ಕೊರೋನಾ ವೈರಸ್ ಸೋಂಕು ಪರೀಕ್ಷೆಯಲ್ಲಿ ಜಿಲ್ಲೆಯ ಎಲ್ಲಾ 12 ಮಾದರಿಗಳು ನೆಗೆಟಿವ್!

ತುಮಕೂರು :        ತುಮಕೂರು ಜಿಲ್ಲೆಗೆ ವಿವಿಧ ದೇಶಗಳಿಂದ ಬಂದಿರುವಂತಹ 256 ಜನರನ್ನು ಕೊರೊನಾ ತಪಾಸಣೆಗೊಳಪಡಿಸಿ, ಅವರೆಲ್ಲರೂ ತೀವ್ರ ನಿಗಾವಣೆಯಲ್ಲಿ ವೈದ್ಯರ ಸಂಪರ್ಕದಲ್ಲಿದ್ದಾರೆ. 12 ಗಂಟಲು ಸ್ರಾವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಎಲ್ಲವೂ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ತಿಳಿಸಿದರು.       ಅವರು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕರೆಯಲಾಗಿದ್ದ ಕೊರೊನಾ ಸೋಂಕು ತಡೆಯುವ ಮುಂಜಾಗ್ರತಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಒಟ್ಟಾರೆ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಸೋಂಕು ಪ್ರಕರಣಗಳು ದೃಢಪಟ್ಟಿರುವುದಿಲ್ಲ.       ಸಾರ್ವಜನಿಕರು ಯಾವುದೇ ಕಾರಣಕ್ಕೆ ಭಯಪಡದೆ ಮುನ್ನೆಚ್ಚರಿಕೆ ಕ್ರಮವಾಗಿ ಜನರಿಂದ ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವುದು, ಜ್ವರ, ಕೆಮ್ಮು, ನೆಗಡಿ ಪೀಡಿತರು ಹತ್ತಿರದ ಆಸ್ಪತ್ರೆಗಳಲ್ಲಿ ತಪಾಸಣೆಗೊಳಪಡಬೇಕು. ಯಾವುದೇ ಸಭೆ ಸಮಾರಂಭಗಳು, ಮದುವೆ, ಇನ್ನಿತರೆ ಜನಸಂದಣಿ…

ಮುಂದೆ ಓದಿ...

ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಪಾರದರ್ಶಕವಾಗಿ ನಡೆಸಲು ಡಿಸಿ ಸೂಚನೆ

ತುಮಕೂರು:       ಮಾರ್ಚ್ 27ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗಳು ಯಾವುದೇ ಲೋಪದೋಷವಿಲ್ಲದೇ ಪಾರದರ್ಶಕವಾಗಿ ನಡೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಮಾರ್ಚ್ 27ರಿಂದ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಲ್ಲಿ ಟೇಬಲ್, ಕುಡಿಯುವ ನೀರು ಮತ್ತು ಎಲ್ಲಾ ರೀತಿಯ ಮೂಲಭೂತ ಸೌಕರ್ಯ ವ್ಯವಸ್ಥೆ ಕಲ್ಪಿಸಬೇಕು ಅಲ್ಲದೇ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಾಗಲಿ, ಪರೀಕ್ಷಾ ಕೇಂದ್ರಗಳಲ್ಲಿ ಗುಂಪಾಗಿ ಸೇರದಂತೆ ನೋಡಿಕೊಳ್ಳುವುದು ಎಲ್ಲಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಜವಾಬ್ದಾರಿ ಎಂದು ಅವರು ಸೂಚಿಸಿದರು.       ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಸಾಗಿಸುವಾಗ/ಉತ್ತರ ಪತ್ರಿಕೆಗಳನ್ನು ತರುವಾಗ ಸೂಕ್ತ ಭದ್ರತೆಗಳಿಂದ ಪೊಲೀಸ್ ಇಲಾಖೆ ಕ್ರಮವಹಿಸಬೇಕು.…

ಮುಂದೆ ಓದಿ...

ಕೋವಿಡ್-19 : ತುಮಕೂರು ಜಿಲ್ಲಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಜಾರಿ

ತುಮಕೂರು:       ಅಪಾಯಕಾರಿ ಸಾಂಕ್ರಾಮಿಕ ರೋಗ ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಮಾರ್ಚ್ 31ರವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.       ರಾಜ್ಯದ ಬೆಂಗಳೂರು ಹಾಗೂ ಕಲ್ಬುರ್ಗಿಗಳಲ್ಲಿ ಕೊರೋನಾ ವೈರಸ್(ಕೋವಿಡ್-19) ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮವಹಿಸಬೇಕಾಗಿದೆ. ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೋನಾ ವೈರಸ್ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಗಳಿದ್ದು, ಹೆಚ್ಚಿನ ಜನಸಂದಣಿ ಸೇರಬಾರದಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರೂ ಸಹ ಗುಂಪುಗುಂಪಾಗಿ ಜನರು ಸೇರುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಸಾರ್ವಜನಿಕ ಸ್ವಾಸ್ಥ್ಯಕ್ಕೆ ತೊಂದರೆಯಾಗಬಹುದು ಹಾಗೂ ಪ್ರಾಣಹಾನಿಯಾಗುವ ಸಂಭವವಿದೆ ಎಂಬುದನ್ನು ಮನಗಂಡು ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.       ನಿಷೇಧಾಜ್ಞೆಯನ್ವಯ ಸಾರ್ವಜನಿಕ ಸ್ಥಳಗಳಲ್ಲಿ…

ಮುಂದೆ ಓದಿ...

ತುಮಕೂರು : ಕೊರೊನಾ ಹಿನ್ನೆಲೆ ; ರೋಗಿಗಳ ಸಂಖ್ಯೆಯಲ್ಲಿ ಇಳಿಮುಖ!!

ತುಮಕೂರು:       ಜಗತ್ತಿನಾದ್ಯಂತ ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯೂ ಇಳಿಮುಖವಾಗಿದೆ.      ವಿಶ್ವದೆಲ್ಲೆಡೆ ರಣಕೇಕೆ ಹಾಕುತ್ತಿರುವ ಈ ಕೊರೊನಾ ವೈರಸ್ ಸೋಂಕು ತನ್ನ ಕದಂಬ ಬಾಹುಗಳನ್ನು ಎಲ್ಲೆಡೆ ಚಾಚುತ್ತಾ ಸೋಂಕು ಹರಡಲು ಹವಣಿಸುತ್ತಿರುವ ಬಗ್ಗೆ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಣ್ಣಪುಟ್ಟ ಕಾಯಿಲೆಗಳನ್ನು ತೋರಿಸಲು ಆಸ್ಪತ್ರೆಗಳಿಗೆ ತೆರಳುತ್ತಿದ್ದ ರೋಗಿಗಳ ಸಂಖ್ಯೆ ತಾನಾಗಿಯೇ ಕ್ಷೀಣಿಸಿದೆ.       ಜನದಟ್ಟಣೆ ಜಾಸ್ತಿ ಇರುವ ಕಡೆ ಈ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆದಷ್ಟು ಜನಸಂಪರ್ಕ ಕಡಿಮೆ ಇರುವಂತೆ ನೋಡಿಕೊಳ್ಳಬೇಕು. ಜನಸಾಮಾನ್ಯರೂ ಸಹ ಜನಸಂದಣಿ ಇರುವಲ್ಲಿ ಹೆಚ್ಚು ಸಮಯ ಬೆರೆಯಬಾರದು ಎಂಬೆಲ್ಲಾ ಅಂಶಗಳನ್ನು ಅರಿತಿರುವುದರಿಂದ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಗಣನೀಯವಾಗಿ…

ಮುಂದೆ ಓದಿ...