ಉಂಡೆ ಕೊಬ್ಬರಿ ಖರೀದಿಗೆ ಜೂನ್ 18 ರಿಂದ ರೈತರ ನೋಂದಣಿ!!

ತುಮಕೂರು:       ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‍ಗೆ 10,300 ರೂ.ನಂತೆ ಉಂಡೆ ಕೊಬ್ಬರಿಯನ್ನು ಖರೀದಿಸಲಿದ್ದು, ಜೂನ್ 18 ರಿಂದ ಜುಲೈ 4ರವರೆಗೆ ರೈತರು ತಮ್ಮ ಹೆಸರನ್ನು ನೋಂದಾಯಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜುಲೈ 6 ರಿಂದ ಜಿಲ್ಲೆಯಲ್ಲಿ ತೆರೆದಿರುವ 9 ಖರೀದಿ ಕೇಂದ್ರಗಳಲ್ಲಿ ನೋಂದಾಯಿತ ರೈತರಿಂದ ಉಂಡೆ ಕೊಬ್ಬರಿಯನ್ನು ಖರೀದಿಸಲಾಗುವುದು ಎಂದರು.       ಚಿಕ್ಕನಾಯಕನಹಳ್ಳಿ, ಹುಳಿಯಾರು, ತಿಪಟೂರು, ಗುಬ್ಬಿ, ತುರುವೇಕೆರೆ, ತುಮಕೂರು, ಕುಣಿಗಲ್, ಶಿರಾ, ಚೇಳೂರಿನ ಎಪಿಎಂಸಿ ಪ್ರಾಂಗಣದಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ರೈತರು ತಮ್ಮ ಹೆಸರನ್ನು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಎಪಿಎಂಸಿಯಲ್ಲಿರುವ ಖರೀದಿ ಕೇಂದ್ರಗಳಿಗೆ…

ಮುಂದೆ ಓದಿ...

ಭೂ ಪರಿಹಾರ ದರ ನಿಗಧಿಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ!!

ತುಮಕೂರು:       ಎತ್ತಿನ ಹೊಳೆಯ ಬೈರಗೊಂಡ್ಲು ಜಲಾಶಯದ ನಿರ್ಮಾಣಕ್ಕೆ ಭೂಸ್ವಾಧೀನಕ್ಕೊಳಪಡುವ ರೈತರ ಜಮೀನಿಗೆ ಸೂಕ್ತ ಪರಿಹಾರ ಧರ ನಿಗಧಿ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.      ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗಾಗಿ ಕೊರಟಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬೈರಗೊಂಡ್ಲು ಜಲಾಶಯ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜರುಗಿದ ಸಮಾಲೋಚನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.       ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರ ಜಮೀನು ಭೂಸ್ವಾಧೀನವಾಗುತ್ತಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರಿಗೆ ನೀಡುತ್ತಿರುವ ಪ್ರತಿ ಎಕರೆಗೆ 32ಲಕ್ಷ ರೂ.ಗಳ ಪರಿಹಾರ ದರದಂತೆ ಕೊರಟಗೆರೆ ತಾಲ್ಲೂಕಿನ ರೈತರಿಗೂ ದೊರೆಯಬೇಕೆನ್ನುವುದು ನನ್ನ ಆಶಯವಾಗಿದೆ. ಈ ನಿಟ್ಟಿನಲ್ಲಿ ಸಭೆಯಲ್ಲಿ…

ಮುಂದೆ ಓದಿ...

ಪರಿಶಿಷ್ಟರ ಬೋರ್‍ವೆಲ್‍ನಲ್ಲಿ ನೀರು ಸಿಕ್ಕಿದ್ದಕ್ಕೆ ಸವರ್ಣೀಯನಿಂದ ಹಲ್ಲೆ

ಮಧುಗಿರಿ:       ಪರಿಶಿಷ್ಟ ಜಾತಿಯ ವ್ಯಕ್ತಿ ತಮ್ಮ ಜಮೀನಿನಲ್ಲಿ ಬೋರ್‍ವೆಲ್ ಕೊರೆಸಿದಕ್ಕೆ ಖ್ಯಾತೆ ತೆಗೆದ ಪಕ್ಕದ ಜಮೀನಿನ ಸವರ್ಣಿಯನೊಬ್ಬ ಹಲ್ಲೆ ನಡೆಸಿರುವ ಘಟನೆ ಮದುಗಿರಿ ತಾಲ್ಲೂಕಿನ ತಿಪ್ಪಾಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.       ಪರಿಶಿಷ್ಟ ಜಾತಿಯ ವ್ಯಕ್ತಿ ಹನುಮಂತರಾಯಪ್ಪ ತಮ್ಮ ಜಮೀನಿನಲ್ಲಿ ಬೋರ್ ವೆಲ್ ಕೊರೆಸಿದ್ದಾನೆ. ಬೋರ್‍ವೆಲ್‍ನಲ್ಲಿ ನೀರು ಸಿಕ್ಕುತ್ತಿದ್ದಂತೆ ಪಕ್ಕದ ಜಮೀನಿನ ಮಾಲಿಕ ಸವರ್ಣಿಯ ವ್ಯಕ್ತಿ ಹಾಗೂ ಮಾಜಿ ಗ್ರಾ.ಪಂ.ಸದಸ್ಯ ನರಸಿಂಹಮೂರ್ತಿ ಎಂಬಾತ ತಮ್ಮ ಬೋರ್‍ವೆಲ್‍ನಲ್ಲಿ ನೀರು ಕಡಿಮೆಯಾಗುತ್ತದೆಂದು ಖ್ಯಾತೆ ತೆಗೆದು ಹನುಮಂತರಾಯಪ್ಪ ಮೇಲೆ ಹಲ್ಲೆ ನಡೆಸಿದ್ದಾನೆ. ಕಬ್ಬಿಣದ ರಾಡ್‍ನಿಂದ ಮನಬಂದಂತೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆ ಗೊಳಗಾದ ಹನುಮಂತರಾಯಪ್ಪನ ಕೈ ಹಾಗೂ ತೊಡೆಗೆ ಗಂಭೀರವಾಗಿ ಗಾಯಾ ಗಳಾಗಿದ್ದು ಮಧು ಗಿರಿ ತಾಲ್ಲೂಕು ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.    …

ಮುಂದೆ ಓದಿ...

ದ್ವಿತೀಯ ಪಿ.ಯು.ಸಿ. ಪರೀಕ್ಷೆ : 25,050 ವಿದ್ಯಾರ್ಥಿಗಳು ನೋಂದಣಿ

ತುಮಕೂರು  :       ಜಿಲ್ಲೆಯಲ್ಲಿ ಜೂನ್ 18 ರಂದು ನಡೆಯಲಿರುವ ದ್ವಿತೀಯ ಪಿಯುಸಿಯ ಇಂಗ್ಲೀಷ್ ವಿಷಯ ಪರೀಕ್ಷೆಗೆ 14078 ವಿದ್ಯಾರ್ಥಿನಿಯರು ಹಾಗೂ 10922 ವಿದ್ಯಾರ್ಥಿಗಳು ಸೇರಿದಂತೆ 25,050 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ ಈ ಪೈಕಿ 23492 ಹೊಸ, 980 ಖಾಸಗಿ ಹಾಗೂ 578 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲಲಿತಾ ಕುಮಾರಿ ತಿಳಿಸಿದ್ದಾರೆ.        ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪರೀಕ್ಷಾ ಕೇಂದ್ರದ ಕೊಠಡಿಗಳ ಸ್ಯಾನಿಟೈಸೇಷನ್ ಕಾರ್ಯ ಕೈಗೊಳ್ಳಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗಿರುವುದರಿಂದ ಪ್ರತಿ ಪರೀಕ್ಷಾ ಕೊಠಡಿಗಳಲ್ಲಿ 12 ಹಾಗೂ ದೊಡ್ಡ ಕೊಠಡಿಗಳಾದಲ್ಲಿ 24 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹಂಚಿಕೆ ಮಾಡಲಾಗಿದೆ.        ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರಸ್ತುತ ಬೇರೆ ಜಿಲ್ಲೆಯಲ್ಲಿ ವಾಸವಿರುವ…

ಮುಂದೆ ಓದಿ...