ತುಮಕೂರು : ಕಣ್ಮನಸೆಳೆದು ಯಶಸ್ವಿಯಾದ ಫಲಪುಷ್ಪ ಪ್ರದರ್ಶನ

ತುಮಕೂರು :       ವರ್ಣಮಯ ಹೂಗಳಿಂದ ಅರಳಿದ್ದ ಆಕೃತಿಗಳು, ನಾನಾ ಹಣ್ಣುಗಳಿಂದ ಮೂಡಿದ್ದ ಆಕಾರಗಳು, ಮಕ್ಕಳನ್ನು ಸೆಳೆಯುವ ಕಾರ್ಟೂನುಗಳು, ಕಲಾವಿದನ ಕಲಾಕುಂಚದಲ್ಲಿ ರೂಪುಗೊಂಡಿದ್ದ ನಾನಾ ಚಿತ್ರಗಳು, ಕಲಾಕಾರಗಳು, ರೈತರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಪ್ರಾತ್ಯಕ್ಷಿಕೆಗಳು, ಅರಣ್ಯ-ಗುಡ್ಡದ ಪ್ರದೇಶಗಳು, ಜೇನು ಸಾಕಾಣಿಕೆಯ ಮಾದರಿ, ಹೀಗೆ ಹಳ್ಳಿ ಸೊಗಡನ್ನು ಬಿಂಬಿಸುವ ಪಂಚಾಯತಿ ಕಟ್ಟೆಯ ನೋಟ ಹೀಗೆ ನಾನಾ ಬಗೆಯಲ್ಲಿ ಜನವರಿ 31 ರಿಂದ ಮೂರು ದಿನಗಳ ಕಾಲ ತುಮಕೂರು ನಗರಲ್ಲಿ ಅನಾವರಣಗೊಂಡಿದ್ದ ಫಲಪುಷ್ಪ ಪ್ರದರ್ಶನ ನೋಡುಗರ ಕಣ್ಮನಗಳಿಗೆ ತಂಪು ನೀಡಿತು.       ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ, ಜಿಲ್ಲಾ ತೋಟಗಾರಿಕಾ ಸಂಘ ಹಾಗೂ ಕೃಷಿ ಇಲಾಖೆ ಆತ್ಮ ಯೋಜನೆ ಸಹಯೋಗದಲ್ಲಿ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ನಡೆದ ಫಲಪುಷ್ಪ ಪ್ರದರ್ಶನ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು. ಮೂರು ದಿನವೂ ವೀಕ್ಷಣೆಗೆ ಜನಸಾಗರವೇ ಹರಿದು ಬಂದಿತ್ತು. ಈ ಫಲಪುಷ್ಪ ಪ್ರದರ್ಶನ `ಸಕಲವೂ…

ಮುಂದೆ ಓದಿ...

ಖಾಸಗಿಕರಣ ವಿರೋಧಿಸಿ ಎಲ್‍ಐಸಿ ನೌಕರರ ಸಾಂಕೇತಿಕ ಪ್ರತಿಭಟನೆ

ತುಮಕೂರು :       ಭಾರತೀಯ ಜೀವವಿಮಾ ನಿಗಮವನ್ನು ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಅಖಿಲ ಭಾರತ ಜೀವವಿಮಾ ನೌಕರರ ಸಂಘ, ಅಭಿವೃದ್ಧಿ ಅಧಿಕಾರಿಗಳ ಸಂಘ ಮತ್ತು ಅಧಿಕಾರಿಗಳ ಸಂಘಟನೆಗಳು ನೇತೃತ್ವದಲ್ಲಿ ತುಮಕೂರಿನ ಗಾಂಧೀನಗರದಲ್ಲಿರುವ ಕಚೇರಿ ಮುಂದೆ ನೌಕರರು ಸಾಂಕೇತಿಕ ಪ್ರತಿಭಟನೆ ನಡೆಸಿದರು.       ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ಜೀವ ವಿಮಾ ನೌಕರರ ಸಂಘದ ಜಿಲ್ಲಾಧ್ಯಕ್ಷ ನಂಜುಡಸ್ವಾಮಿ, ಬಜೆಟ್‍ನಲ್ಲಿ ಎಲ್‍ಐಸಿ ಶೇರು ವಿಕ್ರಯಕ್ಕೆ ತೀರ್ಮಾನಿಸಿರುವುದು ಆಘಾತಕಾರಿ ಬೆಳವಣಿಗೆ. ಸಧ್ಯಕ್ಕೆ ಗ್ರಾಹಕರ ಹಣಕ್ಕೆ ಭಯವಿಲ್ಲ. ಆದರೆ ಭಾರತೀಯ ಜೀವ ವಿಮಾ ನಿಗಮ ಖಾಸಗೀಕರಣಗೊಳಿಸಿದರೆ ಸಾರ್ವಜನಿಕರ ಹಣಕ್ಕೆ ಭದ್ರತೆ ಇರುವುದಿಲ್ಲ. ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬಂದಿರುವ ಎಲ್‍ಐಸಿ ಲಾಭದಲ್ಲಿದೆ. ಇಂತಹ ಸಂಸ್ಥೆಯ ಷೇರು ವಿಕ್ರಯಕ್ಕೆ ಸರ್ಕಾರ ಮುಂದಾಗುವುದು ಸರಿಯಲ್ಲ ಎಂದರು.       ಭಾರತೀಯ ಜೀವ ವಿಮಾನ…

ಮುಂದೆ ಓದಿ...

ಅಲ್ಪಸಂಖ್ಯಾತರ ಅನುದಾನವನ್ನು ಸಮರ್ಪಕವಾಗಿ ಬಳಸಿ

 ತುಮಕೂರು :       ಅಲ್ಪಸಂಖ್ಯಾತರ ವರ್ಗದವರ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿರುವುದರಿಂದ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರುವ ಅನುದಾನವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಿ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ಜಾರ್ಜ್ ಕುರಿಯನ್ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಧಾನಮಂತ್ರಿ 15 ಅಂಶಗಳ ಹಾಗೂ ಪ್ರಧಾನಮಂತ್ರಿ ಜನ ವಿಕಾಸ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.       ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಅತಿ ಹೆಚ್ಚು ಅಲ್ಪಸಂಖ್ಯಾತರರು 308 ಜಿಲ್ಲೆಗಳನ್ನು ಮೂಲಭೂತ ಸೌಕರ್ಯ ಕಲ್ಪಿಸುವ ಕಾರ್ಯಕ್ರಮದಡಿ ಈಗಾಗಲೇ ಆಯ್ಕೆ ಮಾಡಿದ್ದು, ಈ ಪೈಕಿ ತುಮಕೂರು ಜಿಲ್ಲೆಯು ಒಂದಾಗಿದೆ. ಇನ್ನೂ ಅಲ್ಪಸಂಖ್ಯಾತರರು ಹೆಚ್ಚಿರುವ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 5 ಕಿಲೋ ಮೀಟರ್ ವ್ಯಾಪ್ತಿಗೊಳಪಡುವ…

ಮುಂದೆ ಓದಿ...

ಇನ್‍ಸ್ಪೈರ್ ಅವಾರ್ಡ್: ವಿಭಾಗ ಮಟ್ಟಕ್ಕೆ ಜಿಲ್ಲೆಯಿಂದ 8 ವಿದ್ಯಾರ್ಥಿಗಳು ಆಯ್ಕೆ

 ತುಮಕೂರು :       : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜನವರಿ 31 ಹಾಗೂ ಫೆಬ್ರವರಿ 1ರಂದು ನಡೆದ ಜಿಲ್ಲಾಮಟ್ಟದ ಇನ್‍ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 8 ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.       ಬಟವಾಡಿಯ ಚೇತನ ವಿದ್ಯಾಮಂದಿರ ಶಾಲೆಯ ವಿದ್ಯಾರ್ಥಿ ತೇಜಸ್, ಶ್ರೀ ಸಿದ್ಧಗಂಗಾ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಎಂ.ಎಸ್. ಯಶಸ್, ಶ್ರೀ ಸಿದ್ಧೇಶ್ವರ ಗ್ರಾಮಾಂತರ ಪ್ರೌಢಶಾಲೆಯ ಗಿರೀಶ್, ಕೆಸರುಮಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರೀತಿ, ಬ್ಯಾತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಿನ್ಮಯಿ, ದೊಡ್ಡವೀರನಹಳ್ಳಿ ಜಿಹೆಚ್‍ಪಿಎಸ್ ಶಾಲೆಯ ಎಲ್.ಎಸ್.ಜಯಣ್ಣ, ಕ್ಯಾತ್ಸಂದ್ರ ನಿವೇದಿತಾ ಪ್ರೌಢ ಶಾಲೆಯ ಶಿವಣ್ಣಗೌಡ, ಸತ್ಯಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಿ.ಅಮೃತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆಂದು ಕ್ಷೇತ್ರ ಶಿಕ್ಷಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದೆ ಓದಿ...