ಗುಬ್ಬಿ : ಕೊರೊನಾ ಪಾಸಿಟೀವ್ ; ಚೇಳೂರು ಕಲ್ಯಾಣ ಮಂಟಪ ಸೀಲ್‍ಡೌನ್!!

ಗುಬ್ಬಿ :       ಹಸಿರು ವಲಯ ಎನಿಸಿಕೊಳ್ಳುವ ಹಂತದಲ್ಲಿದ್ದ ಗುಬ್ಬಿ ತಾಲ್ಲೂಕಿಗೆ ಕಳೆದ 24 ತಾಸುಗಳಲ್ಲೇ ಎರಡು ಕೊವೀಡ್-19 ಪ್ರಕರಣ ದೃಢಪಟ್ಟಿರುವ ಹಿನ್ನಲೆ ಕಂಟೋನ್ಮೆಂಟ್ ಏರಿಯಾಗಳಾಗಿ ಚೇಳೂರು ಕಲ್ಯಾಣ ಮಂಟಪ ಹಾಗೂ ಪಟ್ಟಣದ ಸಮೀಪದ ಕಿಟ್ಟದಕುಪ್ಪೆ ಗ್ರಾಮ ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದೆ.       ಗುರುವಾರ ಸಂಜೆ ಸಮಯದಲ್ಲಿ ಚೇಳೂರು ಕಲ್ಯಾಣ ಮಂಟಪದಲ್ಲಿ ಕ್ವಾರೆಂಟೈನ್‍ನಲ್ಲಿದ್ದ ದೆಹಲಿ ಮೂಲದ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟೀವ್ ದೃಢವಾಗಿದೆ. ದೆಹಲಿಯಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ ಈ ವ್ಯಕ್ತಿಯ ಟ್ರಾವಲ್ ಹಿಸ್ಟರಿ ಎಷ್ಟೇನೂ ಕಷ್ಟ ಎನಿಸಿದಿದ್ದರೂ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಐಸೂಲೇಷನ್‍ಗೆ ಒಳಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಶುಕ್ರವಾರ ಮುಂಜಾನೆ ಗುಬ್ಬಿ ಪಟ್ಟಣದ ನಾಗರೀಕರಲ್ಲಿ ಆತಂಕ ಮೂಡಿಸಿದ ಕಿಟ್ಟದಕುಪ್ಪೆ ಗ್ರಾಮದ ಪಾಸಿಟೀವ್ ವ್ಯಕ್ತಿಯ ಟ್ರಾವಲ್ ಹಿಸ್ಟರಿ ತೀವ್ರ ತಲೆ ನೋವಾಗಿದೆ.       ಕಿಟ್ಟದಕುಪ್ಪೆ ಮೂಲದ ಸುಮಾರು 55…

ಮುಂದೆ ಓದಿ...

ತುಮಕೂರು : ಪಿಡಬ್ಲ್ಯೂಡಿ ನಗರ ಉಪವಿಭಾಗ ಪ್ರಾರಂಭ

ತುಮಕೂರು:       ತುಮಕೂರು ನಗರ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿ ಒಳಗೊಂಡತೆ, ಯಾದಗಿರಿ ಜಿಲ್ಲೆಯ ದೇವದುರ್ಗ ಕೆಶಿಫ್ ಕಚೇರಿಯನ್ನು ಪರಿವರ್ತಿಸಿ, ಲೋಕೋಪಯೋಗಿ ತುಮಕೂರು ನಗರ ಉಪವಿಭಾಗವನ್ನು ಹೊಸದಾಗಿ ಸೃಜಿಸಲಾಗಿದ್ದು, ಈ ಉಪವಿಭಾಗವನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿರವರು ಉದ್ಘಾಟಿಸಿದರು.       ತುಮಕೂರು ನಗರ, ಗ್ರಾಮಾಂತರ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡತೆ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದು, ತುಮಕೂರು ಉಪವಿಭಾಗದಲ್ಲಿ ಕಾರ್ಯಭಾರ ಹೆಚ್ಚಿದ್ದರಿಂದ, ಸರ್ಕಾರ ತುಮಕೂರು ನಗರ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿ ಒಳಗೊಂಡತೆ, ಯಾದಗಿರಿ ಜಿಲ್ಲೆಯ ದೇವದುರ್ಗ ಕೆಶಿಫ್ ಕಚೇರಿಯನ್ನು ಪರಿವರ್ತಿಸಿ ತುಮಕೂರು ನಗರ ಉಪವಿಭಾಗವನ್ನು ಸೃಜಿಸಿ ಆದೇಶ ಹೊರಡಿಸಿದೆ.       ಇದರಿಂದಾಗಿ ತುಮಕೂರು ನಗರ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿ ಒಳಗೊಂಡ ನಗರ ಉಪವಿಭಾಗವು ಇಲಾಖೆ ವತಿಯಿಂದ ನಿರ್ವಹಿಸುವ…

ಮುಂದೆ ಓದಿ...

ಕೊಳವೆ ಬಾವಿ ಕೊರೆಯುವುದಷ್ಟೇ ಅಧಿಕಾರಿಗಳ ಕೆಲಸವಲ್ಲ : ಜಿ.ಪಂ.ಉಪಾಧ್ಯಕ್ಷೆ

ತುಮಕೂರು:      ಕೇವಲ ಕೊಳವೆ ಬಾವಿ ಕೊರೆಯುವುದಷ್ಟೇ ಆರ್.ಡಬ್ಲ್ಯಎಸ್ ಕೆಲಸವಲ್ಲ. ಆ ನಂತರದ ಎಲ್ಲಾ ಕೆಲಸಗಳನ್ನು ಮೇಲುಸ್ತುವಾರಿ ಮಾಡಿ, ಅಂತಿಮವಾಗಿ ಜನರಿಗೆ ಕುಡಿಯುವ ನೀರು ಒದಗಿಸುವವರು, ಗ್ರಾ.ಪಂ., ತಾ.ಪಂ. ಅಧಿಕಾರಿಗಳ ಜೊತೆಗೆ ಸಮನ್ವಯ ಸಾಧಿಸಿ,ಉದ್ದೇಶ ಈಡೇರಿಸುವಂತೆ ಜಿ.ಪಂ.ಉಪಾಧ್ಯಕ್ಷೆ ಶ್ರೀಮತಿ ಶಾರದ ನರಸಿಂಹ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.       ಜಿ.ಪಂ.ಸಭಾಂಗಣದಲ್ಲಿ ನಡೆದ ಸಾಮಾನ್ಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಒಂದು ಒವರ್ ಹೆಡ್‍ಟ್ಯಾಂಕು ನಿರ್ಮಿಸುವ ಮುನ್ನ ಕೇವಲ ಕೊಳವೆ ಬಾವಿ ಕೊರೆದು,ಪೈಪ್ ಲೈನ್ ಅಳವಡಿಸಿದ ನಂತರ ಟ್ಯಾಂಕ್ ನಿರ್ಮಾಣಕ್ಕೆ ಮುಂದಾಗಬೇಕು.ಇಲ್ಲದಿದ್ದರೆ ಅಧಿಕಾರಿಗಳ ಸಮನ್ವಯದ ಕೊರತೆಯಿಂದ ಸರಕಾರ ಲಕ್ಷಾಂತರ ರೂ ವೆಚ್ಚ ಮಾಡಿದರೂ ಉದ್ದೇಶ ಈಡೇರಿರುವುದಿಲ್ಲ. ಇದು ಸರಿಯಲ್ಲ. ಈ ನಿಟ್ಟಿನಲ್ಲಿ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾ.ಪಂ, ತಾ.ಪಂ,ಆರ್.ಡಬ್ಲು ಎಸ್ ಹಾಗೂ…

ಮುಂದೆ ಓದಿ...

ತುಮಕೂರು  : ಸಿದ್ದಗಂಗಾ ಮಠಕ್ಕೆ ಕೋಲ್ಡ್ ಸ್ಟೋರೇಜ್ ಮಂಜೂರು!!

ತುಮಕೂರು  :      ಸಿದ್ದಗಂಗಾ ಮಠದಲ್ಲಿ 10 ರಿಂದ 12 ಸಾವಿರ ಮಕ್ಕಳು ಪ್ರತಿನಿತ್ಯ ಊಟ ಮಾಡುವುದರಿಂದ ತರಕಾರಿ ಸಂಗ್ರಹಣೆ ಮಾಡುವುದು ಕಷ್ಟವಾಗುತ್ತಿದೆ ಹಾಗಾಗಿ ಮಠಕ್ಕೆ ಕೃಷಿ ಇಲಾಖೆಯು ನಬಾರ್ಡ್‍ನಿಂದ 7.5 ಕೋಟಿ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್‍ನ್ನು ನಿರ್ಮಾಣ ಮಾಡಲು ಹಣ ಮಂಜೂರು ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.       ಶ್ರೀ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದ ಸಚಿವರು ಶ್ರೀಗಳ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಲಾಭ ಬರುವ ಯಾವ ಬೆಳೆಯನ್ನು ಬೇಕಾದರು ಬೆಳೆಯಲಿ ಸರ್ಕಾರ ಅವರಿಗೆ ಬಿತ್ತನೆ ಬೀಜದ ವ್ಯವಸ್ಥೆ ಮಾಡುವ ಕಾರ್ಯಮಾಡುತ್ತದೆ ಎಂದು ಅವರು ಹೇಳಿದರು.       ಈ ಸಂದರ್ಭದಲ್ಲಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ರೈತರು ಬೆಳೆದ ಬೆಳೆಯನ್ನು ಮಾರುಕಟ್ಟೆಯಲ್ಲಿ ಎಲ್ಲಿ ಬೇಕಾದರು ಮಾರಾಟ ಮಾಡುವ ಸ್ವಾತಂತ್ರ…

ಮುಂದೆ ಓದಿ...

SSLC ಪರೀಕ್ಷೆಗೆ ಯಾವ ವಿದ್ಯಾರ್ಥಿಯು ಗೈರು ಹಾಜರಾಗಬಾರದು : ಸಚಿವ

ತುಮಕೂರು :       ಜಿಲ್ಲೆಯಲ್ಲಿ ಜೂನ್ 25ರಿಂದ ಜುಲೈ 2ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಯಾವುದೇ ವಿದ್ಯಾರ್ಥಿಯು ಗೈರು ಹಾಜರಾಗಬಾರದಂತೆ ಎಚ್ಚರವಹಿಸಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಪೂರ್ವ ಸಿದ್ಧತಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.        ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲೆ ಯಶಸ್ವಿಯಾಗಿರುವಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸಮಪರ್ಕವಾಗಿ, ವ್ಯವಸ್ಥಿತವಾಗಿ ಮಾಡಬೇಕು. ಮಕ್ಕಳು ಭಯಪಡದೇ ಪರೀಕ್ಷೆ ಬರೆಯುವಂತಾಗಬೇಕು. ಅಲ್ಲದೇ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮನೆಯಿಂದಲೇ ಬಿಸಿ ನೀರನ್ನು/ಬಿಸಿ ಆರಿದ ನೀರು ತರುವಂತೆ ತಿಳಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳ ಮನಸ್ಥಿತಿ ಕೆಡದಂತೆ ಎಚ್ಚರವಹಿಸಬೇಕು ಎಂದರು.      …

ಮುಂದೆ ಓದಿ...

ತುಮಕೂರು : ಸಿದ್ದಗಂಗಾ ಮಠದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊರೊನಾ!!

ತುಮಕೂರು :       ನಗರದ ಶ್ರೀ ಸಿದ್ದಗಂಗಾ ಮಠದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕರೊನಾ ಸೋಂಕು ತಗುಲಿದ್ದು, ಆತನ ಜತೆ ಓದುತ್ತಿರುವವರು ಮತ್ತು ಶಿಕ್ಷಕ ವೃಂದದಲ್ಲಿ ಆತಂಕ ಸೃಷ್ಟಿಸಿದೆ.       ಆಂಧ್ರಪ್ರದೇಶದ ಕರ್ನೂಲ್ ಮೂಲದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ರಾಯಚೂರು ಮೂಲಕ ಜೂ. 15ರಂದು ಮಠಕ್ಕೆ ಬಂದಿದ್ದು ಆತನಲ್ಲಿ ಯಾವುದೇ ರೋಗಲಕ್ಷಣಗಳು ಕಂಡುಬಂದಿರಲಿಲ್ಲ. ನಂತರ ಕರ್ನೂಲ್ ಜಿಲ್ಲಾಡಳಿತ ಆತನಿಗೆ ಕರೊನಾ ಸೋಂಕು ತಗುಲಿರುವ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಮಠಕ್ಕೆ ದೌಡಾಯಿಸಿದರು. ತಕ್ಷಣವೇ ಆತನನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮತ್ತೊಮ್ಮೆ ಪರೀಕ್ಷೆಗೆ ಗಂಟಲು ಸ್ರವ ಮಾದರಿ ಸಂಗ್ರಹಿಸಲಾಯಿತು.        ಆತನೊಂದಿಗೆ ಕೊಠಡಿಯಲ್ಲಿ ಇದ್ದ ಮೂವರು ವಿದ್ಯಾರ್ಥಿಗಳನ್ನು ಈಗ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಕಳೆದ 4 ದಿನಗಳಿಂದ ಈ ಪಾಸಿಟಿವ್ ವಿದ್ಯಾರ್ಥಿಯು ಇತರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜತೆ ಬೆರೆತಿದ್ದಾನೆ.    …

ಮುಂದೆ ಓದಿ...