ತಂಬಾಕು ಉತ್ಪನ್ನಗಳು ನಿಷೇಧಸಲ್ಪಟ್ಟಿದ್ದರೂ ದುಪ್ಪಟ್ಟು ದರಕ್ಕೆ ಮಾರಾಟ

ಮಧುಗಿರಿ:       ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಂಬಾಕು ಉತ್ಪನ್ನಗಳನ್ನು ನಿಷೇಶಿದ್ದರೂ ಪುರಸಭೆಯ ವ್ಯಾಪ್ತಿಯಲ್ಲಿ ಈ ಉತ್ಪನ್ನಗಳ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಈ ಬಗ್ಗೆ ಪುರಸಭೆ ಗಂಭೀರ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ನಗರಾಧ್ಯಕ್ಷ ಹಾಗೂ ಪುರಸಭೆ ಸದಸ್ಯ ಎಂ.ಎಸ್.ಚಂದ್ರಶೇಖರ್‍ಬಾಬು ಒತ್ತಾಯಿಸಿದರು.       ಪುರಸಭೆಯ ಸಭಾಂಗಣದಲ್ಲಿ ಸಭೆ ಸೇರಿದ್ದ ಎಲ್ಲ ಸದಸ್ಯರ ಪರವಾಗಿ ಈ ಒತ್ತಾಯ ಮಾಡಿದ ಇವರು, ಈ ಗುಟ್ಕಾ, ತಂಬಾಕು ಉತ್ಪನ್ನಗಳು ನಿಷೇಧಸಲ್ಪಟ್ಟಿದ್ದು ದುಪ್ಪಟ್ಟು ದರಕ್ಕೆ ಮಾರಾಟವಾಗುತ್ತಿದೆ.       ಅಂಗಡಿಗಳಲ್ಲಿ ದರಪಟ್ಟಿ ಹಾಕದೆ ಗ್ರಾಹಕರಿಗೆ ವಂಚಿಸುತ್ತಿದ್ದು, ದಿನಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿಲ್ಲ ಎಂದರು. ಮಟನ್ ಮಾರ್ಕೆಟ್‍ನಲ್ಲಿ ಸ್ವಚ್ಛತೆಯಿಲ್ಲ, ಸಾಮಾಜಿಕ ಅಂತರವಿಲ್ಲದೆ 700 ರೂಗೆ ಕೆಜಿ ಮಾಂಸ ಮಾರುತ್ತಿದ್ದು, ಕೇಳುವವರಿಲ್ಲವೇ ಎಂದು ಸದಸ್ಯ ಎಂ.ಆರ್.ಜಗನ್ನಾಥ್ ಅಸಮಧಾನ ವ್ಯಕ್ತಪಡಿಸಿದರು. ಇದಕ್ಕೆ ಸದಸ್ಯರಾದ ಗೋವಿಂದರಾಜು,…

ಮುಂದೆ ಓದಿ...

ಲಾಕ್‍ಡೌನ್ ಸಂದರ್ಭದಲ್ಲಿ ಅಕುಶಲ ಕಾರ್ಮಿಕರ ಕೈ ಹಿಡಿದ ನರೇಗಾ

ತುಮಕೂರು:       2020-21ನೇ ಸಾಲಿನಲ್ಲಿ ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಆದ ಪರಿಣಾಮ ಜಿಲ್ಲೆಯಲ್ಲಿ ದುಡಿಯುವ ಕೈಗಳಿಗೆ ಕೆಲಸವಿಲ್ಲದ ಸಮಯದಲ್ಲಿ ನರೇಗಾ ಸಂಜೀವಿನಿಯಾಗಿ ಕೈತುಂಬಾ ಕೆಲಸವನ್ನು ನೀಡಿ ಧೈರ್ಯ ತುಂಬಿದೆ.        ಕೊರಟಗೆರೆ, ಮಧುಗಿರಿ, ಶಿರಾ ಸೇರಿದಂತೆ ಜಿಲ್ಲೆಯ ತಾಲ್ಲೂಕುಗಳಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ನರೇಗಾ ಯೋಜನೆಯಡಿಯಲ್ಲಿ ದನದ ಕೊಟ್ಟಿಗೆ ನಿರ್ಮಾಣ, ಕೃಷಿಹೊಂಡ, ಮನೆ ನಿರ್ಮಾಣ, ಗೋಕಟ್ಟೆ ಅಭಿವೃದ್ಧಿ, ಕೆರೆ-ಕಾಲುವೆಗಳ ಹೂಳೆತ್ತುವುದು, ರಸ್ತೆ ಬದಿಗಳಲ್ಲಿ ಸಸಿ ನೆಡುವುದು ಹೀಗೆ ಹಲವಾರು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ದುಡಿಯುವ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ಮಧುಗಿರಿ ತಾಲ್ಲೂಕಿನಲ್ಲಿ ಮೇ ತಿಂಗಳ ಮೊದಲ ವಾರದ ಅಂತ್ಯಕ್ಕೆ 32623 ಮಾನವ ದಿನಗಳನ್ನು ನರೇಗಾದಡಿ ಸೃಜನೆ ಮಾಡಲಾಗಿದೆ. ಮಧುಗಿರಿ ತಾಲ್ಲೂಕಿನಲ್ಲಿ 39 ಗ್ರಾಮಪಂಚಾಯತಿಗಳ ವ್ಯಾಪ್ತಿಯಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಹಾಗೂ ದನದ ಕೊಟ್ಟಿಗೆ ನಿರ್ಮಾಣ, ಬದು ನಿರ್ಮಾಣ, ಕೃಷಿ ಹೊಂಡ, ಮನೆ…

ಮುಂದೆ ಓದಿ...

ತುಮಕೂರು : ಕೋವಿಡ್-೧೯ ನಿಯಂತ್ರಿಸಲು 4 ಚೆಕ್‍ಪೋಸ್ಟ್ ಗಳ ನಿರ್ಮಾಣ

ತುಮಕೂರು:        ನಗರದಲ್ಲಿ ಕೊರೋನಾ ಕೊವಿಡ್-19 ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ವೈರಾಣು ಹರಡದಂತೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ತುಮಕೂರು ನಗರಕ್ಕೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾವಹಿಸಲು ಮತ್ತು ತಪಾಸಣೆಗಾಗಿ ನಾಲ್ಕು ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದೆ.       ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ತುಮಕೂರು ನಗರಕ್ಕೆ ಬರುವ 4 ಪ್ರಮುಖ ರಸ್ತೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಈ ಚೆಕ್‍ಪೋಸ್ಟ್‍ಗಳಲ್ಲಿ ಕಂದಾಯ ಇಲಾಖೆ, ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ತಲಾ ಇಬ್ಬರು ಸಿಬ್ಬಂದಿಗಳು 24×7 ಗಂಟೆಯೂ ಮೂರು ಪಾಳಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಹೊರಗಡೆಯಿಂದ ತುಮಕೂರು ನಗರಕ್ಕೆ ಪ್ರವೇಶಿಸುವ ವಾಹನ/ವ್ಯಕ್ತಿಗಳನ್ನು ತೀವ್ರ ತಪಾಸಣೆ ಮಾಡಲಾಗುವುದು. ತಪಾಸಣೆ ಮಾಡಿದ ನಂತರ ಅವರ ಆರೋಗ್ಯ…

ಮುಂದೆ ಓದಿ...