ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ!!

ಕೊರಟಗೆರೆ :       ತಾಲ್ಲೂಕಿನ ಸರ್ಕಾರಿ ಗೋಮಾಳ, ಗುಂಡು ತೋಪು, ರಾಜಕಾಲುವೆ ಹಾಗೂ ಕೆರೆ ಒತ್ತುವರಿ ತೆರವುಗೊಳಿಸು ವಂತೆ ಒತ್ತಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಫೆ.3 ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಮಿಕೊಂಡಿರುವುದಾಗಿ ಸಂಘದ ಅಧ್ಯಕ್ಷ ಸಿದ್ದರಾಜು ತಿಳಿಸಿದರು.       ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಗೋಮಾಳ, ಗುಂಡು ತೋಪು ಕೆರೆ ಒತ್ತುವರಿಯ ಬಗ್ಗೆ ರೈತ ಸಂಘ ಮಾಹಿತಿ ನೀಡಿ ತೆರವು ಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸಹ ತಾಲ್ಲೂಕು ಅಧಿಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ. ಸರ್ಕಾರಿ ಭೂಮಿ ಖಾಸಗಿ ಬಲಿಷ್ಟ ವ್ಯಕ್ತಿಗಳ ಪಾಲಾಗುತ್ತಿದ್ದರೂ ಅಧಿಕಾರಿಗಳು ಕಂಡು ಕಾಣದಂತೆ ಕುಳಿತಿದ್ದಾರೆ.     ಎತ್ತಿನಹೊಳೆ ಯೋಜನೆ ಅವೈಜ್ಞಾನಿಕವಾಗಿದ್ದು, ರೈತರಿಗೆ ಅಲ್ಪಸ್ವಲ್ಪ ಹಣ ನೀಡಿ ಕಾಲುವೆ ಮಾಡುತ್ತಿದ್ದಾರೆ. ಬೆಸ್ಕಾಂ ಇಲಾಖೆ ಅಧೀಕಾರಿಗಳು ರೈತರಿಗೆ ಸರಿಯಾದ ರೀತಿಯಲ್ಲಿ ಸ್ಪಂಧಿಸುತ್ತಿಲ್ಲ.…

ಮುಂದೆ ಓದಿ...

ಗೋಡಂಬಿ ಬೆಳೆಯಲು ಜಿಲ್ಲೆಯ ವಾತಾವರಣ ಹೇಳಿ ಮಾಡಿಸಿದಂತಿದೆ – ಸಚಿವ

ತುಮಕೂರು :       ಕಲ್ಪತರು ನಾಡಾಗಿದ್ದ ತುಮಕೂರು ಜಿಲ್ಲೆಗೆ ಕಳೆದ 2-3 ವರ್ಷಗಳಿಂದ ಸರಿಯಾಗಿ ಮಳೆ ಬಾರದೆ ಬರ ಪರಿಸ್ಥಿತಿಯನ್ನು ಎದುರಿಸುವ ಪರಿಸ್ಥಿತಿ ಉಂಟಾಗಿದ್ದು, ಈ ಭಾಗದ ಜನರು ಕೇವಲ ತೆಂಗು ಬೆಳೆಗೆ ಮಾತ್ರ ಜೋತುಬೀಳದೆ ಗೋಡಂಬಿ ಬೆಳೆ ಬೆಳೆಯಲು ಮುಂದಾಗಬೇಕು. ಜಿಲ್ಲೆಯ ವಾತಾವರಣ ಗೋಡಂಬಿ ಬೆಳೆಗೆ ಹೇಳಿಮಾಡಿಸಿದಂತಿದೆ ಎಂದು ಕಾನೂನು ಸಂಸದೀಯ ವ್ಯವಹಾರ ಮತ್ತು ಸಣ್ಣ ನೀರಾವರಿ ಹಾಗೂ ತುಮಕೂರು ಜಿಲ್ಲಾ ಉಸ್ತವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.         ಅವರು ಜ.31ರಂದು ಫಲಪುಷ್ಪ ಪ್ರದರ್ಶನವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಎಲ್ಲಾ ಕಲಾವಿದರಿಗಿಂತ ಶ್ರೇಷ್ಠ ಕಲಾಕಾರನೆಂದರೆ ನಮ್ಮ ಪ್ರಕೃತಿ. ಈ ಪ್ರಕೃತಿಯ ಕಲಾಕೃತಿಯ ಮುಂದೆ ನಾವೆಲ್ಲ ಮಾಡುವುದು ಕೃತಕ. ಆದರೆ ಈಗಿನ ಧಾವಂತ ಬದುಕಿನಲ್ಲಿ ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನವನ್ನು ನಮ್ಮ ಎಲ್ಲಾ ಜೀವನದ ಬದುಕಿನಲ್ಲಿ…

ಮುಂದೆ ಓದಿ...