ಸರ್ಕಾರದ ಕಟ್ಟಾಜ್ಞೆ ಪಾಲಿಸಿದ ಮಧುಗಿರಿ ಜನತೆಗೆ ಧನ್ಯವಾಗಳು : ಡಾ.ಕೆ.ನಂದಿನಿದೇವಿ

ಮಧುಗಿರಿ :        ಇಲ್ಲಿಯವರೆವಿಗೂ ಕೊರೊನಾ ವೈರಸ್ ಹರಡದಂತೆ ಮಧುಗಿರಿ ಜನತೆ ಸರ್ಕಾರದ ನಿರ್ದೇಶನಗಳನ್ನು ಕಟ್ಟನಿಟ್ಟಾಗಿ ಪಾಲಿಸಿದಕ್ಕೆ ವೈಯಕ್ತಿಕವಾಗಿ ಧನ್ಯವಾದಗಳು ಎಂದು ಉಪವಿಭಾಗಾಧಿಕಾರಿ ಡಾ.ಕೆ.ನಂದಿನಿದೇವಿ ತಿಳಿಸಿದರು.       ಅವರು ಉಪವಿಭಾಗಾಧಿಕಾರಿ ಕಛೇರಿಯಲ್ಲಿ ಮಧುಗಿರಿ ವಿದ್ಯಾಸಂಸ್ಥೆಯ ಖಜಾಂಚಿ ಎಂ.ಎಸ್.ಧರ್ಮವೀರ್‍ರವರ ನಿರ್ಮಾಪಕತ್ವದಲ್ಲಿ ‘ಸಿನಿಕ್ ಬ್ಯೂಟಿ ಆಫ್ ಮಧುಗಿರಿ ಡ್ಯೂರಿಂಗ್ ಕೋವಿಡ್-19 ಲಾಕ್‍ಡೌನ್’ಗೆ ಸಂಬಂಧಿಸಿದ 9 ನಿಮಿಷಗಳ ಸಾಕ್ಷ್ಯ ಚಿತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು.       ವಿಶ್ವವಿಖ್ಯಾತ ಏಕಶಿಲಾ ಬೆಟ್ಟ ಹೊಂದಿರುವ ಮಧುಗಿರಿ ಬೆಟ್ಟದ ಬಗ್ಗೆ ವರ್ಣಿಸಲು ಸಮಯವೇ ಸಾಲದು, ಈ ಸಾಕ್ಷ್ಯ ಚಿತ್ರದಲ್ಲಿ ಮಧುಗಿರಿ ಗಡಿಭಾಗದಿಂದ ಆರಂಭಗೊಂಡು ಮಧುಗಿರಿ ಚೋಳೇನಹಳ್ಳಿ ಕೆರೆ, ಸಿದ್ದಾಪುರ ಕೆರೆ, ಬೈಪಾಸ್ ರಸ್ತೆ, ಸೂರ್ಯ ಮುಳಗುವ ವೇಳೆ ಮಧುಗಿರಿ ಏಕಶಿಲಾ ಬೆಟ್ಟದ ಪ್ರಕೃತಿ ಸೌಂದರ್ಯ, ಐತಿಹಾಸಿಕ ಶ್ರೀ ಮಲ್ಲೇಶ್ವರ ಸ್ವಾಮಿ ಮತ್ತು ವೆಂಕಟರಮಣ ಸ್ವಾಮಿ, ಪ್ರಮುಖ ರಸ್ತೆಗಳು, ನ್ಯಾಯಾಲದ…

ಮುಂದೆ ಓದಿ...

ಹೊರರಾಜ್ಯ , ಜಿಲ್ಲೆಯಿಂದ ಬರುವವರಿಗೆ ಕಡ್ಡಾಯವಾಗಿ ಕ್ವಾರಂಟೈನ್

ಚಿಕ್ಕನಾಯಕನಹಳ್ಳಿ:       ಹೊರರಾಜ್ಯ ಹಾಗೂ ಜಿಲ್ಲೆಯಿಂದ ಬರುವವರನ್ನು ಕಡ್ಡಾಯವಾಗಿ ಕ್ವಾರಂಟೈನ್‍ಗೆ ಒಳಪಡಿಸಲಾಗುವುದೆಂದು ತಹಸೀಲ್ದಾರ್ ಬಿ.ತೇಜಸ್ವಿನಿ ತಿಳಿಸಿದರು.       ಈಚೆಗೆ ಲಾಕ್ಡೌನ್ ಸಡಿಲಿಕೆಯ ಸಂದರ್ಭದಲ್ಲಿ ಹಸಿರುವಲಯದಲ್ಲಿರುವ ನಮ್ಮ ತಾಲ್ಲೂಕಿನಲ್ಲಿ ಯಾವುದೇ ಸೋಂಕಿನ ಪ್ರಕರಣ ಆಗದ ರೀತಿ ಪಟ್ಟಣ ಹಾಗೂ ಗ್ರಾಮಗಳಲ್ಲಿಯೂ ಸಹ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸಲಾಗುತ್ತದೆ.       ಪಿಡಿಓಗಳಿಗೆ ಸೂಚನೆ: ಕೊರೊನಾ ಸೋಂಕು ತಾಲ್ಲೂಕಿನನೊಳಗೆ ಬರದಂತೆ ತಡೆಯುವ ಉದ್ದೇಶದಿಂದ ಹೊರಗಿನಿಂದ ಯಾವುದೇ ವ್ಯಕ್ತಿಗಳ ಆರೋಗ್ಯ ತಪಾಸಣೆ ಕಡ್ಡಾಯ ಹಾಗೂ ಕೆಂಪು ಮತ್ತು ಕಿತ್ತಳೆವಲಯದಿಂದ ಬಂದವರನ್ನು ಕಡ್ಡಾಯವಾಗಿ ಹೋಂ ಕ್ವರಂಟೈನ್‍ಗೆ ಒಳಪಡಿಸಲು ಗ್ರಾಮ ಪಂಚಾಯಿತಿ ಪಿಡಿಓಗಳಿಗೆ ನಿರ್ದೇಶನ ನೀಡಲಾಗಿದೆ. ಆರೋಗ್ಯತಪಾಸಣೆಯ ಸಂದರ್ಭದಲ್ಲಿ ಸಂಶಯ ಬಂದರೆ ಅಂತಹವರನ್ನು ಆಸ್ಪತ್ರೆಯಲ್ಲಿ ಐಸೋಲೇಷನ್‍ಗೆ ಒಳಪಡಸಲಾಗುವುದೆಂದರು.        ಹೊರರಾಜ್ಯದ ಎಂಟುಮಂದಿ: ತಮಿಳುನಾಡು ಮತ್ತು ಹೈದರಬಾದ್‍ನಿಂದ ಬಂದಿರುವ ಎಂಟು ಮಂದಿಯನ್ನು ಆಸ್ಪತ್ರೆಯಲ್ಲಿ ಕ್ವರಂಟೈನ್‍ಗೆ ಒಳಪಡಿಸಲಾಗಿದೆ. ಇವರು…

ಮುಂದೆ ಓದಿ...

ಭೂಮಾಲೀಕರಿಗೆ ಪರಿಹಾರ ವಿತರಣೆಗಾಗಿ 100 ಕೋಟಿ ಮೀಸಲು

ತುಮಕೂರು:       ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ಗುರುತ್ವಾ ಕಾಲುವೆಯ ನಾಲಾ ಸರಪಳಿ 199.620 ಕಿ.ಮೀ. ರಿಂದ 210.090 ಕಿ.ಮೀ. ವರೆಗೆ ನಿರ್ಮಾಣವಾಗುತ್ತಿರುವ ಬೃಹತ್ ಮೇಲ್ಗಾಲುವೆ ಕಾಮಗಾರಿಯನ್ನು ಚುರುಕುಗೊಳಿಸಿ ಕಾಲಾವಧಿಯಲ್ಲಿ ಪೂರ್ಣಗೊಳಿಸಲಾಗುವುದೆಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು.        ಅವರು ಬುಧವಾರ ಚೇಳೂರು ತೊಳಚನಹಳ್ಳಿ ಹತ್ತಿರ ಮೇಲ್ಗಾಲುವೆಯ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದರು. ಯೋಜನೆಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವ ಭೂಮಾಲೀಕರಿಗೆ ಪರಿಹಾರ ವಿತರಣೆಗಾಗಿ 100 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜಲಸಂಪನ್ಮೂಲ ಇಲಾಖೆ ಕಾಮಗಾರಿಗಳನ್ನು ವಿಳಂಬಗೊಳಿಸುವಂತಿಲ್ಲ. ಸಕಲೇಶಪುರ ಬಳಿ ಯೋಜನೆಯಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಲಾಗಿದ್ದು, 2021ರ ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಕಾಮಗಾರಿಯನ್ನು ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.        ಜಲಸಂಪನ್ಮೂಲ ಇಲಾಖೆಗೆ ಅನುದಾನದ ಕೊರತೆ…

ಮುಂದೆ ಓದಿ...