ನರೇಗಾದಡಿ ಬದು ನಿರ್ಮಾಣ : 40ಸಾವಿರ ರೂ. ಆದಾಯ

ತುಮಕೂರು:        ಜಿಲ್ಲೆಯ ಶಿರಾ ತಾಲ್ಲೂಕು ರತ್ನಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶ್ರೀನಿವಾಸಪ್ಪ ಎಂಬ ರೈತ ತಮ್ಮ ಜಮೀನಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿದ್ದರಿಂದ ಈತನ ಕುಟುಂಬಕ್ಕೆ 40ಸಾವಿರ ರೂ.ಗಳ ಆದಾಯ(ಕೂಲಿ ಹಣ) ದೊರೆತಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ. ರೈತ ಶ್ರೀನಿವಾಸಪ್ಪ ಅವರು ತಮಗಿರುವ 5 ಎಕರೆ ಜಮೀನಿನಲ್ಲಿ ಬದು ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿದ್ದಾರೆ. ಇದರಿಂದ ಮಳೆಗಾಲದಲ್ಲಿ ಬದುಗಳಲ್ಲಿ ನೀರು ಶೇಖರಣೆಯಾಗಿ ತೇವಾಂಶ ಹೆಚ್ಚಿ ಕೃಷಿಯಲ್ಲಿ ಸುಮಾರು 10 ರಿಂದ 15ರಷ್ಟು ಹೆಚ್ಚಿನ ಇಳುವರಿ ಪಡೆಯಬಹುದಲ್ಲದೆ ಬದುವಿನ ಮೇಲೆ ಗಿಡಗಳನ್ನು ನೆಟ್ಟು ಬದು ಬೇಸಾಯ ಸಹ ಮಾಡಬಹುದಾಗಿದೆ. ಈ ಕಾಮಗಾರಿಯಿಂದಾಗಿ ರೈತ ಕುಟುಂಬಕ್ಕೆ 146 ಮಾನವ ದಿನಗಳ ಸೃಜನೆಯಾಗುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವಲ್ಲಿ ಯೋಜನೆಯು ಯಶಸ್ವಿಯಾಗಿದೆ ಎಂದು…

ಮುಂದೆ ಓದಿ...

ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಯಾವ ವಿದ್ಯಾರ್ಥಿಯೂ ಗೈರು ಹಾಜರಾಗಬಾರದು

ತುಮಕೂರು:      ಜಿಲ್ಲೆಯಲ್ಲಿ ಜೂನ್ 25ರಿಂದ ಜುಲೈ 2ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಯಾವುದೇ ವಿದ್ಯಾರ್ಥಿಯು ಗೈರು ಹಾಜರಾಗಬಾರದಂತೆ ಎಚ್ಚರವಹಿಸಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಪೂರ್ವ ಸಿದ್ಧತಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.       ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲೆ ಯಶಸ್ವಿಯಾಗಿರುವಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸಮಪರ್ಕವಾಗಿ, ವ್ಯವಸ್ಥಿತವಾಗಿ ಮಾಡಬೇಕು. ಮಕ್ಕಳು ಭಯಪಡದೇ ಪರೀಕ್ಷೆ ಬರೆಯುವಂತಾಗಬೇಕು. ಅಲ್ಲದೇ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮನೆಯಿಂದಲೇ ಬಿಸಿ ನೀರನ್ನು/ಬಿಸಿ ಆರಿದ ನೀರು ತರುವಂತೆ ತಿಳಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳ ಮನಸ್ಥಿತಿ ಕೆಡದಂತೆ ಎಚ್ಚರವಹಿಸಬೇಕು ಎಂದರು.       ಪರೀಕ್ಷಾ ಕೇಂದ್ರಗಳಿಗೆ ಬರುವ…

ಮುಂದೆ ಓದಿ...

ತುಮಕೂರು : ಎಸ್.ಎಸ್.ಎಲ್.ಸಿ. ಪರೀಕ್ಷೆ : ನಿಷೇಧಾಜ್ಞೆ ಜಾರಿ!!

ತುಮಕೂರು:       ಜಿಲ್ಲೆಯಲ್ಲಿ ಜೂನ್ 25 ರಿಂದ ಜುಲೈ 3ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.       ಜಿಲ್ಲಾದ್ಯಂತ 144 ಪರೀಕ್ಷಾ ಕೇಂದ್ರ ಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಪಾರ ದರ್ಶಕವಾಗಿ ನಡೆಸುವ ದೃಷ್ಟಿಯಿಂದ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ನಿಷೇಧಾಜ್ಞೆಯು ಜೂನ್ 25 ರಿಂದ ಜುಲೈ 3ರವರೆಗೆ (ಪರೀಕ್ಷೆ ನಡೆಯುವ ದಿನಗಳಂದು) ಬೆಳಿಗ್ಗೆ 9 ರಿಂದ ಸಂಜೆ 5-30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.       ನಿಷೇಧಾವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಬೇಕು. ನಿಷೇಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವಂತಿಲ್ಲ. ನಿಷೇಧವನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು.    …

ಮುಂದೆ ಓದಿ...

ಸಾರ್ವಜನಿಕ ಶಿಕ್ಷಣ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಅನುಮೋದನೆ

ತುಮಕೂರು:       ಶಾಲಾ ಕೊಠಡಿ ನಿರ್ಮಾಣ, ಕಟ್ಟಡ ದುರಸ್ತಿ, ಮತ್ತಿತರ ಮೂಲಭೂತ ಸೌಕರ್ಯ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾಗಿರುವ ಅನುದಾನಕ್ಕೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯು ಅನುಮೋದನೆ ನೀಡಿದೆ.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಚೌಡಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ತುಮಕೂರು ಶೈಕ್ಷಣಿಕ ಜಿಲ್ಲೆಗೆ 492.11 ಲಕ್ಷ ರೂ. ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ 301.48ಲಕ್ಷ ರೂ.ಗಳ ಅನುದಾನಕ್ಕೆ ಅವರು ಅನುಮೋದನೆ ನೀಡಲಾಯಿತು.       ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೂ ಪರೀಕ್ಷೆ ಹಾಜರಾಗಲು ಅನುವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಆರೋಗ್ಯ, ಸಾರಿಗೆ ಮತ್ತು ಶಿಕ್ಷಣ ಇಲಾಖೆಯ…

ಮುಂದೆ ಓದಿ...

ತುಮಕೂರು : ಜಿಲ್ಲೆಯಲ್ಲಿ ಅರ್ಧ ಶತಕ ಭಾರಿಸಿದ ಕೊರೊನಾ ಸಂಖ್ಯೆ!!!

ತುಮಕೂರು :       ಜಿಲ್ಲೆಯಲ್ಲಿ ಹೊಸದಾಗಿ 4 ಮಂದಿಗೆ ಕೋವಿಡ್-19 ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 50 ಕ್ಕೆ ಏರಿಕೆಯಾಗಿದೆ.       ಡಿ.ಹೆಚ್ ಒ ಡಾ.ನಾಗೇಂದ್ರಪ್ಪ ಈ ಕುರಿತು ಮಾಹಿತಿ ನೀಡಿದ್ದು, tmk-47 ಎಂಬ ಸೋಂಕಿತರು ನೆಲಮಂಗಲ ತಾಲ್ಲೂಕಿನ ಕೊರೊನಾ ರೋಗಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. tmk-48 ಎಂಬ ಸೋಂಕಿತರು ಜೂ.೧೬ ರಂದು ತಮಿಳುನಾಡಿನಿಂದ ತಿಪಟೂರಿಗೆ ಬಂದಿದ್ದರು ಎನ್ನಲಾಗಿದೆ. , tmk 49 ಎಂಬ ಸೋಂಕಿತರು ತುಮಕೂರು ಗ್ರಾಮಾಂತರದ ವಾಸಿಯಾಗಿದ್ದು, tmk-50 ಎಂಬ ಸೋಂಕಿತರು ವಿದೇಶದಿಂದ ತುಮಕೂರು ನಗರಕ್ಕೆ ಆಗಮಿಸಿದ್ದ ೨೫ ವರ್ಷದ ಪುರುಷ.        ಇನ್ನು ಈ ಎಲ್ಲಾ ಸೋಂಕಿತರನ್ನು ತುಮಕೂರು ಕೋವಿಡ್-೧೯ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರನ್ನು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಸೊಂಕಿತರು ವಾಸವಿದ್ದ ಪ್ರದೇಶಗಳನ್ನು…

ಮುಂದೆ ಓದಿ...