ತುಮಕೂರು: ಕೊರೊನಾ ಹೊಸ ಪ್ರಕರಣ : ಸ್ಪಷ್ಟನೆ ನೀಡಿದ ಡಿಎಚ್‍ಓ

ತುಮಕೂರು:       ಕೆಲವು ದಿನಗಳ ಹಿಂದೆ ಜಿಲ್ಲೆಯಾದ್ಯಂತ ಸುದ್ದಿಯಾಗಿದ್ದ ಮತ್ತಿಬ್ಬರು ಕೊರೊನಾ ರೋಗಿಗಳು ಪತ್ತೆಯಾಗಿದ್ದಾರೆ ಎಂಬ ವಿಚಾರ ಸುಳ್ಳಾಗಿದ್ದು, ಅವರೆಡು ಕೂಡ ಹಳೆಯ ಪ್ರಕರಣಗಳೇ ಎಂದಿದ್ದಾರೆ.       ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗೇಂದ್ರಪ್ಪ ಮಾತನಾಡಿದ್ದು, `ರಾಜ್ಯ ಇಲಾಖೆ ಪ್ರಕಟಿಸಿರುವ 2 ಪ್ರಕರಣಗಳು ಹಳೆಯದಾಗಿವೆ. ಪಿ-1612, ಪಿ-1614 ಕೊರೊನಾ ಸೋಂಕಿತ ವ್ಯಕ್ತಿಗಳು ಮೇ 21ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪದ್ಧ್ದತಿಯಂತೆ ಇವರ 10ನೇ ದಿನದ ವರದಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ರಾಜ್ಯಮಟ್ಟದಲ್ಲಿ ಅನಾವಶ್ಯಕವಾಗಿ ಕಣ್ತಪ್ಪಿನಿಂದಾಗಿದ್ದು, ಈ ಸಂಬಂಧ ಯಾವುದೇ ಭಯಪಡುವ ಅಗತ್ಯವಿಲ್ಲ. ಹಳೆಯ ಪ್ರಕರಣಗಳನ್ನೇ ಹೊಸ ಪ್ರಕರಣವೆಂದು ದಾಖಲಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮುಂದೆ ಓದಿ...

ತುಮಕೂರು : ಜಿಲ್ಲಾಪಂಚಾಯಿತಿಗೆ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ

ತುಮಕೂರು:       ತುಮಕೂರು ಜಿಲ್ಲಾ ಪಂಚಾಯ್ತಿ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಗೂ ಸದಸ್ಯರ 3 ನೇ ಅವಧಿಗೆ ಮಂಗಳವಾರ ಅವಿರೋಧವಾಗಿ ಆಯ್ಕೆ ಮಾಡಲಾಯಿತು.       ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಚಿಕ್ಕನಾಯಕನಹಳ್ಳಿ ತಾಲೂಕು ಕಂದಿಕೆರೆ ಕ್ಷೇತ್ರದ ಸದಸ್ಯೆ ಮಂಜುಳಾ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಧುಗಿರಿ ತಾಲೂಕಿನ ದೊಡ್ಡೇರಿ ಕ್ಷೇತ್ರದ ಸದಸ್ಯ ಚೌಡಪ್ಪ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಂದನಕೆರೆ ಕ್ಷೇತ್ರದ ರಾಮಚಂದ್ರಯ್ಯ ಆಯ್ಕೆಯಾಗಿದ್ದಾರೆ.       ಉಳಿದಂತೆ ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಲತಾ ರವಿಕುಮಾರ್ ಹಾಗೂ ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶಾರದ ನರಸಿಂಹಮೂರ್ತಿ ಮುಂದುವರೆದಿದ್ದಾರೆ. ವಿವಿಧ ಸಮಿತಿಗಳಿಗೆ ಆಯ್ಕೆಯಾದ ಸದಸ್ಯರ ಪಟ್ಟಿ: ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ : ಗೌರಮ್ಮ ಎಸ್.ಟಿ.ಮಹಾಲಿಂಗಯ್ಯ,…

ಮುಂದೆ ಓದಿ...

ತುಮಕೂರು : ಯೋಧನ ಹೆಂಡತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಸಾವು!!

ತುಮಕೂರು :       ತುಮಕೂರಿನಲ್ಲಿ ಸಿಆರ್​ಪಿಎಫ್ ಯೋಧನ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಸಾವನಪ್ಪಿರುವುದು ಅನುಮಾನ ಮೂಡಿಸಿದೆ.       ತುಮಕೂರು  ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು,  24 ವರ್ಷದ ಗೌರಮ್ಮ ಮೃತ ಮಹಿಳೆ. ಸಿಆರ್​ಪಿಎಫ್​ ಯೋಧ ರವೀಶ್ ಹಾಗೂ ಗೌರಮ್ಮ 6 ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಆಕೆಗೆ ಗಂಡನ ಮನೆಯಲ್ಲಿ ನಿರಂತರವಾಗಿ ಕಿರುಕುಳ ನೀಡಲಾಗುತ್ತಿತ್ತು ಎಂದು ಮೃತಳ ತಂದೆ ತಾಯಿ ಆರೋಪಿಸಿದ್ದಾರೆ. ಇದೀಗ ನೇಣು ಬಿಗಿದುಕೊಂಡು ಗೌರಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ, ರವೀಶ್​ ಕುಟುಂಬಸ್ಥರು ಪರಾರಿಯಾಗಿದ್ದಾರೆ.          ಮದುವೆ ಸಂದರ್ಭದಲ್ಲಿ ಸಾಕಷ್ಟು ಒಡವೆ ನೀಡಿ ಅದ್ದೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಇಷ್ಟಾದರೂ ಗೌರಮ್ಮನಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು. ಇದೀಗ ಆಕೆಯ ಸಾವಿಗೂ ಗಂಡನ ಮನೆಯವರ ಕಿರುಕುಳ ಕಾರಣ. ಗೌರಮ್ಮನನ್ನು ಚೆನ್ನಾಗಿ ಥಳಿಸಿ ಸಾಯಿಸಿದ್ದಾರೆ. ಬಳಿಕ…

ಮುಂದೆ ಓದಿ...

ಕೆಎಸ್ಸಾರ್ಟಿಸಿ: ಜಿಲ್ಲಾ ವ್ಯಾಪ್ತಿಯ ಸಂಸ್ಥೆಯ ವಾಹನಗಳ ಕಾರ್ಯಾಚರಣೆಯ ಸಮಯ ನಿಗಧಿ

 ತುಮಕೂರು :       ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಜಿಲ್ಲಾ ವ್ಯಾಪ್ತಿಯಿಂದ ತಾಲ್ಲೂಕು ಕೇಂದ್ರಗಳಿಗೆ ಹಾಗೂ ತಾಲ್ಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಕ್ಕೆ ಕೊನೆಯ ವಾಹನಗಳ ಕಾರ್ಯಾಚರಣೆಯ ಸಮಯ ನಿಗಧಿಪಡಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರಕುಮಾರ್ ಅವರು ತಿಳಿಸಿದ್ದಾರೆ.        ಕೋವಿಡ್-19 ಸಾಂಕ್ರಾಮಿಕ ರೋಗದ ಪರಿಣಾಮದಿಂದ ದಿನಾಂಕ 31-05-2020ರವರೆಗೆ ಜಾರಿಯಾಗಿದ್ದ 04 ನೇ ಹಂತದ ಲಾಕ್ ಡೌನ್ ನ್ನು ಸರ್ಕಾರವು ದಿನಾಂಕ-01/06/2020 ರಿಂದ ಜಾರಿಗೆ ಬರುವಂತೆ ವಿನಾಯಿತಿ ನೀಡಿ 5 ನೇ ಹಂತದ ಲಾಕ್‍ಡೌನ್‍ನ್ನು ಜಾರಿಗೊಳಿಸಿರುವಂತೆ ಕಾರ್ಯಾಚರಣೆಯನ್ನು ನಡೆಸುತ್ತಿರುವುದು ಸರಿಯಷ್ಠೆ. ಸರ್ಕಾರದ ನಿರ್ದೇಶನದಂತೆ ರಾತ್ರಿ 09:00 ಗಂಟೆಯಿಂದ ಬೆಳಗ್ಗೆ 05:00 ಗಂಟೆಯವರೆಗೆ ಕಫ್ರ್ಯೂ ಜಾರಿಯಲ್ಲಿದ್ದು ಬೆಳಗ್ಗೆ 05:00 ಗಂಟೆಯಿಂದ ರಾತ್ರಿ 09:00 ಗಂಟೆಯವರೆಗೆ ವಾಹನ ಸಂಚಾರ ಇರುತ್ತದೆ.       ತುಮಕೂರು ಜಿಲ್ಲಾ ಕೇಂದ್ರದಿಂದ ತಾಲ್ಲೂಕು ಕೇಂದ್ರ…

ಮುಂದೆ ಓದಿ...

ತುಮಕೂರು : ಕಂಟೈನ್‍ಮೆಂಟ್ ವಲಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಕ್ಕೆ ಅವಕಾಶವಿಲ್ಲ!!

ತುಮಕೂರು :      ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದ ಕಾರಣ ಮಾರ್ಚ್ 27 ರಿಂದ ನಡೆಯಬೇಕಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಇದೇ ಜೂನ್ 25 ರಿಂದ ನಡೆಸಲು ಉದ್ದೇಶಿಸಲಾಗಿದ್ದು, ಕಂಟೈನ್‍ಮೆಂಟ್ ವಲಯದಲ್ಲಿ ಯಾವುದೇ ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.       ಕೋವಿಡ್-19 ಹಿನ್ನೆಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಜಿಲ್ಲಾ ಪಂಚಾಯತಿಯಲ್ಲಿಂದು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪರೀಕ್ಷೆ ಬರೆಯುವ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು. ಯಾವುದೇ ಪರೀಕ್ಷಾ ಕೇಂದ್ರವನ್ನು ಕ್ವಾರೆಂಟೈನ್ ಕೇಂದ್ರವನ್ನಾಗಿ ಬಳಸಬಾರದು. ನಗರ/ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಮೂಲಕ ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಗೆ ಮೂರು ದಿನಗಳ ಮುನ್ನ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಿ ಸ್ವಚ್ಛಗೊಳಿಸುವ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.…

ಮುಂದೆ ಓದಿ...