ಫೆ.12ರಿಂದ ಫೆ.26ರವರೆಗೆ ಸಿದ್ದಗಂಗಾ ಮಠದಲ್ಲಿ ಕೃಷಿ ಮತ್ತು ವಸ್ತು ಪ್ರದರ್ಶನ!!

ತುಮಕೂರು:       ಫೆ. 12ರಿಂದ ಫೆ.26ರವರೆಗೆ ಸಿದ್ದಗಂಗಾ ಮಠದಲ್ಲಿ ಪ್ರತಿ ವರ್ಷದಂತೆ ಕೃಷಿ ಮತ್ತು ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸಮಿತಿ ಕಾರ್ಯದರ್ಶಿ ಶಿವಕುಮಾರಯ್ಯ ತಿಳಿಸಿದರು.       ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಪ್ರಾರಂಭಗೊಂಡ ನಂತರ ಬರಗಾಲದ ಕಾರಣ 1967ರಲ್ಲಿ ವಸ್ತು ಪ್ರದರ್ಶನವನ್ನು ಏರ್ಪಡಿಸಿರಲಿಲ್ಲ, ನಂತರ ಪ್ರತಿ ವರ್ಷವೂ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗುತ್ತಿದೆ ಎಂದರು.       ಮಠದಲ್ಲಿ ನಡೆಯುವ ವಸ್ತುಪ್ರದರ್ಶನ ರಾಜ್ಯದಲ್ಲಿ ಪ್ರತಿಷ್ಠಿತವಾಗಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಳಿಗೆಗಳು ಹಾಗೂ ವಿವಿಧ ಪ್ರಮುಖ ಸಂಸ್ಥೆಗಳ ಮಳಿಗೆಗಳು ವಸ್ತುಪ್ರದರ್ಶನದಲ್ಲಿದ್ದು, ಪ್ರತಿ ವರ್ಷದಂತೆ ಕೃಷಿ ಪ್ರದರ್ಶನ ರೈತರಿಗೆ ಅನುಕೂಲವಾಗಿದ್ದು, ಕಳೆದ ಆರು ತಿಂಗಳಿಂದಲೇ ತಯಾರಿ ಮಾಡಲಾಗಿದೆ ಎಂದರು.       ಕೃಷಿ ಮತ್ತು ಕೈಗಾರಿಕಾ ವಸ್ತು…

ಮುಂದೆ ಓದಿ...

ಏ.26ರಂದು ಪ್ರಥಮ ಹಂತದ ಸಪ್ತಪದಿ ಉಚಿತ ಸಾಮೂಹಿಕ ವಿವಾಹ!

ತುಮಕೂರು  :       ಬಡವರು, ಜನ ಸಾಮಾನ್ಯರಿಗೆ ಸರಳ ವಿವಾಹವಾಗಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಮೂರು ದೇಗುಲಗಳಲ್ಲಿ ಏಪ್ರಿಲ್ 26ರಂದು ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ ಎಂದು ಮುಜರಾಯಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.        ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ 100 “ಎ” ವರ್ಗದ ಆಯ್ದ ದೇವಾಲಯಗಳಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರತಿ ನವ-ಜೋಡಿಗೆ ಅಗತ್ಯತೆಗನುಣವಾಗಿ ವರನಿಗೆ ಹೂವಿನ ಹಾರ, ಪಂಚೆ, ಶರ್ಟ್ ಮತ್ತು ಶಲ್ಯಕ್ಕಾಗಿ 5000 ರೂ.ಗಳನ್ನು ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ ಮತ್ತು ರವಿಕೆ ಕಣಕ್ಕಾಗಿ 10,000 ರೂ.ಗಳನ್ನು ಮತ್ತು ವಧುವಿಗೆ…

ಮುಂದೆ ಓದಿ...