ಕಾರ್ ಗಳ ನಡುವೆ ಭೀಕರ ಅಪಘಾತ: 13 ಮಂದಿ ಸಾವು

ತುಮಕೂರು:        ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೈಲಾಡಕರೆ ಗ್ರಾಮದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಒಂದು ವರ್ಷದ ಬಾಲಕ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ.      ವೇಗದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಟವೇರಾ ಹಾಗೂ ಬ್ರೀಜಾ ಕಾರುಗಳ ಮಧ್ಯೆ ಈ ಅಪಘಾತ ಸಂಭವಿಸಿದೆ.        ಮಂಜುನಾಥ್ (35), ತನುಜಾ (25), ಒಂಬತ್ತು ತಿಂಗಳ ಹೆಣ್ಣು ಮಗು, ಗೌರಮ್ಮ (60), ರತ್ನಮ್ಮ (52), ಸೌಂದರರಾಜ್ (48), ರಾಜೇಂದ್ರ (27), ಸರಳಾ (32), ಪ್ರಶನ್ಯಾ (14), ಮಾಲಾಶ್ರೀ (4), ಲಕ್ಷ್ಮೀಕಾಂತ್ (24), ಸಂದೀಪ (36), ಮಧು (28)  ಮೃತಪಟ್ಟವರು.       ನಾಲ್ಕು ಪ್ರಯಾಣಿಕರು ಬ್ರೀಜಾ ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದು, ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಹೊಸೂರು ಮೂಲಕ ಬೆಂಗಳೂರು ಕಡೆಗೆ ಹೋಗುತ್ತಿದ್ದ…

ಮುಂದೆ ಓದಿ...

ಮಾರ್ಚ್ ಅಂತ್ಯದೊಳಗೆ ಶೇ.100ರಷ್ಟು ಪ್ರಗತಿ ಸಾಧಿಸಿ – ಡಿಸಿ ಸೂಚನೆ

ತುಮಕೂರು :       ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನವನ್ನು ಬಳಸಿಕೊಂಡು ಮಾರ್ಚ್ ಅಂತ್ಯದೊಳಗೆ ಶೇ.100ರಷ್ಟು ಪ್ರಗತಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.        ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್‍ಸಿಪಿ/ಟಿಎಸ್‍ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.        ಇಲಾಖೆವಾರು ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನ ಹಾಗೂ ವೆಚ್ಚವಾಗಿರುವ ಮೊತ್ತದ ಬಗ್ಗೆ ಇಲಾಖೆ ಅಧಿಕಾರಿಗಳಿಂದ ದೃಢೀಕರಣ ಪಡೆಯುವಂತೆ ಜಿಲ್ಲಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.        ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಹೆಚ್ಚುವರಿ ಅನುದಾನ ಬಿಡುಗಡೆಯಾಗುತ್ತಿರುವ ಇಲಾಖೆಗಳಲ್ಲಿ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿಟ್ಟುಕೊಳ್ಳಿ ಎಂದರು. ಅಲ್ಲದೇ ಸಮಸ್ಯೆ ಇದ್ದರೆ ಅದನ್ನು ನೇರವಾಗಿ…

ಮುಂದೆ ಓದಿ...