ಕೊರೊನಾ ಲಕ್ಷಣಗಳಿದ್ದರೆ ಪರೀಕ್ಷಿಸಿಕೊಳ್ಳಿ-ಜಿಲ್ಲಾಧಿಕಾರಿ

ತುಮಕೂರು:       ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಕೊರೊನಾ ಲಕ್ಷಣಗಳಾದ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆಯಿದ್ದರೆ ನಿರ್ಲಕ್ಷ್ಯಿಸದೇ ಪರೀಕ್ಷೆಗೊಳಪಡುವಂತೆ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ 57 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಚಿಕ್ಕನಾಯಕನಹಳ್ಳಿ-2, ಗುಬ್ಬಿ-3, ಕೊರಟಗೆರೆ-1, ಕುಣಿಗಲ್-1, ಮಧುಗಿರಿ-4, ಪಾವಗಡ-5, ಶಿರಾ-15, ತಿಪಟೂರು-3, ತುಮಕೂರು-19, ತುರುವೇಕೆರೆ-4 ಇದರಲ್ಲಿ ಹೊರ ರಾಜ್ಯ/ಜಿಲ್ಲೆಗಳಿಂದ ಬಂದವರಿಂದಲೇ ಪ್ರಕರಣಗಳು ಹೆಚ್ಚಾಗಿವೆ ಎಂದರಲ್ಲದೇ ಈವರೆಗೂ 15440 ಪ್ರಕರಣಗಳನ್ನು ಪರೀಕ್ಷೆಗೊಳಪಡಿಸಿದ್ದು, 14232 ಪ್ರಕರಣಗಳು ನೆಗೆಟಿವ್ ಬಂದಿವೆ. ಈ ಪೈಕಿ 963 ಜನರ ಗಂಟಲು ದ್ರವ ಮಾದರಿ ಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದರು.        ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ…

ಮುಂದೆ ಓದಿ...

ಸ್ಮಾರ್ಟ್‍ಸಿಟಿ ಅನುದಾನದಲ್ಲಿ ರೈಲ್ವೆ ಸ್ಟೇಷನ್ ರಸ್ತೆ ಅಭಿವೃದ್ಧಿ : ಶಾಸಕ

ತುಮಕೂರು:       ಸಿಎಸ್‍ಐ ಬಡಾವಣೆ, ವಿದ್ಯಾನಿಕೇತನ ಶಾಲೆ, ಪದವಿ ಕಾಲೇಜು, ಹಾಸ್ಟೆಲ್‍ಗಳಿರುವ ಬಿಎಚ್ ರಸ್ತೆಗೆ ಪರ್ಯಾಯವಾಗಿರುವ ರೈಲ್ವೆ ಸ್ಟೇಷನ್ ರಸ್ತೆಯನ್ನು ಸ್ಮಾರ್ಟ್‍ಸಿಟಿ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ನಗರ ಶಾಸಕ ಜ್ಯೋತಿಗಣೇಶ್ ತಿಳಿಸಿದರು.       ನಗರದ ರೈಲ್ವೆಸ್ಟೇಷನ್ ರಸ್ತೆಯ ಸಮೀಪ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಬಿ.ಎಚ್.ರಸ್ತೆಯ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಕಿಷ್ಕಿಂದೆಯಾಗಿದ್ದ ಈ ರಸ್ತೆಯನ್ನು ಅಗಲೀಕರಣ ಮಾಡಲು ಇಲ್ಲಿನ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಅಗಲೀಕರಣಕ್ಕೆ ಸಹಕಾರ ನೀಡಿದ್ದಾರೆ, ಅದಕ್ಕೆ ಇಲ್ಲಿನ ನಿವಾಸಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.       ರೈಲ್ವೆ ಸ್ಟೇಷನ್‍ನಿಂದ ವಿದ್ಯಾನಿಕೇತನ ಶಾಲೆವರೆಗೆ ದ್ವಿಪಥ ರಸ್ತೆ ನಂತರ ಚರ್ತುಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಿಂದ ಬಿ.ಎಚ್.ರಸ್ತೆಯ ಮೇಲಿನ ಒತ್ತಡ ಶೇ.40ರಷ್ಟು ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟ ಅವರು, ಪ್ರಧಾನಿ…

ಮುಂದೆ ಓದಿ...

ತುಮಕೂರು : ಸಿದ್ಧಗಂಗ ಮಠಕ್ಕೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಭೇಟಿ!!

ತುಮಕೂರು:       ಜಿಲ್ಲಾ ಬಿಜೆಪಿಯ ನೂತನ ಸಾರಥಿ ಮಾಜಿ ಶಾಸಕ ಬಿ.ಸುರೇಶ್ ಗೌಡರವರು ಸಿದ್ಧಗಂಗ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದರು.       ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊಟ್ಟ ಮೊದಲ ಬಾರಿಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಜಿಲ್ಲಾಧ್ಯಕ್ಷರಾಗಿ ಶ್ರೀಗಳ ಆಶೀರ್ವಾದ ಪಡೆದದ್ದು ವಿಶೇಷ.       ಜಿಲ್ಲಾಧ್ಯಕ್ಷ ಬಿ.ಸುರೇಶ್‍ಗೌಡರನ್ನು ಆಶೀರ್ವ ದಿಸಿದ ಶ್ರೀಗಳು ಜಿಲ್ಲೆಯ ಸಂಘಟ ನೆಯಲ್ಲಿ ಯಶಸ್ವಿ ನಾಯಕನಾಗುವಂತೆ ಅರಸಿ ಆಶೀರ್ವದಿಸಿದರು.       ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರೊಟ್ಟಿಗೆ ಮಾಜಿ ಸಚಿವ ಸೊಗಡು ಶಿವಣ್ಣ, ನಿಕಟಪೂರ್ವ ಅಧ್ಯಕ್ಷ ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಹಾಲಿ ಸದಸ್ಯ ಸದಸ್ಯ ವೈ.ಹೆಚ್.ಹುಚ್ಚಯ್ಯ. ಹಾಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಗೂಳೂರು ಶಿವಕುಮಾರ್, ಸಿದ್ದೇಗೌಡರು, ಮಾಜಿ ತಾ.ಪಂ ಅಧಕ್ಷರು ನರಸಿಂಹಮೂರ್ತಿ ಸೇರಿದಂತೆ…

ಮುಂದೆ ಓದಿ...

SSLC ಪರೀಕ್ಷೆಯ ಮಕ್ಕಳಲ್ಲಿ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ಇಲ್ಲ

ತುಮಕೂರು:       ಜೂನ್ 25ರಿಂದ ಆರಂಭವಾಗುತ್ತಿರುವ ಹತ್ತನೇ ತರಗತಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ:ಕೆ.ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಮಕ್ಕಳಲ್ಲಿ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಒಂದು ವೇಳೆ ಪಾಸಿಟಿವ್ ಪ್ರಕರಣ ಕಂಡು ಬಂದರೆ ಪಾಸಿಟಿವ್ ಅಥವಾ ಪ್ರಾಥಮಿಕ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಪ್ರೆಶರ್ಸ್ ಎಂದು ಪರಿಗಣಿಸಿ ಪರೀಕ್ಷೆ ಬರೆಸುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದೇವೆ ಎಂದರು.       ತುಮಕೂರು(ದ) ಶೈಕ್ಷಣಿಕ ಜಿಲ್ಲೆಯಲ್ಲಿ 85(8 ಬ್ಲಾಕ್ ಪರೀಕ್ಷಾ ಕೇಂದ್ರ) ಪರೀಕ್ಷಾ ಕೇಂದ್ರಗಳಿದ್ದು, 23783 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು…

ಮುಂದೆ ಓದಿ...