ಸಿದ್ದಲಿಂಗೇಶ್ವರಸ್ವಾಮಿ ಜಾತ್ರಾ ಅಂಗವಾಗಿ ಶ್ರೀಗಳಿಂದ ಭಿಕ್ಷಾಟನೆ!!

ತುಮಕೂರು :       ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠದಲ್ಲಿ ಫೆ. 12 ರಿಂದ ನಡೆಯಲಿರುವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ನಗರದಾದ್ಯಂತ ಭಿಕ್ಷಾಟನೆ ನಡೆಸಿದರು.       ಶ್ರೀಮಠದ ಸಂಪ್ರದಾಯದಂತೆ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಮಠಾಧ್ಯಕ್ಷರು ಭಿಕ್ಷಾಟನೆ ನಡೆಸುವ ಪದ್ದತಿ ನಡೆದು ಬಂದಿದ್ದು, ಲಿಂಗೈಕ್ಯ ಹಿರಿಯ ಶ್ರೀಗಳ ದಾರಿಯಲ್ಲೇ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಸಹ ಶ್ರೀಮಠವನ್ನು ಮುನ್ನಡೆಸುವ ಜತೆಗೆ ಜಾತ್ರಾ ಮಹೋತ್ಸವಕ್ಕೆ ದವಸ ಧಾನ್ಯ ಸಂಗ್ರಹಿಸಲು ನಗರದಾದ್ಯಂತ ಭಿಕ್ಷಾಟನೆ ನಡೆಸಿದರು.       ಮೊದಲು ಸಿದ್ದಗಂಗಾ ಮಠದಿಂದ ಬಟವಾಡಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಚೇರಿಗೆ ಭಿಕ್ಷಾಟನೆಗೆ ಆಗಮಿಸಿದ ಶ್ರೀಗಳಿಗೆ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾದಪೂಜೆ ನೆರವೇರಿಸಿ ಭಕ್ತಿ ಸಮರ್ಪಿಸಿದರು.  …

ಮುಂದೆ ಓದಿ...

ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ!!

ತುಮಕೂರು :       ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತುಮಕೂರು ಜಿಲ್ಲಾ ಖಾಸಗಿ ಅನುದಾನರಹಿತ ಶಾಲಾ ಆಡಳಿತ ಮಂಡಳಿ ಸದಸ್ಯರು ಡಿಡಿಪಿಐ ಕಚೇರಿ ಎದುರು ಪ್ರತಿಭಟನೆ ನಡೆಸಿ ಶಾಸಕ ಜ್ಯೋತಿಗಣೇಶ್ ಅವರಿಗೆ ಮನವಿ ಸಲ್ಲಿಸಿದರು.       ತುಮಕೂರು ನಗರದಲ್ಲಿ ಈಗಾಗಲೇ 130 ಅನುದಾನ ರಹಿತ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಶಾಲೆಗಳ ಹತ್ತಿರದಲ್ಲಿಯೇ ಮತ್ತೊಂದು ಪ್ರಿಸ್ಕೂಲ್ ಶಾಲೆಯನ್ನು ತೆರೆಯಲು ಡಿಡಿಪಿಐ ಹಾಗೂ ಬಿಇಒ ಅನುಮತಿ ನೀಡುತ್ತಿರುವುದು ಸರಿಯಲ್ಲ, ಕಾರ್ಪೋರೇಟ್ ಶಾಲೆಗಳ ವ್ಯಾಮೋಹದಲ್ಲಿ ಅಧಿಕಾರಿಗಳು ಸ್ಥಳೀಯ ಶಾಲಾ ಸಂಸ್ಥೆಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.       ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಖಾಸಗಿ ಅನುದಾನರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟದ ಅಧ್ಯಕ್ಷ ಹಾಲನೂರು ಎಸ್.ಲೇಪಾಕ್ಷಿ ಅವರು, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಶಾಲೆಗಳಿಗೆ ಕಡಿವಾಣ…

ಮುಂದೆ ಓದಿ...