ತುಮಕೂರು : ಜಿಲ್ಲೆಯಲ್ಲಿ 221 ಕ್ಕೇರಿದ ಕೊರೊನಾ ಪಾಸಿಟೀವ್!!

ತುಮಕೂರು :       ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ 13 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 221 ಕ್ಕೆ ಏರಿಕೆ ಆದಂತಾಗಿದೆ. ತಾಲ್ಲೂಕುವಾರು ಸೋಂಕಿತರ ವಿವರ : ತುಮಕೂರು -6 ಪಾವಗಡ – 3 ಮಧುಗಿರಿ-2, ಕುಣಿಗಲ್-2       ಜಿಲ್ಲೆಯ  ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಗುಬ್ಬಿ, ಕೊರಟಗೆರೆ, ಕುಣಿಗಲ್ ತಾಲ್ಲೂಕುಗಳಲ್ಲಿ ಕೊರೊನಾ ರುದ್ರ ನರ್ತನ ಮಾಡುತ್ತಿದೆ.       ಲಾಕ್‍ಡೌನ್ ಸಡಿಲಿಕೆಯ ನಂತರ ಎಲ್ಲರೂ ಎಲ್ಲೆಂದರಲ್ಲಿ ಸುತ್ತಾಡುತ್ತಿದ್ದು, ಯಾರಿಗೆ ಯಾರಿಂದ ಸೋಂಕು ಹರಡುತ್ತಿದೆ ಎಂಬ ಅರಿವಿಲ್ಲ.       ಗ್ರಾಮೀಣ ಪ್ರದೇಶದ ಜನತೆಯನ್ನ ಬಿಟ್ಟು ಬಿಡದಂತೆ ಕಾಡುತ್ತಿರುವ ಕೊರೊನಾ ಸೋಂಕು ಯಾವುದೇ ರೀತಿಯಲ್ಲಿ ಯಾರಿಂದ ಯಾರಿಗೆ ಸುಳಿವು ನೀಡದೇ ಎಲ್ಲರಲ್ಲೂ ಆವರಿಸುತ್ತಿದೆ.

ಮುಂದೆ ಓದಿ...

ತುಮಕೂರು : ಜಿಲ್ಲಾಸ್ಪತ್ರೆಗೆ ನೂತನ ಎ.ಎಲ್.ಎಸ್ ಆಂಬುಲೆನ್ಸ್!!

ತುಮಕೂರು:       ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ಜಿಲ್ಲಾ ಆಸ್ಪತ್ರೆಗೆ ನೂತನ ಎ.ಎಲ್.ಎಸ್ ಆಂಬುಲೆನ್ಸ್ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಟಿ ರಂಗಸ್ವಾಮಿ ತಿಳಿಸಿದ್ದಾರೆ.       ಕೋವಿಡ್-19 ಹಿನ್ನೆಲೆಯಲ್ಲಿ ಸೋಂಕಿತರನ್ನು ಕರೆತರಲು ಜಿಲ್ಲಾಸ್ಪತ್ರೆಗೆ 54 ಲಕ್ಷ ರೂ. ಮೊತ್ತದ ಒಂದು ಜೀವರಕ್ಷಕ ಎ.ಎಲ್.ಎಸ್ ಆಂಬುಲೆನ್ಸ್ ಅನ್ನು ಒದಗಿಸಲಾಗಿದೆ. ಜಿಲ್ಲಾಸ್ಪತ್ರೆ ಮನವಿ ಮೇರೆಗೆ ಈ ಅತ್ಯಾಧುನಿಕ ಆಂಬುಲೆನ್ಸ್ ಅನ್ನು ಒದಗಿಸಲಾಗಿದ್ದು, ಆಂಬುಲೆನ್ಸ್‍ನಲ್ಲಿ ಒಂದು Portable ventilator, Syringe infusion pump, Wheel chair cum Evacuation chair, Intubation kit, Advanced portable suction unit ಮತ್ತಿತರೆ ಪರಿಕರಗಳನ್ನೊಳಗೊಂಡಿದೆ.        ಜಿಲ್ಲಾಸ್ಪತ್ರೆಯ ಟ್ರಾಮಾ ಕೇರ್ ವಿಭಾಗದಿಂದ ರೋಗಿಗಳನ್ನು ಉನ್ನತ ಮಟ್ಟದ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗಳಿಗೆ ಕರೆದೊಯ್ಯಲು ಹಾಗೂ ಅಪಘಾತ ಸ್ಥಳದಿಂದ…

ಮುಂದೆ ಓದಿ...

ಚಿ.ನಾ.ಹಳ್ಳಿ ತಾಪಂ ಕೆಡಿಪಿ ಸಭೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ!

ತುಮಕೂರು:       ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ 2020-21ನೇ ಸಾಲಿನ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಗೌರವ ತೋರಿ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಆರ್.ರಾಮಚಂದ್ರಯ್ಯ, ಜಿಪಂ ಸದಸ್ಯರಾದ ಕಲ್ಲೇಶ್ ಮತ್ತು ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.       ನಗರದ ಪತ್ರಿಕಾ ಭವನದಲ್ಲಿ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶನಿವಾರ ತಾಪಂ ಕೆಡಿಪಿ ಸಭೆ ಇದೆ ಎಂದು ಶುಕ್ರವಾರ ಸಂಜೆ ನಮಗೆ ಮಾಹಿತಿ ನೀಡಿದ್ದಾರೆ. ಒಂದು ದಿನದಲ್ಲಿ ನಾವು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅವಲೋಕನ ಮಾಡುವುದಾದರೂ ಹೇಗೆ? ವರದಿಯಲ್ಲಿರುವ ಮಾಹಿತಿ ತಿಳಿದುಕೊಳ್ಳಲು ನಮಗೆ ಸಮಯ ಬೇಡವೇ ಎಂದು ಪ್ರಶ್ನಿಸಿದರು.       ಸಭೆಯಲ್ಲಿ ಈ ಬಗ್ಗೆ ಸಚಿವರಾದ ಮಧುಸ್ವಾಮಿಯವರನ್ನು ಪ್ರಶ್ನೆ…

ಮುಂದೆ ಓದಿ...

ತುಮಕೂರು : ಪಾಲಿಕೆ ಆಯುಕ್ತರಾಗಿ ರೇಣುಕಾ!!

ತುಮಕೂರು:      ಮಹಾನಗರ ಪಾಲಿಕೆ ಆಯುಕ್ತರಾಗಿ ರೇಣುಕಾ ಶನಿವಾರ ಅಧಿಕಾರ ಸ್ವೀಕರಿಸಿದರು.       ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ಮು ಖ್ಯ ಯೋಜನಾಧಿಕಾರಿಯಾಗಿದ್ದ ಇವರು ಸರ್ಕಾರದ ಆದೇಶದಂತೆ ಆಯುಕ್ತ ಟಿ. ಭೂಬಾಲನ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಹುದ್ದೆಗೆ ನೇಮಕಗೊಂಡು ಶನಿವಾರ ಅಧಿಕಾರವಹಿಸಿಕೊಂಡಿದ್ದಾರೆ.       ಈ ಸಂದರ್ಭದಲ್ಲಿ ಅಧೀಕ್ಷರ ಇಂಜಿನಿಯರ್ ಮಹೇಶ್, ಮುಖ್ಯ ಲೆಕ್ಕಾಧಿಕಾರಿ ಗುರುಬಸವೇಗೌಡ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಮುಂದೆ ಓದಿ...