ತುಮಕೂರಿನಲ್ಲಿ ಕೈಗೊಂಡಿರುವ ಚುನಾವಣಾ ಸ್ವೀಪ್ ಕಾರ್ಯಕ್ರಮಗಳಿಗೆ ಮೆಚ್ಚುಗೆ

ತುಮಕೂರು :       ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತದಾನದ ಅರಿವು ಕುರಿತು ಜಿಲ್ಲೆಯಲ್ಲಿ ಕೈಗೊಂಡಿರುವ ಸ್ವೀಪ್ ಕಾರ್ಯಕ್ರಮಗಳ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಕಚೇರಿಯ ರಾಜ್ಯಮಟ್ಟದ ಸ್ವೀಪ್ ಸಂಚಾಲಕರಾದ ಪಿ.ಎಸ್.ವಸ್ತ್ರದ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.       ಜಿಲ್ಲಾ ಪಂಚಾಯತ್ ಕಚೇರಿಯಲ್ಲಿರುವ ಮಿನಿ ಸಭಾಂಗಣದಲ್ಲಿಂದು ನಡೆದ ಸಭೆಯ ಅಧ್ಯಕ್ಷತೆವಹಿಸಿ ಜಿಲ್ಲೆಯಲ್ಲಿ ಕೈಗೊಂಡಿರುವ ಸ್ವೀಪ್ ಕಾರ್ಯಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.        ಲೋಕಸಭಾ ಸಾರ್ವತ್ರಿಕ-2019ರ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ವಿಭಿನ್ನ ರೀತಿಯ ಪ್ರಚಾರ ಕಾರ್ಯಕ್ರಮಗಳು ರಾಜ್ಯಕ್ಕೆ ಮಾದರಿಯಾಗಿವೆ. ಈ ರೀತಿಯ ಸ್ವೀಪ್ ಕಾರ್ಯದಿಂದಾಗಿ ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಮತದಾನವಾಗಿದೆ ಎಂದು ಅವರು ತಿಳಿಸಿದರು.       ಜಿಲ್ಲೆಯಲ್ಲಿ 1-1-2020ಕ್ಕೆ 18 ವರ್ಷ ತುಂಬಿರುವವರು ಮತದಾರರ ಪಟ್ಟಿಗೆ ಕಡ್ಡಾಯವಾಗಿ ತಮ್ಮ ಹೆಸರನ್ನು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಯುವ ಮತದಾರರನ್ನು ನೋಂದಾಯಿಸುವಲ್ಲಿ…

ಮುಂದೆ ಓದಿ...

ಶ್ರೀ ಸಿದ್ದಲಿಂಗೇಶ್ವರಸ್ವಾಮಿ ದನಗಳ ಜಾತ್ರೆಯಲ್ಲಿ ಉತ್ತಮ ರಾಸುಗಳ ಆಯ್ಕೆ!!

ತುಮಕೂರು :       ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದನಗಳ ಜಾತ್ರೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಬಹುಮಾನ ನೀಡಲು ಉತ್ತರ ರಾಸುಗಳ ಆಯ್ಕೆ ಪ್ರಕ್ರಿಯೆ ನಡೆಯಿತು.       ಉತ್ತಮ ರಾಸುಗಳ ಆಯ್ಕೆಯಲ್ಲಿ ಹೋರಿಗಳು ಮತ್ತು ಎತ್ತುಗಳು ಎಂದು 2 ವಿಭಾಗಗಳಾಗಿ ವಿಂಗಡಿಸಲಾಗಿತ್ತು. ಈ ಪೈಕಿ ಹೋರಿಗಳಲ್ಲಿ 5 ವಿಭಾಗ ಹಾಗೂ ಎತ್ತುಗಳಲ್ಲಿ 5 ವಿಭಾಗದಂತೆ ಒಟ್ಟು 10 ರೀತಿಯಲ್ಲಿ ರಾಸುಗಳನ್ನು ಆಯ್ಕೆ ಪ್ರಕ್ರಿಯೆಗೆ ಒಳಪಡಿಸಲಾಯಿತು.       ಹೋರಿಗಳ ವಿಭಾಗದಲ್ಲಿ ಹಾಲು ಹಲ್ಲು, 2 ಹಲ್ಲು, 4 ಹಲ್ಲು, 6 ಹಲ್ಲು ಹಾಗೂ ಬಾಯಿಗೂಡಿದ ಹೋರಿಗಳು ಎಂದು ವಿಂಗಡಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.  ಎತ್ತುಗಳಲ್ಲೂ ಸಹ ತಳಿ, ಲಕ್ಷಣಗಳು, ಮುಖ ಛಾಯೆ, ಮೈಬಣ್ಣ, ನಡಿಗೆ, ಕಾಲು ಎಲ್ಲವನ್ನೂ ಗಮನಿಸಿ ಬಹುಮಾನಕ್ಕೆ ರಾಸುಗಳನ್ನು ಆಯ್ಕೆ ಮಾಡಲಾಗುತ್ತದೆ…

ಮುಂದೆ ಓದಿ...

ಜಿಲ್ಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರವಾಸ ಕಾರ್ಯಕ್ರಮ

ತುಮಕೂರು :       ಕರ್ನಾಟಕ ರಾಜ್ಯ ಮಾನ್ಯ ಮುಖ್ಯಮಂತ್ರಿಗಳಾಗಿರುವ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ತುಮಕೂರು ಜಿಲ್ಲೆಯಲ್ಲಿ ಫೆಬ್ರವರಿ 19ರಂದು ಕೈಗೊಂಡಿರುವ ತಾತ್ಕಾಲಿಕ ಪ್ರವಾಸ ಕಾರ್ಯಕ್ರಮದ ವಿವರ.       ಮಾನ್ಯ ಮುಖ್ಯಮಂತ್ರಿಗಳು ಬೆಳಿಗ್ಗೆ 8 ಗಂಟೆಗೆ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ (ಹೆಲಿಕ್ಯಾಪ್ಟರ್) ಮೂಲಕ ಪ್ರಯಾಣ ಬೆಳೆಸಿ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ಹೆಲಿಪ್ಯಾಡ್‍ಗೆ 8-45ಕ್ಕೆ ಆಗಮಿಸುವರು. ಮುಖ್ಯಮಂತ್ರಿಗಳು ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠದ ವತಿಯಿಂದ ಆಯೋಜಿಸಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು.          ಬೆಳಿಗ್ಗೆ 9-30ಕ್ಕೆ ನೊಣವಿನಕೆರೆ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ಮಾನ್ಯ ಮುಖ್ಯಮಂತ್ರಿಗಳು ಮರುಪ್ರಯಾಣ ಮಾಡುವರು ಎಂದು ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದೆ ಓದಿ...