ಕರೊನಾ ಸೋಂಕು ನಿವಾರಣೆ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ

ತುಮಕೂರು:       ಜಿಲ್ಲೆಯಲ್ಲಿ ಕರೊನಾ ವೈರಸ್ ಬಗ್ಗೆ ಭಯಬೇಡ ಮುಂಜಾಗ್ರತೆ ಇರಲಿ ಕರೊನಾ ಸೋಂಕು ತಡೆಯಲು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೊಷಿಸಿ ಮುನ್ನೇಚ್ಚರಿಕೆ ಕ್ರಮವಹಿಸುವಂತೆ ಸೂಚಿಸಲಾಗಿದ್ದು, ಜಿಲ್ಲಾಡಳಿತ ಎಲ್ಲಾ ರೀತಿಯ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ತಿಳಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನೇದ್ದೇಸಿ ಮಾತನಾಡಿದ ಅವರು, ವಿದೇಶದಿಂದ ಜಿಲ್ಲೆಗೆ 94 ಜನ ಪ್ರಯಾಣ ಬೆಳೆಸಿದ್ದು, ಅವರಲ್ಲಿ ಮನೆಯಲ್ಲೀರಿಸಿ ತಪಾಸಣೆಗೊಳಪಡುತ್ತಿರುವವರ ಸಂಖ್ಯೆ 83, ನಿಗಾವಣೆಯಲ್ಲಿ 28 ದಿನಗಳ ಅವಧಿ ಮುಗಿಸಿರುವವರ ಸಂಖ್ಯೆ 8, ಮರಳಿ ವಿದೇಶಕ್ಕೆ ಪ್ರಯಾಣ ಮಾಡಿರುವವರ ಸಂಖ್ಯೆ 3, ರಕ್ತ ಗಂಟಲು ಮಾದರಿಗಳ ಪರೀಕ್ಷೆ ನಡೆಸಿರುವವರ ಸಂಖ್ಯೆ 8 ಇವರಲ್ಲಿ ಸೋಂಕು ಇಲ್ಲದೇ ಇರುವ ಬಗ್ಗೆ ದೃಢಪಟ್ಟಿದೆ ಎಂದು ಅವರು ವಿವರಣೆ ನೀಡಿದರು.       ಕೇಂದ್ರ ಮತ್ತು…

ಮುಂದೆ ಓದಿ...

ಮನೆ-ಮನೆಗೆ ಭೇಟಿ ನೀಡಿ ಕೊರೊನಾ ಬಗ್ಗೆ ಅರಿವು ಮೂಡಿಸಲಾಗುವುದು – ಡೀಸಿ

ತುಮಕೂರು:       ಜಿಲ್ಲೆಯ ಪ್ರತಿ ಮನೆ-ಮನೆಗಳಿಗೂ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಿ ಜನರಿಗೆ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಬಗ್ಗೆ ಇಂದಿನಿಂದ ಜನರಿಗೆ ಅರಿವು ಮೂಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ಅವರು ಸೂಚಿಸಿದರು.       ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಆರೋಗ್ಯ ಟಾಸ್ಕ್‍ಪೊರ್ಸ್ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಐಇಸಿ ಕಾರ್ಯಕ್ರಮಗಳನ್ನು ಹೆಚ್ಚು ಜನರನ್ನು ಸೇರಿಸಿ ಮಾಡಲು ಸಾಧ್ಯವಿಲ್ಲದ ಕಾರಣ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಸಹಕಾರದೊಂದಿಗೆ ಪ್ರತಿ ಮನೆಗೆ ತೆರಳಿ ಕರೊನಾ ಮುಂಜಾಗ್ರತಾ ಕ್ರಮಗಳ ಕುರಿತ ಕರಪತ್ರಗಳನ್ನು ಎಚ್ಚರಿಕೆಯಿಂದ ಹಂಚುವಂತೆ ಕ್ರಮ ಕೈಗೊಳ್ಳಬೇಕು ಎಂದು ಡಿಹೆಚ್‍ಓ ಡಾ||ಬಿ.ಆರ್.ಚಂದ್ರಿಕಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ನಟರಾಜ್ ಅವರಿಗೆ ಸೂಚನೆ ನೀಡಿದರು.    …

ಮುಂದೆ ಓದಿ...

ಗ್ರಾಮಕ್ಕೆ ರಸ್ತೆ ನಿರ್ಮಿಸಿಕೊಡಲು ಕುಪ್ಪೂರು ಗ್ರಾಮಸ್ಥರ ಆಗ್ರಹ

ತುಮಕೂರು :      ತಾಲ್ಲೂಕಿನ ಕುಪ್ಪೂರು ಗ್ರಾಮಕ್ಕೆ ಮೂಲಭೂತ ರಸ್ತೆ ಸಂಪರ್ಕ ಕಲ್ಪಿಸಿಕೊಂಡುವಂತೆ ಗ್ರಾಮಸ್ಥರು ಆಗ್ರಹಿಸಿದರು.       ಸ್ಮಾರ್ಟ್‍ಸಿಟಿ ಯೋಜನೆಯಡಿ ಬುಗುಡನಹಳ್ಳಿ ಕೆರೆಯಿಂದ ಹೇಮಾವತಿ ನೀರನ್ನು ತುಮಕೂರಿನ ಅಮಾನಿಕೆರೆಗೆ ತುಂಬಿಸುವ ಯೋಜನೆ ಕೊಳವೆ ಮಾರ್ಗ ಅಳವಡಿಸುವ ಕಾರ್ಯ ತಿಪ್ಪೂರು ಗ್ರಾಮದಲ್ಲಿ ನಡೆಯುತ್ತಿರುವ ಹಿನ್ನಲೆಯಲ್ಲಿ ಮೊದಲು ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಿ ಆ ನಂತರ ತುಮಕೂರು ನಗರಕ್ಕೆ ನೀರು ಕೊಡೊಯ್ಯುವ ಕೊಳವೆ ಮಾರ್ಗ ಕಾಮಗಾರಿ ನಡೆಸಿ ಎಂದು ಗ್ರಾಮಸ್ಥರು ಅಡ್ಡಿಪಡಿಸಿದರು.        ಈ ಸಂದರ್ಭದಲ್ಲಿ ಕುಪ್ಪೂರು ಗ್ರಾಮದ ಸರ್ಕಾರಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಕುಮಾರ್ ಮಾತನಾಡಿ, ನಮ್ಮ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಸಂಸದರಿಗೆ, ಶಾಸಕರಿಗೆ, ಜಿಲ್ಲಾಧಿಕಾರಿಗಳಿಗೆ, ಜಿಪಂ ಸಿಇಒ, ತಹಶೀಲ್ದಾರ್‍ರವರಿಗೆ ಮನವಿ ಸಲ್ಲಿಸಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ, ಜನಪ್ರತಿನಿಧಿಗಳು ಚುನಾವಣೆ ಬಂದಾಗ ಮಾತ್ರ ಮತ ಕೇಳಲು ಬಂದು…

ಮುಂದೆ ಓದಿ...

ಪಿಯುಸಿ ಪರೀಕ್ಷೆ : ಅರ್ಥಶಾಸ್ತ್ರ, ಜೀವಶಾಸ್ತ್ರ ವಿಷಯದಲ್ಲಿ 22860 ವಿದ್ಯಾರ್ಥಿಗಳು ಹಾಜರು

ತುಮಕೂರು :       ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿ.ಯು.ಸಿ.ಯ ಅರ್ಥಶಾಸ್ತ್ರ ವಿಷಯದ ಪರೀಕ್ಷೆಯಲ್ಲಿ 15837 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅರ್ಥಶಾಸ್ತ್ರ ವಿಷಯಕ್ಕೆ ನೋಂದಣಿಯಾದ 16930 ವಿದ್ಯಾರ್ಥಿಗಳ ಪೈಕಿ 1093 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.       ಜೀವಶಾಸ್ತ್ರ ವಿಷಯದಲ್ಲಿ 7023 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಜೀವಶಾಸ್ತ್ರ ವಿಷಯಕ್ಕೆ ನೋಂದಣಿಯಾದ 7192 ವಿದ್ಯಾರ್ಥಿಗಳ ಪೈಕಿ 169 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.       ಪರೀಕ್ಷೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ವರದಿಯಾಗಿರುವುದಿಲ್ಲವೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲಲಿತಕುಮಾರಿ ತಿಳಿಸಿದ್ದಾರೆ.

ಮುಂದೆ ಓದಿ...