ಟಿಎಂಸಿಸಿ ಎಟಿಎಂ ಕೇಂದ್ರಕ್ಕೆ ಸಚಿವ ಜೆಸಿಎಂ ಚಾಲನೆ

ತುಮಕೂರು :       ನಗರದ ಜೆ.ಸಿ. ರಸ್ತೆಯಲ್ಲಿರುವ ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್‍ನ ಪ್ರಧಾನ ಕಚೇರಿಯಲ್ಲಿಂದು ನೂತನವಾಗಿ ಆರಂಭಿಸಲಾಗಿರುವ ಎಟಿಎಂ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಉದ್ಘಾಟಿಸಿದರು.       ನಂತರ ಮಾತನಾಡಿದ ಸಚಿವ ಮಾಧುಸ್ವಾಮಿ ಅವರು,ತ ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ಗ್ರಾಹಕರಿಗೆ ಬಹಳ ವ್ಯಾಪಕ ಮತ್ತು ವಿಸ್ತಾರವಾದ ಸೇವೆ ನೀಡುತ್ತಿದೆ. ಸಹಕಾರ ಕ್ಷೇತ್ರದಲ್ಲಿ ಈ ರೀತಿಯ ಸೇವೆ ನೀಡುವುದು ಬಹಳ ಅಪರೂಪ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.       ಬ್ಯಾಂಕ್ ಅಧ್ಯಕ್ಷರಾದ ಜಯಕುಮಾರ್ ಅವರು ಈಗ ಎಟಿಎಂ ಸೇವೆಯನ್ನು ಸಹ ಗ್ರಾಹಕರಿಗೆ ನೀಡುತ್ತಿದ್ದು, ಈ ಎಟಿಎಂನಲ್ಲಿ ಯಾವುದೇ ಬ್ಯಾಂಕ್ ಡೆಬಿಟ್, ಕ್ರೆಡಿಟ್ ಕಾರ್ಡ್‍ಗಳನ್ನು ಬಳಸಿ ಹಣ ಡ್ರಾ ಮಾಡುವಂತಹ ಸೌಲಭ್ಯವನ್ನು ಒದಗಿಸಿಕೊಟ್ಟಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ ಎಂದರು.       ಟಿಎಂಸಿಸಿ…

ಮುಂದೆ ಓದಿ...

ಆನ್‍ಲೈನ್ ಬೆಟ್ಟಿಂಗ್ : 6 ಜನರ ಬಂಧನ, 7.15 ಲಕ್ಷ ವಶ!

ತುಮಕೂರು :          ಆನ್ ಲೈನ್ ಮೂಲಕ ಕ್ರಿಕೆಟ್ ಮತ್ತು ಕುದುರೆ ರೇಸ್ ಬೆಟ್ಟಿಂಗ್ ನಡೆಸುತ್ತಿದ್ದ 6 ಜನರ ತಂಡವನ್ನು ಬಂಧಿಸಿರುವ  ಪೊಲೀಸರು, ಬಂಧಿತರಿಂದ ಒಟ್ಟು 7.15 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.       ಮೊಬೈಲ್ ಮೂಲಕ ಲೋಟಸ್ ಮತ್ತು ಸ್ಪೆಕ್ಟ್ಟಿಕ್ಯುಲರ್ ಎಂಬ ಆಪ್ ಮೂಲಕ ಕುದುರೆ ರೇಸ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ಮಾಡಿ ತುಮಕೂರು ನಗರದ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಳ್ಳುವ ಮೂಲಕ ಅನಧಿಕೃತ ಜೂಜಾಟ ನಡೆಯುತ್ತಿದೆಯೆಂಬ ಮಾಹಿತಿ ಇತ್ತೀಚೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ವಂಶಿಕೃಷ್ಣ ಅವರಿಗೆ ಲಭಿಸಿತು. ಈ ಹಿನ್ನೆಲೆಯಲ್ಲಿ ಪ್ರಕರಣ ಭೇದಿಸಲು ಅವರು ಸಿ.ಇ.ಎನ್. ಠಾಣೆಯ ಪೊಲೀಸರ ತಂಡವೊಂದನ್ನು ರಚಿಸಿದ್ದರು.       ಈ ತಂಡವು ತನಿಖೆ ಆರಂಭಿಸಿತು. ಫೆ.9 ರಂದು ಮಧ್ಯಾಹ್ನ 1-30 ರಲ್ಲಿ ಈ ತಂಡವು ನಗರದ ಐಶ್ವರ್ಯ ಲಾಡ್ಜ್‍ನ ಕೊಠಡಿ ಸಂಖ್ಯೆ…

ಮುಂದೆ ಓದಿ...

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ – ಜಿ.ಪಂ.ಅಧ್ಯಕ್ಷೆ

 ತುಮಕೂರು :         ಬೇಸಿಗೆ ಕಾಲ ಸಮೀಪಿಸುತ್ತಿದ್ದಂತೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಲಿದ್ದು, ಕೆಟ್ಟಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರವಾಗಿ ದುರಸ್ಥಿಪಡಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿ ಬಗ್ಗೆ ಮಾಹಿತಿ ಕೇಳಿದಾಗ, ಇದಕ್ಕೆ ಉತ್ತರಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ಕೆ.ಆರ್.ಐ.ಡಿ ಎಲ್ ಸಂಸ್ಥೆಯಿಂದ 54 ಘಟಕಗಳು ಒಳಗೊಂಡಿರುತ್ತದೆ. ತುರುವೇಕೆರೆ ತಾಲೂಕಿನ 24, ಕೊರಟಗೆರೆ-4, ತಿಪಟೂರು ತಾಲೂಕಿನ 4 ಘಟಕಗಳನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಗಾಗಿ ಹೊಸದಾಗಿ ಟೆಂಡರ್ ಕರೆಯಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.…

ಮುಂದೆ ಓದಿ...