ತಾವರೆಕೆರೆ ಗ್ರಾಮದ ಬಳಿ ಗಂಡು ಚಿರತೆ ಸೆರೆ!!

ತುಮಕೂರು :       ಜಿಲ್ಲೆಯ ತುಮಕೂರು ತಾಲೂಕು ಹೆಬ್ಬೂರು ಹೋಬಳಿ ತಾವರೆಕೆರೆ ಗ್ರಾಮದಲ್ಲಿ ಹಲವಾರು ದಿನಗಳಿಂದ ಪ್ರತ್ಯಕ್ಷವಾಗಿ ಸಾರ್ವಜನಿಕರಿಗೆ ಭೀತಿ ಹುಟ್ಟಿಸಿ ಸಾಕು ಪ್ರಾಣಿಗಳನ್ನು ಭಕ್ಷಿಸುತ್ತಿದ್ದ ಸುಮಾರು 5 ವರ್ಷದ ಗಂಡು ಚಿರತೆಯನ್ನು ತುಮಕೂರು ವಲಯದ ಅರಣ್ಯ ಸಿಬ್ಬಂದಿಗಳು ಇಂದು ಕಾರ್ಯಾಚರಣೆ ನಡೆಸಿ ಬೋನಿನಲ್ಲಿ ಸೆರೆ ಹಿಡಿದಿದ್ದು, ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ತುಮಕೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ.

ಮುಂದೆ ಓದಿ...

ತುಮಕೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಸೋಂಕಿತ ವ್ಯಕ್ತಿ ಸಾವು!!

ತುಮಕೂರು:      ಕೊರೊನಾ ಸೋಂಕಿಗೆ ಜಿಲ್ಲೆಯ ಶಿರಾ ಮೂಲದ ಸುಮಾರು 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರದೆ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮನವಿ ಮಾಡಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವನ್ನಪ್ಪಿರುವ ಕೊರೊನಾ ಸೋಂಕಿತ ವ್ಯಕ್ತಿಯು ಮಾರ್ಚ್ 5ರಂದು ತುಮಕೂರಿನಿಂದ ಸಂಪರ್ಕಕ್ರಾಂತಿ ರೈಲಿನಲ್ಲಿ ದೆಹಲಿಗೆ ಪ್ರಯಾಣ. ದೆಹಲಿಯ ಜಾಮೀಯಾ ಮಸೀದಿಯ ಹೋಟೆಲ್ ರೂಂನಲ್ಲಿ ವಾಸ್ತವ್ಯ. ಮಾರ್ಚ್ 11ರಂದು ಕೊಂಗು ಎಕ್ಸ್‍ಪ್ರೆಸ್‍ನಲ್ಲಿ ಯಶವಂತಪುರಕ್ಕೆ ಪ್ರಯಾಣ, ಅಲ್ಲಿಂದ ಮಾರ್ಚ್ 14ರಂದು ಚಿತ್ರದುರ್ಗ ಕಡೆ ಹೋಗುವ ಬಸ್ ಮೂಲಕ ಶಿರಾಗೆ ತಲುಪಿದ್ದರು ಎಂದು ತಿಳಿಸಿದರು.         ಮಾರ್ಚ್ 18ರಂದು ಜ್ವರ ಬಂದಿದ್ದು, ಶಿರಾದಲ್ಲಿಯೇ ಖಾಸಗಿ ಆಸ್ಪತ್ರೆಯಲ್ಲಿ ಓಪಿಡಿ ಚಿಕಿತ್ಸೆ ಪಡೆದರು ಸಹ ಜ್ವರ ಕಡಿಮೆಯಾಗದ ಕಾರಣ ಮಾ.21ರಂದು…

ಮುಂದೆ ಓದಿ...