ಮಧುಗಿರಿ: ತಹಸೀಲ್ದಾರ್ ಮುಂದಾಳತ್ವದಲ್ಲಿ ಗುರುಭವನ ಸ್ವಚ್ಛ

ಮಧುಗಿರಿ:       ಪಟ್ಟಣದ ಮಿನಿ ವಿಧಾನಸೌಧದ ಪಕ್ಕದಲ್ಲಿರುವ “ಗುರುಭವನ’ದ ಆವರಣ ಅನೈರ್ಮಲ್ಯದ ಜೊತೆಗೆ ಅನೈತಿಕ ಚಟುವಟಿಕೆಗಳ ತಾಣವಾಗಿದ್ದನ್ನು ಮನಗಂಡು ಈ ಆವರಣದಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಅರಿತ ತಹಸೀಲ್ದಾರ್ ಡಾ. ಜಿ. ವಿಶ್ವನಾಥ್ ರವರು ಸ್ವಚ್ಛತಾ ಕಾರ್ಯ ಹಾಗೂ ಶ್ರಮದಾನಕ್ಕೆ ಸ್ವತಃ ಮುಂದಾಗಿ ಸಮಾಜಕ್ಕೆ ಮಾದರಿಯಾದರು.       ಈ ಆವರಣದ ತುಂಬಾ ಬಿಯರ್ ಬಾಟಲುಗಳು, ಮದ್ಯದ ಪ್ಯಾಕೆಟ್ ಗಳು, ಬೀಡಿ- ಸಿಗರೇಟಿನ ತುಂಡುಗಳು, ಅನೈತಿಕ ಚಟುವಟಿಕೆ ಬಳಸುವ ವಸ್ತುಗಳು ತುಂಬಿ ತುಳುಕಾಡುತ್ತಿದ್ದವು. ಗುರುಭವನದ ಹಿಂಭಾಗದ ಖಾಲಿ ಸ್ಥಳದಲ್ಲಿ ಕಸ ಕಡ್ಡಿಗಳು ತುಂಬಿಕೊಂಡಿದ್ದ ಲ್ಲದೆ, ಟ್ರಾನ್ಸ್ ಫಾರ್ಮರ್ ಗೆ ಬಳ್ಳಿಗಳು ಎತ್ತರಕ್ಕೆ ಬೆಳೆದು ವಿಷ ಜಂತುಗಳ ವಾಸ ಸ್ಥಳವಾಗಿ ಮಾರ್ಪಟ್ಟಿತ್ತು. ಜೊತೆಗೆ ಬಯಲು ಶೌಚಾಲಯವಾಗಿ ಪರಿವರ್ತನೆಗೊಂಡಿತ್ತು. ಈ ಬಗ್ಗೆ ಲಾಕ್ ಡೌನ್ ಸಂದರ್ಭದಲ್ಲಿ ಅನಿರೀಕ್ಷಿತ ಭೇಟಿ ನೀಡಿದ್ದ ತಹಶಿಲ್ದಾರರು ಗುರುಭವನದ ಆವರಣ…

ಮುಂದೆ ಓದಿ...

ತುಮಕೂರು : ಇಂದಿನಿಂದ ಬಸ್ ಸಂಚಾರ ಆರಂಭ!!

ತುಮಕೂರು :        ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಎಸ್‍ಆರ್‍ಟಿಸಿ ಬಸ್ ಕಾರ್ಯಾಚರಣೆಯನ್ನು ಮಂಗಳವಾರದಿಂದ ತುಮಕೂರು ಜಿಲ್ಲೆಯಲ್ಲಿ ಪ್ರಾರಂಬಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎ.ಎನ್. ಗಜೇಂದ್ರ ಕುಮಾರ್ ತಿಳಿಸಿದ್ದಾರೆ.        ಬಸ್ ಕಾರ್ಯಾಚರಣೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ಸಂಚರಿಸಲಿರುವ ಎಲ್ಲಾ ಬಸ್‍ಗಳನ್ನು ಸ್ವಚ್ಛಗೊಳಿಸಿ, ಸ್ಯಾನಿಟೈಜೇಷನ್‍ಗೊಳಿಸಲಾಗಿದೆ. ತುಮಕೂರು ವಿಭಾಗದ ವ್ಯಾಪ್ತಿಯಲ್ಲಿ 620 ಬಸ್‍ಗಳಿದ್ದು, ಪ್ರಾರಂಭಿಕವಾಗಿ 150 ಬಸ್‍ಗಳ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಯಾಣಿಕರ ಬೇಡಿಕೆಗನುಗುಣವಾಗಿ ಬಸ್ ಕಾರ್ಯಾಚರಣೆ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.       ಕರ್ತವ್ಯಕ್ಕೆ ನಿಯೋಜಿಸಲಾಗುವ ಬಸ್ ಚಾಲಕರು ಹಾಗೂ ನಿರ್ವಾಹಕರ ಸುರಕ್ಷತಾ ದೃಷ್ಟಿಯಿಂದ ಅವರಿಗೆ ಸ್ಯಾನಿಟೈಜûರ್, ಮುಖಗವಸು ಹಾಗೂ ಕೈಗವಸುಗಳನ್ನು ನೀಡಲಾಗುವುದು. ವೈದ್ಯಕೀಯ ತಪಾಸಣೆಗೊಳಪಡಿಸಿ ಪ್ರಮಾಣ ಪತ್ರ ಪಡೆದ ನಂತರವೇ ಬಸ್ ಚಾಲಕರು ಹಾಗೂ ನಿರ್ವಾಹಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು.    …

ಮುಂದೆ ಓದಿ...

ತುಮಕೂರು : ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ!!

ತುಮಕೂರು:       ಕೋವಿಡ್ ಸೋಂಕಿತರಾಗಿದ್ದ ತುಮಕೂರು ನಗರದ ಕೆಹೆಚ್‍ಬಿ ಕಾಲೋನಿಯ ನಿವಾಸಿಯಾದ ಪಿ-591 ಹಾಗೂ ಪಿ-592 ಸಂಪೂರ್ಣವಾಗಿ ಗುಣಮುಖರಾಗಿ ಇಂದು ಸಂಜೆ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡರು.       ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಪಿ-591 ಹಾಗೂ ಪಿ-592 ವ್ಯಕ್ತಿಗಳನ್ನು ಆಸ್ಪತ್ರೆಯ ಆರ್‍ಎಂಓ ಡಾ|| ವೀಣಾ ಹಾಗೂ ಆರೋಗ್ಯ ಸಿಬ್ಬಂದಿ ಸಡಗರದಿಂದ ಮನೆಗೆ ಕಳುಹಿಸಿಕೊಟ್ಟರು.

ಮುಂದೆ ಓದಿ...

ತುಮಕೂರು : ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ಗೆ ಚಾಲನೆ

ತುಮಕೂರು :     ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಸಾರ್ವಜನಿಕರ ಉಪಯೋಗಕ್ಕಾಗಿ ತುಮಕೂರು ಕೆಸ್ಸಾರ್ಟಿಸಿ ನಿರ್ಮಿಸಿರುವ ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ಗೆ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಚಾಲನೆ ನೀಡಿದರು.       ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಕರಾರಸಾ ನಿಗಮ ವತಿಯಿಂದ ಕೋವಿಡ್-19 ತಪಾಸಣೆ ಮಾಡಿಸಿಕೊಳ್ಳಲು ಬಸ್ಸನ್ನು ಮಾರ್ಪಾಡು ಮಾಡಿ, ಮೋಬೈಲ್ ಫೀವರ್ ಕ್ಲಿನಿಕ್ ತೆರೆಯಲಾಗಿದೆ. ನಗರ ಮತ್ತು ಗ್ರಾಮೀಣ ಭಾಗದಿಂದ ತಪಾಸಣೆಗಾಗಿ ಆಸ್ಪತ್ರೆಗಳಿಗೆ ಬರುವ ರೋಗಿಗಳ ಅನವಶ್ಯಕ ಓಡಾಟವನ್ನು ತಪ್ಪಿಸಬಹುದು. ಅವಶ್ಯಕತೆ ಇರುವ ಕಡೆ ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ನಲ್ಲಿಯೇ ಗಂಟಲು ದ್ರವ ಮಾದರಿಯನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.       ಜಿಲ್ಲಾಧಿಕಾರಿ ಡಾ.ಕೆ ರಾಕೇಶ್‍ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಅವಶ್ಯಕತೆ ಇರುವ ಕಡೆ…

ಮುಂದೆ ಓದಿ...

ನರೇಗಾ ಯೋಜನೆಯಡಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾಮಗಾರಿ ಕೈಗೊಳ್ಳಿ : ಸಚಿವ

 ತುಮಕೂರು:         ಕೊರೊನಾ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಗೆ ಕೆಲಸ ನೀಡಲಾಗುತ್ತಿದೆ. ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಜಮೀನಿನಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಳ್ಳುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ತಿಳಿಸಿದರು.       ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ಬದು ನಿರ್ಮಾಣ ಮಾಸಾಚರಣೆ ಅಂಗವಾಗಿ ವೈಯಕ್ತಿಕ ಬದು ನಿರ್ಮಾಣ ಕಾಮಗಾರಿಗಳ ಕಾರ್ಯಾದೇಶ ಪತ್ರ ಹಾಗೂ ಹೊಸ ಉದ್ಯೋಗ ಚೀಟಿಗಳನ್ನು ವಿತರಿಸಿ ಅವರು ಮಾತನಾಡಿದರು.       ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಸರ್ಕಾರದ ಆದೇಶದಂತೆ ರೈತರು ತಮ್ಮ ಜಮೀನಿನಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಳ್ಳಬಹುದಾಗಿದೆ. ರೈತರು ಈ ಯೋಜನೆಯನ್ನು ಸದುಪಯೋಗಪಡೆದುಕೊಳ್ಳಬೇಕು. ಜನರು ಕೆಲಸ…

ಮುಂದೆ ಓದಿ...