ಸ್ಮಾಟ್‍ಸಿಟಿ ಕಾಮಗಾರಿ : ಕಾಮಗಾರಿ ಪ್ರಗತಿ ಸಾಧಿಸದ 11 ಗುತ್ತಿಗೆದಾರರಿಗೆ 1.53ಕೋಟಿ ರೂ.ಗಳ ದಂಡ

 ತುಮಕೂರು:       ನಗರದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದೇ ಇರುವ 11 ಗುತ್ತಿಗೆದಾರರಿಗೆ ಒಟ್ಟು 1.53 ಕೋಟಿ ರೂ.ಗಳ ದಂಡ ವಿಧಿಸಲಾಗಿದೆ ಎಂದು ಸ್ಮಾರ್ಟ್‍ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.       ನಗರದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಪ್ರಗತಿಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿರುವುದರಿಂದ ಕಾಮಗಾರಿ ಪ್ರಗತಿಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಗುತ್ತಿಗೆದಾರರಿಗೆ ಈ ದಂಡವನ್ನು ವಿಧಿಸಲಾಗಿದೆ. ಅಲ್ಲದೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರವಹಿಸಿ ನಿಗಧಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಆದೇಶ ನೀಡಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.      …

ಮುಂದೆ ಓದಿ...

ಸಪ್ತಪದಿ ರಥಕ್ಕೆ ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ಚಾಲನೆ

ತುಮಕೂರು :       ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ, ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 26ರಂದು ನಡೆಯುವ ಸಪ್ತಪದಿ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಪ್ತಪದಿ ರಥಕ್ಕೆ ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಚಾಲನೆ ನೀಡಿದರು.       ಅನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಸಪ್ತಪದಿ ರಥ ಸಂಚರಿಸಲಿದ್ದು, ಜನರಿಗೆ ಸಪ್ತಪದಿ ಸರಳ ಸಾಮೂಹಿಕ ವಿವಾಹದ ಬಗ್ಗೆ ಮಾಹಿತಿ ನೀಡಲಿದೆ. ಜಿಲ್ಲೆಯ ಜನತೆ ಸರಳ ಸಾಮೂಹಿಕ ವಿವಾಹದ ಸದುಪಯೋಗಪಡಿಸಿಕೊಳ್ಳಬೇಕು ಎಂದರು.       ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶೇಖರ್, ತಹಶೀಲ್ದಾರ್ ಮೋಹನ್, ರಾಜ್ಯ ಧಾರ್ಮಿಕ ಪರಿಷತ್‍ನ ಸದಸ್ಯ ಸಿದ್ಧಲಿಂಗ ಪ್ರಭು, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹೆಚ್.ಸವಿತ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಮುಂದೆ ಓದಿ...

ಬಗರ್‍ಹುಕುಂ ಸಾಗುವಳಿ ಪರಿಶೀಲಿಸಿ ಭೂಮಿ ನೀಡಲು ಜಿಲ್ಲಾಡಳಿತಕ್ಕೆ ಸಚಿವರ ಸೂಚನೆ

ತುಮಕೂರು :       ಸಾಮಾಜಿಕ ಅರಣ್ಯ, ಡೀಮ್ಡ್ ಅರಣ್ಯ, ಗೋಮಾಳ ಮತ್ತು ಸರ್ಕಾರಿ ಭೂಮಿಗಳಲ್ಲಿ ಬಗರ್‍ಹುಕುಂ ಸಾಗುವಳಿ ಮಾಡುತ್ತಿರುವ ಭೂಮಿಯ ಸರ್ವೇ ಕಾರ್ಯ ನಡೆಸಿ ಪರಿಶೀಲಿಸಿ ಸಾಗುವಳಿದಾರರಿಗೆ ಭೂಮಿ ನೀಡುವಂತೆ ಕಾನೂನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.         ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವ ಮಾಧುಸ್ವಾಮಿ ಅವರು ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಬಗರ್‍ಹುಕುಂ ಸಾಗುವಳಿದಾರರ ಹೋರಾಟ ಸಮಿತಿಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಗುಬ್ಬಿ ತಾಲೂಕು ಮಂಚಲದೊರೆ ಗ್ರಾಮ ಪಂಚಾಯಿತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ವ್ಯಾಪ್ತಿಯಲ್ಲಿ ಅರಣ್ಯಭೂಮಿಯ ಜಂಟಿ ಸರ್ವೇ ಕಾರ್ಯ ನಡೆಸಿ ಹಿಂದೆ ಭೂಮಿ ಕಳೆದುಕೊಂಡವರಿಗೆ ಭೂಮಿ ನೀಡುವುದಾಗಿ ಭರವಸೆ ನೀಡಿದರು. ತುಮಕೂರು ತಾಲೂಕು ಶೀಬಿ ಮತ್ತು ಇತರೆ ಗ್ರಾಮಗಳಲ್ಲಿ ಸಾಮಾಜಿಕ ಅರಣ್ಯ, ಡೀಮ್ಡ್ ಫಾರೆಸ್ಟ್ ಪ್ರಕರಣಗಳಲ್ಲಿ ಬಗರ್‍ಹುಕುಂ ಸಾಗುವಳಿ…

ಮುಂದೆ ಓದಿ...