಲಿ ಇರಿಸಿದ್ದರು.ಶುಕ್ರವಾರ ಮಧ್ಯಾಹ್ನ 1:30ರ ಸುಮಾರಿಗೆ ಸ್ಥಳಕ್ಕೆ ಆನಂದ ಪಟೇಲ್ ನೃತೃತ್ವದಲ್ಲಿ ಆಗಮಿಸಿದ ರೈತರು ಗೋಡೌನ್‍ಗೆ ಹಾಕಿದ್ದ ಬೀಗವನ್ನು ಹೊಡೆದು ರೈತರಿಂದ ಜಪ್ತಿ ಮಾಡಿದ್ದ ಸುಮಾರು ಐದು ಟ್ರಾಕ್ಟರ್‍ಗಳನ್ನು ಮರು ಜಪ್ತಿ ಮಾಡಿ ತೆಗೆದುಕೊಂಡು ಹೋದರು.       ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್,ಸತತ…

ಮುಂದೆ ಓದಿ...

ಚಿರತೆ ಬಾಲಕನನ್ನು ಹೊತ್ತೊಯ್ದು ಸಾಯಿಸುವುದಕ್ಕೆ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣ-ಶಾಸಕ

ತುಮಕೂರು :       ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಗೆ ಹೊಂದಿಕೊಂಡಂತೆ ಇರುವ ಮಣಕುಪ್ಪೆಯಲ್ಲಿ ಚಿರತೆ ಬಾಲಕನನ್ನು ಹೊತ್ತೊಯ್ದು ಸಾಯಿಸುವುದಕ್ಕೆ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಶಾಸಕ ಗೌರಿಶಂಕರ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಜಿಲ್ಲಾ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.       ಜಿಲ್ಲೆಯಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು, ಊರುಗಳಿಗೆ ನುಗ್ಗಿ ಜಾನುವಾರುಗಳನ್ನು ಹೊತ್ತೊಯ್ಯುತ್ತಿದ್ದರು, ಅರಣ್ಯಾಧಿಕಾರಿಗಳು ಚಿರತೆ ಸೆರೆ ಹಿಡಿಯಲು ಯಾವುದೇ ಕ್ರಮವಹಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು ಜಿಲ್ಲಾ ಅರಣ್ಯಾಧಿಕಾರಿ ವಿರುದ್ಧ ಧಿಕ್ಕಾರವನ್ನು ಕೂಗಿದರು.       ಈ ವೇಳೆ ಮಾತನಾಡಿದ ಗ್ರಾಮಾಂತರ ಶಾಸಕ ಗೌರಿಶಂಕರ್ ಅವರು, ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬನ್ನಿಕುಪ್ಪೆಯಲ್ಲಿ ಚಿರತೆ ವೃದ್ಧೆಯ ಮೇಲೆ ದಾಳಿ ಮಾಡಿ ಸಾಯಿಸಿತ್ತು, ಆಗಲೇ ಅರಣ್ಯಾಧಿಕಾರಿಗಳಿಗೆ ಚಿರತೆಯನ್ನು ಹಿಡಿಯಲು ಕ್ರಮವಹಿಸುವಂತೆ ಮನವಿ ಮಾಡಿದ್ದರು ಸಹ ನಿರ್ಲಕ್ಷ್ಯವಹಿಸಿದ್ದರಿಂದ…

ಮುಂದೆ ಓದಿ...