ತುರುವೇಕೆರೆ : ಮರಕ್ಕೆ ಕಾರು ಡಿಕ್ಕಿ; ಚಾಲಕ ಸಾವು!!

ತುರುವೇಕೆರೆ :       ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು  ಚಾಲಕನಿಗೆ ತೀವ್ರ ರಕ್ತ ಸ್ರಾವವಾಗಿ ಚಾಲಕ ಸಾವನ್ನಪ್ಪಿರುವ ಘಟನೆ ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಪೋಲಿಸ್ ಠಾಣಾ ಸರಹದ್ದಿನಲ್ಲಿ ನಡೆದಿದೆ.       ವಿನಯ್ (31 ವರ್ಷ) ಮೃತ ಯುವಕ. ಈತ ನಿಟ್ಟೂರು ಬಳಿ ಬಂಡಿಹಳ್ಳಿ ಗ್ರಾಮ ವಾಸಿಯಾಗಿದ್ದು, ಇಟಿಯೋಸ್ ಕಾರಿನಲ್ಲಿ ಅಮ್ಮಸಂದ್ರದಿಂದ ತನ್ನ ಸ್ವಗ್ರಾಮಕ್ಕೆ ತೆರಳುವಾಗ ಕೊಡಗಲ್ ಪಾಳ್ಯ ಗೇಟ್ ಬಳಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ.        ಪರಿಣಾಮ ಸ್ಥಳದಲ್ಲಿಯೇ ಕಾರು ಚಾಲನೆ ಮಾಡುತ್ತಿದ್ದ ವಿನಯ್ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ದಂಡಿನಶಿವರ ಪೋಲಿಸರು ಆಗಮಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.  

ಮುಂದೆ ಓದಿ...

ತುಮಕೂರು: ಲಾಕ್‍ಡೌನ್ ಸಡಿಲಗೊಳಿಸಿದ ಜಿಲ್ಲಾಡಳಿತ

ತುಮಕೂರು:       ತುಮಕೂರು ನಗರದ ಕಂಟೈನ್ಮೆಂಟ್ ವಲಯ ಹೊರತುಪಡಿಸಿ ತುಮಕೂರು ನಗರದಲ್ಲಿ ವೈನ್ ಶಾಪ್ ಸೇರಿದಂತೆ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಷರತ್ತಿಗೊಳಪಟ್ಟು ಅನುಮತಿ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು.       ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ತುಮಕೂರು ನಗರದಲ್ಲಿ ಕೋವಿಡ್-19 ವೈರಾಣು ನಿಯಂತ್ರಣ ಮತ್ತು ಸಡಿಲಿಕೆ ಕುರಿತು ಕರೆಯಲಾಗಿದ್ದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಗರದ ಶಾಸಕರಾದ ಜ್ಯೋತಿಗಣೇಶ್ ಹಾಗೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಸಡಿಲಿಕೆ ಕುರಿತು ಸಮಗ್ರ ಮಾಹಿತಿ ಪಡೆದು ಮಾತನಾಡಿದರು. ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಜನಜಂಗುಳಿ ನಿಯಂ ತ್ರಣದೊಂದಿಗೆ ಅಂಗಡಿಗಳ ಮಾಲೀಕರುಗಳು ಮತ್ತು ವರ್ತಕರುಗಳು ತಮ್ಮ ಸ್ವಯಂ ಜವಾಬ್ದಾರಿಯಿಂದ ಅಂಗಡಿಗಳನ್ನು ತೆರೆಯಲು ಅವರು…

ಮುಂದೆ ಓದಿ...

ಕೊರೋನಾ ವಾರಿಯರ್ಸ್‍ನ್ನು ನಾವೆಲ್ಲರೂ ಪೂಜಿಸಬೇಕು : ಡಿಸಿಎಂ

ತುಮಕೂರು:       ವಿಶ್ವದಾದ್ಯಂತ ಹರಡುತ್ತಿರುವ ಕೊರೋನಾ ವೈರಾಣುವನ್ನು ತಡೆಗಟ್ಟಲು ಹಗಲಿರುಳು ಶ್ರಮಿಸುತ್ತಿರುವ ಕೊರೋನಾ ಸೈನಿಕರನ್ನು ಗೌರವಿಸಿ ಎಂದು ಉಪ ಮುಖ್ಯಮಂತ್ರಿ, ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ.ಕಾರಜೋಳ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.       ತಾಲ್ಲೂಕಿನ ಹೆಗ್ಗೆರೆ ಗ್ರಾಮಪಂಚಾಯತಿಯಲ್ಲಿ ಏರ್ಪಡಿಸಿದ್ದ ಅಗತ್ಯ ವಸ್ತುಗಳ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೊರೋನಾ ಸೈನಿಕರಾದ ಆಶಾ/ ಅಂಗನವಾಡಿ ಕಾರ್ಯಕರ್ತೆಯರು, ಆರಕ್ಷಕರು, ಪೌರಕಾರ್ಮಿಕರು, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಪತ್ರಕರ್ತರು ತಮ್ಮ ಪ್ರಾಣದ ಹಂಗನ್ನು ತೊರೆದು ವೈಯಕ್ತಿಕ ಜೀವನವನ್ನು ಬದಿಗಿಟ್ಟು ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆಶಾ ಕಾರ್ಯಕರ್ತೆಯರು ಸಮೀಕ್ಷೆಗಾಗಿ ಮನೆ-ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಿರುಕುಳ, ಅವಮಾನಗಳನ್ನು ಸಹಿಸಿಕೊಂಡು ತಮ್ಮ ಸೇವೆಯನ್ನು ಎದೆಗುಂದದೆ ಮಾಡುತ್ತಿದ್ದಾರೆ. ಇಂತಹ ಕೊರೋನಾ ಸೈನಿಕರನ್ನು ನಾವೆಲ್ಲರೂ ಪೂಜಿಸಬೇಕೆಂದು ತಿಳಿಸಿದರು.  …

ಮುಂದೆ ಓದಿ...

ತುಮಕೂರು ಮಹಾನಗರ ಪಾಲಿಕೆ : 3.81ಕೋಟಿ ರೂ. ಉಳಿತಾಯ ಬಜೆಟ್ ಮಂಡನೆ

ತುಮಕೂರು :       ಮಹಾನಗರ ಪಾಲಿಕೆ ಸಭಾಂಗಣದಲ್ಲಿಂದು ನಡೆದ 2020-21ನೇ ಸಾಲಿನ ಆಯ-ವ್ಯಯ ಸಭೆಯಲ್ಲಿ 3.81ಕೋಟಿ ರೂ. ಉಳಿತಾಯ ಬಜೆಟನ್ನು ಮಂಡನೆ ಮಾಡಲಾಯಿತು.        ಬಜೆಟ್ ಮಂಡಿಸಿದ ಹಣಕಾಸು ಮತ್ತು ತೆರಿಗೆ ನಿರ್ಧರಣೆ ಸ್ಥಾಯಿ ಸಮಿತಿಯ ಅಧ್ಯಕ್ಷ ಟಿ.ಎಂ.ಮಹೇಶ್ ಪಾಲಿಕೆಯು ತನ್ನ ಆರ್ಥಿಕ ಇತಿಮಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಆಯ-ವ್ಯಯ ಅಂದಾಜನ್ನು ತಯಾರಿಸಲಾಗಿದೆ. ಈ ಆಯವ್ಯಯದ ಅನ್ವಯ ಒಟ್ಟು ಆರಂಭಿಕ ಶಿಲ್ಕು 2601.45 ಲಕ್ಷ ರೂ. ಸೇರಿ 22804.77ಲಕ್ಷ ರೂ.ಗಳ ಅಂದಾಜು ಸ್ವೀಕೃತಿ ಹಣದಲ್ಲಿ 2020-21 ಸಾಲಿಗಾಗಿ 22423.37 ಲಕ್ಷ ರೂ.ಗಳ ಅಂದಾಜು ವೆಚ್ಚ ಮಾಡಲು ಬಜೆಟ್ ಮಂಡನೆ ಮಾಡಲಾಗಿದ್ದು, 381.40ಲಕ್ಷ ರೂ.ಗಳು ಮಿಗತೆಯಲ್ಲಿದೆ ಎಂದು ತಿಳಿಸಿದ ಅವರು ತುಮಕೂರು ನಗರ ನಿವಾಸಿಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸುವಲ್ಲಿ ಹೆಚ್ಚು ಪ್ರಾಧಾನ್ಯತೆಯನ್ನು ನೀಡಲಾಗಿದೆ ಎಂದು ಹೇಳಿದರು.       ಈ ವರ್ಷದ…

ಮುಂದೆ ಓದಿ...

ಲಕ್ಷ ಜನರಿಗೆ ತಲುಪಿದ ಯುವ ಕಾಂಗ್ರೆಸ್ ದಾಸೋಹ

ತುಮಕೂರು:       ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್.ರಾಜೇಂದ್ರ ನೇತೃತ್ವದ ದಾಸೋಹ ವ್ಯವಸ್ಥೆ ಇಂದಿಗೆ ಒಂದು ಲಕ್ಷ ಜನರನ್ನು ತಲುಪಿದ್ದು, ಯುವಕರ ಸೇವಾ ಮನೋಭಾವ ಇತರರಿಗೆ ಮಾದರಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯ ಅಪೇಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.         ನಗರದ ಬೀರೇಶ್ವರ ಕಲ್ಯಾಣ ಮಂಟಪದಲ್ಲಿ ಯುವಕಾಂಗ್ರೆಸ್ ಹಾಗೂ ಆರ್.ಆರ್.ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿರುವ ದಾಸೋಹ ತಯಾರಿಕ ಸ್ಥಳಕ್ಕೆ,ಕಾಂಗ್ರೆಸ್ ಮುಖಂಡರಾದ ಚಲುವರಾಯಸ್ವಾಮಿ, ಹೆಚ್.ಸಿ.ಬಾಲಕೃಷ್ಣ, ನರೇಂದ್ರಸ್ವಾಮಿ ಹಾಗೂ ಯುವ ಕಾಂಗ್ರೆಸ್ ರಘವೀರಗೌಡ ಅವರುಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು,ವಿದ್ಯಾವಂತ ಯುವಜನರು, ತಮ್ಮ ಬಿಡುವಿನ ವೇಳೆಯನ್ನು ಈ ರೀತಿ ಅಶಕ್ತರು, ಬಡವರು, ಕಷ್ಟದಲ್ಲಿ ಇರುವವರ ಸೇವೆಗೆ ಮೀಸಲಿಟ್ಟಿರುವುದು ನಿಜಕ್ಕೂ ಮೆಚ್ಚುವಂತದ್ದು ಎಂದರು.       ಮಾರ್ಚ್ 22 ರಿಂದ ಇದುವರೆಗೂ ಮೂರು…

ಮುಂದೆ ಓದಿ...