ಮಾ.15ರಂದು ಸಪ್ತಪದಿ ಸಾಮೂಹಿಕ ವಿವಾಹ ವಿಚಾರ ಸಂಕಿರಣ

ತುಮಕೂರು :       ಮುಜರಾಯಿ ಇಲಾಖೆಯ ಸಪ್ತಪದಿ-ಸಾಮೂಹಿಕ ವಿವಾಹ ಕಾರ್ಯಕ್ರಮದ ಕುರಿತು ಅರಿವು ಮೂಡಿಸಲು ಮಾರ್ಚ್ 15ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ಅವರು ತಿಳಿಸಿದರು.       ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಪ್ತಪದಿ ವಿಚಾರ ಸಂಕಿರಣದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಮತನಾಡಿದ ಅವರು, ಜಿಲ್ಲೆಯಲ್ಲಿ ಆಯ್ಕೆಯಾಗಿರುವ ದೇವಾಲಯಗಳಲ್ಲಿ ಎಪ್ರಿಲ್ 26 ರಂದು ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮ ಕುರಿತು ಜನರಿಗೆ ಹೆಚ್ಚಿನ ಮಾಹಿತಿ ನೀಡುವ ಸಲುವಾಗಿ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ ಎಂದರು.       ವಿಚಾರ ಸಂಕಿರಣದಲ್ಲಿ ಮುಜರಾಯಿ ಸಚಿವರು ಭಾಗವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಸಂಸದರು ಹಾಗೂ ಎಲ್ಲಾ ಶಾಸಕರನ್ನು ವಿಚಾರ ಸಂಕಿರಣಕ್ಕೆ ಆಹ್ವಾನಿಸಬೇಕು. ಈ ಕಾರ್ಯಕ್ರಮದಲ್ಲಿ ಸಪ್ತಪದಿ ಸಾಮೂಹಿಕ ವಿವಾಹದ…

ಮುಂದೆ ಓದಿ...

ಶೌಚಾಲಯ ರಹಿತ ಕುಟುಂಬಗಳಿಗೆ 6 ವಾರದೊಳಗಾಗಿ ಶೌಚಾಲಯವನ್ನು ನಿರ್ಮಿಸಿ

ತುಮಕೂರು :       ಕಳೆದ 2012ರಲ್ಲಿ ನಡೆಸಿದ ಬೇಸ್‍ಲೈನ್ ಸರ್ವೆ ಸಮೀಕ್ಷೆಯಲ್ಲಿ ಹೊರಗುಳಿದ ಎಲ್ಲ ಶೌಚಾಲಯ ರಹಿತ ಕುಟುಂಬಗಳಿಗೆ ಮುಂದಿನ 6 ವಾರದೊಳಗಾಗಿ ತಪ್ಪದೇ ಶೌಚಾಲಯವನ್ನು ನಿರ್ಮಿಸಿಕೊಡಬೇಕು ಎಂದು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯದರ್ಶಿ ಪರಮೇಶ್ವರನ್ ಅಯ್ಯರ್ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು 10 ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸ್ವಚ್ಛ ಭಾರತ್ ಮಿಷನ್(ಗ್ರಾ)ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಬಯಲು ಬಹಿರ್ದೆಸೆ ಮುಕ್ತ ರಾಷ್ಟ್ರವನ್ನಾಗಿ ನಿರ್ಮಿಸಲು ಕೇಂದ್ರವು ಮಹತ್ವಾಕಾಂಕ್ಷಿ ಸ್ವಚ್ಛಭಾರತ್ ಮಿಷನ್(ಗ್ರಾ) ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆ ಜಾರಿಗೆ ಬಂದು 5 ವರ್ಷ ಕಳೆದಿದ್ದು, ಮುಂದಿನ 5 ವರ್ಷಗಳಿಗಾಗಿ 2ನೇ ಹಂತದಲ್ಲಿ ಸ್ವಚ್ಛಭಾರತ್(ಮಿಷನ್) ಯೋಜನೆಯನ್ನು ಅನುಷ್ಠಾನಗೊಳಿಸಲು ಯೋಜಿಸಲಾಗಿದೆ. ಇದಕ್ಕಾಗಿ 1.4ಲಕ್ಷಕೋಟಿ ರೂ.ಗಳ ಅಂದಾಜು ವೆಚ್ಚದ ಅನುದಾನವನ್ನು ಬಿಡುಗಡೆ…

ಮುಂದೆ ಓದಿ...

ಬೆಂಗಳೂರಿನಲ್ಲಿ ಕೊರೋನಾ ವೈರಸ್ ಪತ್ತೆ : ಜಿಲ್ಲೆಯಲ್ಲಿ ಮುಂಜಾಗ್ರ ಡಿ.ಸಿ. ಸೂಚನೆ

ತುಮಕೂರು:       ಬೆಂಗಳೂರು ನಗರದಲ್ಲಿ 4 ಮಂದಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದ್ದು, ತುಮಕೂರು ನಗರವು ಬೆಂಗಳೂರಿಗೆ ಸಮೀಪವಿರುವುದರಿಂದ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೊರೋನಾ ವೈರಸ್ ನಿಯಂತ್ರಣ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಿದೇಶದಿಂದ ಬರುವ ಜಿಲ್ಲೆಯ ಜನರನ್ನು ಪರೀಕ್ಷಿಸಿ, ಕೊರೋನಾ ವೈರಸ್ ಲಕ್ಷಣ ಕಂಡು ಬಂದಲ್ಲಿ ಕೂಡಲೇ ಅವರನ್ನು 14 ದಿನಗಳಿಂದ 28 ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.       ವೈಧ್ಯರು ಹಾಗೂ ವೈಧ್ಯಕೀಯ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಯುವ ಕುರಿತು ಒಂದು ಸುತ್ತು ತರಬೇತಿ ನೀಡಲಾಗಿದೆ. ತಾಲ್ಲೂಕು ಆಸ್ಪತ್ರೆಯ ವೈಧ್ಯರು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಿದ್ದು, ಈ…

ಮುಂದೆ ಓದಿ...

ಗುಬ್ಬಿ : ಅಮ್ಮನಘಟ್ಟ ಗ್ರಾಮ ಲೆಕ್ಕಿಗ ಮುರುಳಿ ಅಮಾನತ್ತು!

ತುಮಕೂರು:       ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ತಿಪ್ಪೂರು ಗ್ರಾಮದಲ್ಲಿ ತೆಂಗು ಹಾಗೂ ಅಡಿಕೆ ಮರಗಳನ್ನು ಕಡಿದು ತಹಶೀಲ್ದಾರರ ಮೌಖಿಕ ಆದೇಶವನ್ನು ಮೀರಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವುದರಿಂದ ಅಮ್ಮನಘಟ್ಟ ವೃತ್ತದ ಗ್ರಾಮ ಲೆಕ್ಕಿಗ ಮುರುಳಿ ಅವರನ್ನು ಜಿಲ್ಲಾಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರ ಡಾ: ಕೆ. ರಾಕೇಶ್ ಕುಮಾರ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತಿನಲ್ಲಿಟ್ಟು ಆದೇಶ ಹೊರಡಿಸಿದ್ದಾರೆ.       ತಿಪ್ಪೂರು ಗ್ರಾಮದ ಶ್ರೀ ಉಡುಸಲಮ್ಮ ದೇವರ ಜಾತ್ರಾ ಮಹೋತ್ಸವವು ಮಾರ್ಚ್ 12 ರಿಂದ 14ರವರೆಗೆ ನಡೆಯಲಿರುವುದರಿಂದ ಜಾತ್ರೆಗೆ ಸುಮಾರು 5 ಸಾವಿರ ಜನ ಸೇರುವ ನಿರೀಕ್ಷೆ ಇದ್ದುದರಿಂದ ದೇವಸ್ಥಾನದ ಧಾರ್ಮಿಕ ಸಮಾರಂಭ/ ಉತ್ಸವ/ ರಥೋತ್ಸವ/ ಮುತ್ತಿನ ಪಲ್ಲಕ್ಕಿ ನಡೆಯುತ್ತಿದ್ದು, ವಾಹನಗಳ ನಿಲುಗಡೆಗೆ ಸ್ಥಳಾವಕಾಶಕ್ಕಾಗಿ ಕೇವಲ ಸಣ್ಣ ಗಿಡಗಳನ್ನು ತೆರವುಗೊಳಿಸಿ ಜಾತ್ರೆಗೆ ಅನುವು ಮಾಡಿಕೊಡಲು ತಹಶೀಲ್ದಾರರು ಮೌಖಿಕವಾಗಿ ಮುರುಳಿ ಅವರಿಗೆ ಆದೇಶ ನೀಡಿದ್ದರೂ ಗ್ರಾಮ…

ಮುಂದೆ ಓದಿ...