ತುಮಕೂರು : ಬೇಡಿಕೆ ಈಡೇರಿಸದಿದ್ದರೆ ಖಾಸಗಿ ಬಸ್ ಸೇವೆ ಇಲ್ಲ!!

ತುಮಕೂರು:       ಸರ್ಕಾರ ಖಾಸಗಿ ಬಸ್ ಮಾಲೀಕರ ಬೇಡಿಕೆಯಾದ ವಿಮೆ ವಿನಾಯಿತಿ ಹಾಗೂ ಮಾಸಿಕ ಕಂತಿನ ರಿಯಾಯಿತಿಯನ್ನು ನೀಡಿದರೆ ಮಾತ್ರ ಖಾಸಗಿ ಬಸ್ ಗಳ ಸೇವೆ ಪುನರಾರಂಭವಾಗಲಿದೆ ಎಂದು ತುಮಕೂರು ಖಾಸಗಿ ಬಸ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಬಿ.ಎಸ್.ಬಲಶ್ಯಾಮಸಿಂಗ್ ತಿಳಿಸಿದರು.       ನಗರದ ಹೊರವಲಯ ಹಿರೇಹಳ್ಳಿಯಲ್ಲಿ ವಿವಿಧ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಸರ್ಕಾರಕ್ಕೂ ಸಲ್ಲಿಸಿರುವ ಬೇಡಿಕೆಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಲಾಗಿದ್ದು, ಎಲ್ಲರೂ ಒಮ್ಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ, ಸರ್ಕಾರ ಒಪ್ಪಿದರೆ ಮಾತ್ರ ಸೇವೆ ನೀಡಬಹುದಾಗಿದೆ ಎಂದು ಅವರು ತಿಳಿಸಿದರು.       ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಈಗಾಗಲೇ ಬಸ್ ಮಾಲೀಕರ ಬೇಡಿಕೆಯನ್ನು ತಿಳಿಸಲಾಗಿದೆ, ಬಸ್ ಮೇಲಿನ ತ್ರೈಮಾಸಿಕ ತೆರಿಗೆಗೆ ಡಿಸೆಂಬರ್ ವರೆಗೆ ವಿನಾಯ್ತಿ ನೀಡಬೇಕು ಮತ್ತು…

ಮುಂದೆ ಓದಿ...

ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿ ಮಾಡಿ: ಜಿ.ಪಂ ಅಧ್ಯಕ್ಷೆ ಲತಾರವಿಕುಮಾರ್

 ತುಮಕೂರು:       ಜಿಲ್ಲೆಯಲ್ಲಿ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರದಲ್ಲಿ ದುರಸ್ತಿಪಡಿಸಿ, ಜನರಿಗೆ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋಗಿರುವ ಬಗ್ಗೆ ದೂರುಗಳು ಜನರಿಂದ ಬಂದಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು. ಮುಂದಿನ ದಿನಗಳಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದೇ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದರು.       ಕುಡಿಯುವ ನೀರಿನ ಸಮಸ್ಯೆಗಳನ್ನು ಜಿಲ್ಲಾ ಪಂಚಾಯತ್ ಸದಸ್ಯರು…

ಮುಂದೆ ಓದಿ...