ತುಮಕೂರು : ಪಾಲಿಕೆ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ!

ತುಮಕೂರು :       ಮಹಾನಗರಪಾಲಿಕೆಯ ವಿವಿಧ 4 ಸ್ಥಾಯಿ ಸಮಿತಿಗಳಿಗೆ ಇಂದು ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಭೆಯಲ್ಲಿ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರ ಸ್ಥಾನಕ್ಕೆ 5ನೇ ವಾರ್ಡ್‍ನ ಸದಸ್ಯ ಟಿ.ಎಂ.ಮಹೇಶ್; ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಹಣಕಾಸು ನ್ಯಾಯಕ್ಕಾಗಿ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ 23ನೇ ವಾರ್ಡ್‍ನ ಸದಸ್ಯ ಟಿ.ಕೆ.ನರಸಿಂಹಮೂರ್ತಿ; ಪಟ್ಟಣ ಯೋಜನೆ ಮತ್ತು ಸುಧಾರಣೆಗಾಗಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 26ನೇ ವಾರ್ಡ್‍ನ ಸದಸ್ಯ ಹೆಚ್. ಮಲ್ಲಿಕಾರ್ಜುನಯ್ಯ ಹಾಗೂ ಲೆಕ್ಕಪತ್ರಗಳ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ 27ನೇ ವಾರ್ಡ್‍ನ ಸದಸ್ಯೆ ಚಂದ್ರಕಲಾ ಅವರು ಅವಿರೋಧವಾಗಿ ಆಯ್ಕೆಯಾದರು.       ಇದಕ್ಕೂ ಮುನ್ನ ಪಾಲಿಕೆ ಆಯುಕ್ತ ಭೂಬಾಲನ್ ಸಭೆಗೆ ಸ್ವಾಗತ ಕೋರಿದ ನಂತರ ಸಭೆಯ ಅಧ್ಯಕ್ಷತೆವಹಿಸಿದ್ದ ಮೇಯರ್ ಫರೀದಾ ಬೇಗಂ ಅವರು ಪಾಲಿಕೆ ಸದಸ್ಯರೆಲ್ಲರ ಹಾಜರಾತಿ ಪಡೆದರು. ವಿವಿಧ 4…

ಮುಂದೆ ಓದಿ...

ಪಿಯುಸಿ ಪರೀಕ್ಷೆ ಪಾರದರ್ಶಕವಾಗಿ ಯಶಸ್ವಿಗೊಳಿಸಲು ಡಿಸಿ ಸೂಚನೆ!

ತುಮಕೂರು :       2020ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ 2020ರ ಮಾರ್ಚ್ 4ರಿಂದ 23ರವರೆಗೆ ನಡೆಯಲಿದ್ದು, ತುಮಕೂರು ಜಿಲ್ಲೆಯಲ್ಲಿ ಈ ಹಿಂದೆ ಘಟಿಸಿರುವಂತಹ ಘಟನೆಗಳು ಮರುಕಳಿಸದಂತೆ ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.       ಅವರು ಇಂದು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ತುಮಕೂರು ಜಿಲ್ಲಾ ಖಜಾನೆಯಿಂದ ತುಮಕೂರು, ಗುಬ್ಬಿ, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ ಮತ್ತು ಕುಣಿಗಲ್ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ 24 ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳು ರವಾನೆ ಆಗಲಿವೆ. ಅದೇರೀತಿ ಮಧುಗಿರಿ ಉಪ ಖಜಾನೆಯಿಂದ ಮಧುಗಿರಿ, ಶಿರಾ, ಪಾವಗಡ ಹಾಗೂ ಕೊರಟಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ 10 ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳು…

ಮುಂದೆ ಓದಿ...