ತುಮಕೂರು : ಕೊರೋನಾ ವೈರಸ್ ಹರಡದಂತೆ ಎಚ್ಚರವಹಿಸಲು ಡಿಸಿ ಸೂಚನೆ

ತುಮಕೂರು:       ಮಾರಣಾಂತಿಕ ಕೊರೋನಾ ವೈರಸ್ ಜಿಲ್ಲೆಯಲ್ಲಿ ಹರಡದಂತೆ ಎಚ್ಚರವಹಿಸಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೊರೋನಾ ವೈರಸ್ ಪ್ರಕರಣ ಹರಡದಂತೆ ತಡೆಗಟ್ಟಲು ಮುಂಜಾಗ್ರತೆ ವಹಿಸುವ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೊರೋನಾ ವೈರಸ್‍ನಿಂದಾಗಿ ಚೀನಾ ದೇಶ ತತ್ತರಿಸುತ್ತಿದ್ದು, ವಿದೇಶಗಳಲ್ಲಿದ್ದ ಭಾರತೀಯರು ದೇಶಕ್ಕೆ ಮರಳಿದ್ದಾರೆ. ಈ ಪೈಕಿ ತೆಲಗಾಂಣ ರಾಜ್ಯದಲ್ಲಿ ಸೋಂಕು ಪತ್ತೆಯಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಆರೋಗ್ಯ ಇಲಾಖೆಯು ಎಲ್ಲಾ ರೀತಿಯಲ್ಲೂ ಸನ್ನದ್ಧವಾಗಿದೆ ಎಂದರು.       ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ ಪ್ರತ್ಯೇಕವಾಗಿ 5 ಹಾಸಿಗೆಗಳುಳ್ಳ ವಿಶೇಷ ವಾರ್ಡ್ ತೆರೆದು, ಪ್ರತ್ಯೇಕ ಸಿಬ್ಬಂದಿ ನೇಮಕ ಮಾಡಲಾಗಿದೆ. ಅದೇ ರೀತಿ ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ತಾಲ್ಲೂಕ್ ಸರ್ಕಾರಿ ಆಸ್ಪತ್ರೆಯಲ್ಲಿ…

ಮುಂದೆ ಓದಿ...

ಒಂಟಿ ಮನೆಯಲ್ಲಿರುವ ಕುಟುಂಬಗಳು ಎಚ್ಚರಿಕೆಯಿಂದ ಇರುವಂತೆ ತಹಶೀಲ್ದಾರ್ ಸೂಚನೆ

ತುಮಕೂರು :        ತುಮಕೂರು ತಾಲ್ಲೂಕಿನಾದ್ಯಂತ ಹೆಚ್ಚಿನದಾಗಿ ಗ್ರಾಮೀಣ ಭಾಗದಲ್ಲಿ ಚಿರತೆ ದಾಳಿ ನಡೆಯುತ್ತಿದ್ದು, ಒಂಟಿಮನೆಯಲ್ಲಿರುವ ಕುಟುಂಬಗಳು ಎಚ್ಚರಿಕೆಯಿಂದ ಇರಬೇಕು ಎಂದು ತಾಲ್ಲೂಕಿನ ತಹಶೀಲ್ದಾರ್ ಮೋಹನ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.       ನಗರದ ತಾಲ್ಲೂಕು ತಹಶೀಲ್ದಾರ್ ಕಛೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು, ವೃದ್ದರು ಮತ್ತು ಮಹಿಳೆಯರು ಯಾವುದೇ ಕಾರಣಕ್ಕೂ ಒಂಟಿಯಾಗಿ ಓಡಾಡಬಾರದು. ಸಂಜೆ 6 ಗಂಟೆಯೊಳಗೆ ಮನೆಯನ್ನು ಸೇರಬೇಕು ಎಂದು ಮನವಿ ಮಾಡಿದರು.       ಚಿರತೆಯು ಕಂಡಲ್ಲಿ ಯಾವುದೇ ಕಾರಣಕ್ಕೂ ಹೆಚ್ಚು ಜನ ಸೇರಿ ಗದ್ದಲ ಮಾಡದೇ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು. ದನಗಳನ್ನು ಮೇಯಿಸಲು ಹೊಲಕ್ಕೆ ಹೋದಾಗ ಬಯಲು ಪ್ರದೇಶದಲ್ಲಿ ಕುಳಿತುಕೊಳ್ಳಬೇಕು. ಪೊದೆಗಳ ಬಳಿ ಒಂಟಿಯಾಗಿ ಕೂರಬಾರದು. ಸಂಜೆ 6 ಗಂಟೆಯ ನಂತರ ಎಲ್ಲಾ ಸಾಕು ಪ್ರಾಣಿಗಳನ್ನು ಮನೆಯ…

ಮುಂದೆ ಓದಿ...