ಕೊರೋನಾ ವೈರಸ್: ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ವಾರ್ಡ್

 ತುಮಕೂರು:       ಮಾರಣಾಂತಿಕ ಕೊರೋನಾ ವೈರಸ್ ಎಲ್ಲೆಡೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ಹಾಸಿಗೆಗಳುಳ್ಳ ವಿಶೇಷ ವಾರ್ಡ್ ತೆರೆದು, ಪ್ರತ್ಯೇಕ ಸಿಬ್ಬಂದಿ ನೇಮಕ ಮಾಡಲಾಗಿದ್ದು, ದಿನದ 24 ಗಂಟೆಯು ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆ ಸನ್ನದ್ದವಾಗಿದೆ.   ಮುಂಜಾಗ್ರತಾ ಕ್ರಮಗಳು:-       ಕೊರೋನಾ ವೈರಸ್‍ಗೆ ನಿರ್ದಿಷ್ಟ ಚಿಕಿತ್ಸೆ ಕಂಡು ಹಿಡಿಯಲಾಗಿಲ್ಲ. ಆದರೆ ರೋಗ ಹರಡದಂತೆ ತಡೆಗಟ್ಟಬಹುದಾಗಿದೆ. ಕೈಕಾಲುಗಳನ್ನು ಸೋಪು, ನೀರಿನಿಂದ ತೊಳೆದುಕೊಳ್ಳಬೇಕು. ಕಣ್ಣು, ಮೂಗು, ಬಾಯಿಯನ್ನು ಕೈನಿಂದ ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು. ಕೆಮ್ಮುವಾಗ ಬಟ್ಟೆಯಿಂದ ಮುಚ್ಚಿಕೊಳ್ಳಬೇಕು. ತುಮಕೂರು ಜಿಲ್ಲೆಯಲ್ಲಿ ಜನರು ಆತಂಕ ಪಡುವ ಅಗತ್ಯವಿಲ್ಲ. ಈಲ್ಲೆಯಲ್ಲಿ ಸಂಶಯಾತ್ಮಕ ಸೋಂಕು ಕಂಡು ಬಂದ ರೋಗಿಗಳಿಗೆ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ವೈರಸ್‍ನ ಲಕ್ಷಣಗಳಿರುವವರು ಕೂಡಲೇ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ವೀರಭದ್ರಯ್ಯ ಅವರು…

ಮುಂದೆ ಓದಿ...

ಬಾಕಿ ವೇತನ, ಭತ್ಯೆ, ಪ್ರೋತ್ಸಾಹಧನ ನೀಡುವಂತೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ತುಮಕೂರು :       ಮನೆ ಬಾಡಿಗೆ ಭತ್ಯೆ, ಪ್ರಯಾಣ ಭ್ಯತೆ ನಿಲ್ಲಿಸಿರುವುದನ್ನು ಖಂಡಿಸಿ, ಕನಿಷ್ಠ ವೇತನ ಬಾಕಿ ನೀಡುವುದು, ಪ್ರೋತ್ಸಾಹಧನ ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಫಿಟ್‍ವೆಲ್ ಟೂಲ್ಸ್ ಅಂಡ್ ಫೋರ್ಜಿಂಗ್ ಕಾರ್ಮಿಕರ ಸಂಘದ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಅಂತರಸನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯ ಮುಂದೆ ಪ್ರತಿಭಟನೆ ನಡೆಸಿದರು.       ಕಾರ್ಮಿಕರಿಗೆ ನ್ಯಾಯಯುತವಾಗಿ ಸಿಗಬೇಕಾದ ರಜೆಗಳನ್ನು ನೀಡದೆ ಕಿರುಕುಳ ನೀಡಲಾಗುತ್ತಿದೆ. ಉತ್ಪಾದನಾ ಆಧಾರದಲ್ಲಿ ಕೊಡುತ್ತಿದ್ದ ಪ್ರೋತ್ಸಾಹ ಧನವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದು ಅದನ್ನು ಮುಂದುವರಿಸಬೇಕು. 2108, 2019ನೇ ಸಾಲಿನ ವಾರ್ಷಿಕ ಬೋನಸ್ 20ರಷ್ಟು ನೀಡಬೇಕು. ಎಕ್ಸ್‍ಗ್ರೇಸಿಯಾ ಶೇ.5ರಷ್ಟು ನೀಡಬೇಕು, 200 ಮಂದಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಎಲ್ಲಾ ಕಾರ್ಮಿಕರಿಗೂ ನೇಮಕಾತಿ ಆದೇಶ ನಿಡಬೇಕು. ಸೇವಾ ಭದ್ರತೆ ಒದಗಿಸಬೇಕು.ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ನಮ್ಮ ಬೇಡಿಕೆಗಳ ಕುರಿತು…

ಮುಂದೆ ಓದಿ...

ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ-ಶಾಸಕ

ತುಮಕೂರು :       ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ, ಚುನಾವಣೆಗೆ ಮೂರು ತಿಂಗಳಿದ್ದಾಗ ರಾಜಕಾರಣ ಮಾಡೋಣ ಈಗ ಅಭಿವೃದ್ಧಿಗೆ ಗಮನ ಹರಿಸೋಣ, 3-4 ತಿಂಗಳಲ್ಲಿ ಮತ್ತೆ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಹೇಳಿದರು.       ಹೊನ್ನುಡಿಕೆ ಸರ್ಕಾರಿ ಶಾಲೆ ವಾರ್ಷಿಕೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಮೈತ್ರಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದ್ದು, ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಅನುದಾನವನ್ನು ತಂದು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.        ಶಿಥಿಲಗೊಂಡಿದ್ದ ಶಾಲೆಯನ್ನು ಅಭಿವೃದ್ಧಿಪಡಿಸುವಂತೆ ಕಳೆದ ವಾರ್ಷಿಕೋತ್ಸವದಲ್ಲಿ ಶಾಲೆಯ ಶಿಕ್ಷಕರು ಮನವಿ ಮಾಡಲಾಗಿತ್ತು, ಅದರಂತೆ ಶಾಲೆಗೆ ಮೂರು ಹೊಸ ಕಟ್ಟಡಗಳನ್ನು ಒಂದೇ ವರ್ಷದಲ್ಲಿ ಅಭಿವೃದ್ಧಿಪಡಿಸಿ ಉದ್ಘಾಟಿಸಲಾಗಿದೆ, ಹೊನ್ನುಡಿಕೆ…

ಮುಂದೆ ಓದಿ...