ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ : ಅರ್ಹರ ನೋಂದಣಿಗೆ ಡಿಸಿ ಸೂಚನೆ

 ತುಮಕೂರು :       ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಸೌಲಭ್ಯ ಪಡೆಯಲು ಜಿಲ್ಲೆಯ ಅರ್ಹ ಅಸಂಘಟಿತ ವಲಯದ ಕಾರ್ಮಿಕರನ್ನು ನೋಂದಣಿ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಅವರು ಸೂಚಿಸಿದರು.       ಈಗಾಗಲೇ ಜಿಲ್ಲೆಯಲ್ಲಿ ನೋಂದಣಿ ಕಾರ್ಯ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಸಲು ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಾಲೆಗಳಲ್ಲಿ ಬಿಸಿಯೂಟ ತಯಾರಕರು, ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳು, ಸಾರಿಗೆ ಇಲಾಖೆಯಡಿಯ ಖಾಸಗಿ ಬಸ್ ಚಾಲಕರು, ಮೀನುಗಾರಿಕೆ ಇಲಾಖೆಯ ತೀವ್ರ ಹಾಗೂ ಅರೆಕಾಲಿಕ ಮೀನುಗಾರರು, ಸಮಾಜ ಕಲ್ಯಾಣ ಇಲಾಖೆಯ ಚರ್ಮ ಉದ್ಯಮ ಕಾರ್ಮಿಕರು ಈ ಯೋಜನೆಯ ಸೌಲಭ್ಯ…

ಮುಂದೆ ಓದಿ...

ಗುರಿ ಮುಟ್ಟಲು ಶಿಕ್ಷಣ ಪ್ರಮುಖ ಸಾಧನ – ಅತೀಕ್

ತುಮಕೂರು :       ಯಾವುದೇ ಒಬ್ಬ ವ್ಯಕ್ತಿಯು ಜೀವನದಲ್ಲಿ ತನ್ನ ಗುರಿಯನ್ನು ಮುಟ್ಟಲು ಶಿಕ್ಷಣವು ಪ್ರಮುಖ ಸಾಧನವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅತೀಕ್ ಅಭಿಪ್ರಾಯ ವ್ಯಕ್ತಪಡಿಸಿದರು.       ತುಮಕೂರು ನಗರದ ಪಿ.ಹೆಚ್.ಕಾಲೋನಿಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಖುರ್ಷಿದ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ನೋಟ್ ಬುಕ್ ಹಾಗೂ ಕಂಪ್ಯೂಟರ್ ವಿತರಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯೆಯು ಸಾಧಕನ ಸ್ವತ್ತು. ಶಾಲೆಗೆ ಹೋಗುವ ಮೂಲಕ ಸತತ ಪರಿಶ್ರಮದಿಂದ ಸಾಧಿಸಿದಾಗ ಮಾತ್ರ ವಿದ್ಯೆ ನಮಗೆ ಒಲಿಯುತ್ತದೆ. ಇಂದಿನ ಮಕ್ಕಳೇ ನಾಳೆಯ ಭವ್ಯ ಭಾರತದ ಪ್ರಜೆಗಳು. ಕೆಲವರಿಗೆ ಶಾಲೆಗೆ ಹೋಗಲು ಆಸಕ್ತಿ ಇದ್ದರೂ ಅವಕಾಶ ಸಿಗುವುದಿಲ್ಲ. ಆದರೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ತಮಗೆ ದೊರೆತಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದರಿಂದ ಪೋಷಕರ ಆಸೆಗಳನ್ನು ಈಡೇರಿಸಲು ಸಾಧ್ಯವಾಗಲಿದೆ ಎಂದರು.  …

ಮುಂದೆ ಓದಿ...