ನೈಸರ್ಗಿಕ ನೀರಿನ ಮೂಲಗಳ ಪುನಶ್ಚೇತನದಿಂದ ಅಂತರ್ಜಲ ಸಾಮರ್ಥ್ಯ ವೃದ್ಧಿ

ತುಮಕೂರು:       ಜಿಲ್ಲೆಯಲ್ಲಿ ನೈಸರ್ಗಿಕ ನೀರಿನ ಮೂಲಗಳಾದ ಹಳ್ಳ, ಕೆರೆಗಳನ್ನು ಪುನಶ್ಚೇತನಗೊಳಿಸುವುದರಿಂದ ಅಂತರ್ಜಲ ಸಾಮಥ್ರ್ಯ ವೃದ್ಧಿಯಾಗುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ ತಿಳಿಸಿದರು.        ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಅಂತರ್ಜಲ ಚೇತನ ಯೋಜನೆ ಅನುಷ್ಠಾನ ಕುರಿತು ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು, ಸಹಾಯಕ ನಿರ್ದೇಶಕರು(ಗ್ರಾ.ಉ.)ಗಳು, ಎಂ.ಐ.ಎಸ್. ಸಂಯೋಜಕರು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕ ಇಂಜಿನಿಯರುಗಳಿಗಾಗಿ ಏರ್ಪಡಿಸಿದ್ದ ತರಬೇತಿಯನ್ನುದ್ದೇಶಿಸಿ ಅವರು ಮಾತನಾಡುತ್ತಾ, ನೀರಿನ ಮೂಲಗಳಲ್ಲಿ ಮಣ್ಣಿನ ಸವಕಳಿ ಹಾಗೂ ಹೂಳು ತುಂಬುವಿಕೆಯನ್ನು ಕಡಿಮೆ ಮಾಡುವುದರಿಂದ ಹಳ್ಳ, ಕೆರೆಗಳಿಗೆ ನೀರಿನ ಹರಿವು ಹೆಚ್ಚುತ್ತದೆ. ನದಿ ಮತ್ತು ಜಲಾನಯನ ಪ್ರದೇಶಗಳಲ್ಲಿ ಸ್ವಾಭಾವಿಕ ಸಸ್ಯವರ್ಗವನ್ನು ಅಭಿವೃದ್ಧಿಗೊಳಿಸುವುದರಿಂದ ನೈಸರ್ಗಿಕ ನೀರಿನ ಮೂಲಗಳನ್ನು ಪುನರುಜ್ಜೀವನಗೊಳಿಸಬಹುದಾಗಿದೆ ಎಂದು ತಿಳಿಸಿದರು.       ರಾಜ್ಯ ಸರ್ಕಾರವು…

ಮುಂದೆ ಓದಿ...

ತುಮಕೂರು : ಕೋವಿಡ್-19 ನಿಯಂತ್ರಿಸಲು ಮೇ 4 ರಿಂದ 17ರವರೆಗೆ 144 ಸೆಕ್ಷನ್ ಜಾರಿ!!

ತುಮಕೂರು:         ಕೊರೋನಾ ವೈರಸ್(ಕೋವಿಡ್-19) ಸೋಂಕು ರೋಗ ಹರಡದಂತೆ ನಿಯಂತ್ರಿಸುವ ಸಲುವಾಗಿ ಸಾರ್ವಜನಿಕ ಹಿತದೃಷ್ಟಿ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮೇ 4 ರಿಂದ 17ರವರೆಗೆ ಜಿಲ್ಲಾದ್ಯಂತ ಕಲಂ 144ರನ್ವಯ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಇಂದು ಆದೇಶ ಹೊರಡಿಸಿದ್ದಾರೆ.       ನಿಷೇಧಾವಧಿಯಲ್ಲಿ ಜಿಲ್ಲಾದ್ಯಂತ ಸಾರ್ವಜನಿಕ ಸಾರಿಗೆ ಸಂಪರ್ಕ, ಧಾರ್ಮಿಕ ಕೇಂದ್ರ/ದೇವಸ್ಥಾನಗಳಲ್ಲಿ ದೇವರ ದರ್ಶನ ಮತ್ತು ಪೂಜಾ ಕೈಂಕರ್ಯ ಹೊರತುಪಡಿಸಿ ಎಲ್ಲಾ ಸಾಮೂಹಿಕ ಸೇವೆ, ಜಿಲ್ಲೆಯಲ್ಲಿ ನಡೆಯುವ ಜಾತ್ರೆ/ ಉತ್ಸವ/ ಸಂತೆ/ ಮತ್ತಿತರ ಜನಸಂದಣಿ ಸೇರುವಂತಹ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.          ಜಿಲ್ಲೆಯಾದ್ಯಂತ ಚಿತ್ರಮಂದಿರ/ ನೈಟ್‍ಕ್ಲಬ್/ ನಾಟಕ ಪ್ರದರ್ಶನ/ ಶಾಪಿಂಗ್ ಮಾಲ್‍ಗಳನ್ನು ಹಾಗೂ ಎಲ್ಲಾ ಶಿಕ್ಷಣ ಸಂಸ್ಥೆಗಳು, ಸಂಶೋಧನೆ, ಕೋಚಿಂಗ್ ಸೆಂಟರ್‍ಗಳನ್ನು ಮುಚ್ಚುವಂತೆ ಆದೇಶಿಸಲಾಗಿದ್ದು, ಸರ್ಕಾರಿ ಸಮಾರಂಭಗಳಲ್ಲಿ…

ಮುಂದೆ ಓದಿ...

ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ: ವೈಯಕ್ತಿಕ ತೋಟಗಾರಿಕೆ ಕಾಮಗಾರಿಗೆ ಸಹಾಯಧನ

ತುಮಕೂರು :       ರಾಜ್ಯವ್ಯಾಪ್ತಿ ಕೊರೊನ ವೈರಸ್ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ರೈತರು ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ನಿರ್ಬಂಧನೆ ಇರುವುದಿಲ್ಲ.     ಕೋವಿಡ್-19 ಹರಡದಂತೆ ಕೆಲಸ ನಿರ್ವಹಿಸುವ ಸ್ಥಳದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮುನ್ನೆಚರಿಕೆ ಕ್ರಮಗಳ ಅನುಸರಿಸಿ ರೈತರು ತಮ್ಮ ಜಮೀನಿನಲ್ಲಿ ಕಾಮಗಾರಿಗಳನ್ನು ಮಾಡಿಕೊಳ್ಳಲು ಕೋರಿದೆ.       2020-21 ನೇ ಸಾಲಿನ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸ್ತ್ರೀ ಪ್ರಧಾನ ಕುಟುಂಬಗಳು, ಬಡತನ ರೇಖೆ ಕೆಳಮಟ್ಟದಲ್ಲಿ ಇರುವ ಇತರೆ ಕುಟುಂಬಗಳು, ವಿಕಲಚೇತನ ಪ್ರಧಾನ ಕುಟುಂಬಗಳು, ಭೂ ಸುಧಾರಣಾ ಫಲಾನುಭವಿಗಳು, ಇಂದಿರಾ ಆವಾಜ್ ಯೋಜನೆ ಫಲಾನುಭವಿಗಳು, ಕೆಲಸ ನಿರ್ವಹಿಸುವ ಅಕುಶಲ ಕೂಲಿ ಕಾರ್ಮಿಕರ ವೇತನದ ದರ ಒಂದು ದಿನಕ್ಕೆ ಮೊತ್ತ 275 ರೂ.…

ಮುಂದೆ ಓದಿ...

ತುಮಕೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ!!

ತುಮಕೂರು:      ನಗರದ ಕೆಎಚ್​ಬಿ ಕಾಲೋನಿಯಲ್ಲಿ ವಾಸವಾಗಿದ್ದ ಪತಿ, ಪತ್ನಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.       ತುಮಕೂರು ಜಿಲ್ಲೆಯಲ್ಲಿ ಮೃತ ಪಿ-535 ಹಾಗೂ ಪಿ-553ರ ಸಂಪರ್ಕದಲ್ಲಿದ್ದ ಇಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ತಿಳಿಸಿದ್ದಾರೆ.        ಮೃತ ಪಿ-535 ಹಾಗೂ ಪಿ-553ರ ಪಕ್ಕದ ಮನೆಯವರಾದ ಗಂಡ-ಹೆಂಡತಿ ಇಬ್ಬರಿಗೂ ಸೋಂಕು ತಗುಲಿದ್ದು, ಅವರನ್ನು ಐಸೋಲೇಶನ್ ಮಾಡಲಾಗಿದೆ. ಇವರನ್ನು ಪಿ-591 ಹಾಗೂ ಪಿ-592 ಎಂದು ಗುರುತಿಸಲಾಗಿದೆ.          ಜಿಲ್ಲೆಯು ಆರೇಂಜ್ ವಯಲದಲ್ಲಿರುವುದರಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಬೇಕು. ಆದ್ದರಿಂದ ಮಕ್ಕಳು, ವಯಸ್ಸಾದವರು ಮನೆಯಿಂದ ಹೊರಗಡೆ ಹೋಗಬಾರದು. ಸಾರ್ವಜನಿಕರು ಸರ್ಕಾರದ ನಿರ್ದೇಶನಗಳನ್ನು ಪಾಲಿಸಿ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.  

ಮುಂದೆ ಓದಿ...

ಕೊರಟಗೆರೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಸಿಇಓ ಭೇಟಿ!!

ತುಮಕೂರು:       ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ, ತೋವಿನಕೆರೆ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.       ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಬರಪೀಡಿತ ತಾಲ್ಲೂಕಾಗಿದ್ದು, ಇಲ್ಲಿನ ಗ್ರಾಮ ಪಂಚಾಯಿತಿಗಳು ಗ್ರಾಮದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ, ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು.        ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಕಾರ್ಯಕ್ರಮವಾದ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ ಮನೆಗೆ ಸರ್ಕಾರದ ವತಿಯಿಂದ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಕೊರಟಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಇದರ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ…

ಮುಂದೆ ಓದಿ...