ತುಮಕೂರು : ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಸೀಲ್ ಡೌನ್!!

ತುಮಕೂರು:       ತುಮಕೂರು ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗಳನ್ನ ಸೀಲ್ ಡೌನ್ ಮಾಡಲಾಗಿದೆ.       ಠಾಣೆಯ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಇಂದು ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗಳೆರಡನ್ನೂ ಸೀಲ್ ಡೌನ್ ಮಾಡಲಾಗಿದೆ.       ಹಾಗೆ, ಇಂದು ಮೀಸಲು ಪಡೆಯ 4 ಮಂದಿ ಸಿಬ್ಬಂದಿಗಳಿಗೆ ಸೋಂಕು ದೃಢಪಟ್ಟಿರುವುದು ಖಚಿತವಾಗಿದೆ.       ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಿಬ್ಬಂದಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಎಸ್ಪಿ ಕಚೇರಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿತ್ತು.       ಈ ಕುರಿತಂತೆ ಸ್ಪಷ್ಟನೆ ನೀಡಿರುವ ಜಿಲ್ಲಾ ಎಸ್ಪಿ ವಂಶಿಕೃಷ್ಣ, ಎರಡು ದಿನಗಳ ಕಾಲ ಕಚೇರಿಯಲ್ಲಿ ಯಾವುದೇ ಕೆಲಸಗಳು ನಡೆಯುವುದಿಲ್ಲ ಎಂದಿದ್ದರು.         

ಮುಂದೆ ಓದಿ...

ಗುಬ್ಬಿ: ಶುದ್ಧೀಕರಣವಾಗದೇ ಮನೆಗಳಿಗೆ ಹೇರೂರು ಕೆರೆಯ ನೀರು!!

ಗುಬ್ಬಿ:       ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೇರೂರು ಕೆರೆಯ ನೀರು ಯಾವುದೇ ಶುದ್ಧೀಕರಣವಾಗದೇ ನೇರ ಸಾರ್ವಜನಿಕರಿಗೆ ತಲುಪುತ್ತಿದೆ.       ಈ ಅಶುದ್ದ ನೀರು ಬಳಸಿದರೂ ಅನಾರೋಗ್ಯ ಕಟ್ಟಿಟ್ಟ ಬುತ್ತಿ ಎಂದು ಆರೋಪಿಸಿ ಪಟ್ಟಣದ ಕೆಲ ಪ್ರಜ್ಞಾವಂತ ನಾಗರೀಕರು ಸಾಮಾಜಿಕ ಜಾಲತಾಣದ ಮೂಲಕ ಇಡೀ ದಿನ ಚಾಟಿಂಗ್ ಮೂಲಕ ಕೊರೋನಾ ಸಂಕಷ್ಟದಲ್ಲಿ ವಿನೂತನ ರೀತಿ ಪ್ರತಿಭಟಿಸಿದ ಘಟನೆ ಭಾನುವಾರ ಕಂಡುಬಂತು.       ಪಟ್ಟಣದ ಹಲವು ಬಡಾವಣೆಗೆ ಬೆಳಿಗ್ಗೆ ಸರಬರಾಜು ಆದ ಹೇಮಾವತಿ ನೀರು ಕೆಂಪು ಮಣ್ಣಿನಿಂದ ಕೂಡಿದ್ದು ಕಂಡು ಫೋಟೋ ತೆಗೆದು ವಾಟ್ಸ್‍ಪ್ ಮೂಲಕ ಚರ್ಚಿ ಆರಂಭಿಸಿದ ಕೆಲವರ ಆಕ್ರೋಶಕ್ಕೆ ಸಾಥ್ ನೀಡಿದ ಬಹಳ ಮಂದಿ ಸಾಮಾಜಿಕ ಜಾಲತಾಣದಲ್ಲೇ ತಮ್ಮೆಲ್ಲಾ ಆಕ್ರೋಶ ಹೊರಹಾಕಿದರು. ಜಲ ಶುದ್ದೀಕರಣ ಘಟಕ ಬಹಳ ತಿಂಗಳಿಂದ ಕೆಲಸ ಮಾಡುತ್ತಿಲ್ಲ. ನೀರು ಶುದ್ದಗೊಳಿಸದೇ ಕೆರೆಯ…

ಮುಂದೆ ಓದಿ...

ತುಮಕೂರು : ಸಿದ್ದಗಂಗಾ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸಾ ಕೇಂದ್ರ!!

ತುಮಕೂರು:      ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ಒದಗಿಸುವ ಸಲುವಾಗಿ ಸಿದ್ದಗಂಗಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊರೊನಾ ಚಿಕಿತ್ಸಾ ಕೇಂದ್ರವನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ.       ಸಿದ್ದಗಂಗಾ ಆಸ್ಪತ್ರೆಯು ವಿಷಮ ಪರಿಸ್ಥಿತಿಯ ಕೊರೊನಾ ಪೀಡಿತರನ್ನು ಉಪಚರಿಸಲು ಅವಶ್ಯವಿರುವ ಎಲ್ಲ ಅತ್ಯಾಧುನಿಕ ಸೌಲಭ್ಯ, ಹೆಚ್ಚು ರೋಗಿಗಳನ್ನು ಉಪಚರಿಸುವ ವ್ಯವಸ್ಥೆ, ಸಂಪನ್ಮೂಲಗಳನ್ನು ಹೊಂದಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಡಾ. ಜಿ.ಎಸ್. ಮಹೇಶ್ ತಿಳಿಸಿದ್ದಾರೆ.       ಸಿದ್ದಗಂಗಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರು ಹಾಗೂ ಇತರ ರೋಗಿಗಳನ್ನು ಏಕಕಾಲಕ್ಕೆ ಶುಶ್ರೂಷೆ ಮಾಡುವಷ್ಯು ಸ್ಥಳಾವಕಾಶ ಮತ್ತು ಸಂಪನ್ಮೂಲ ಲಭ್ಯವಿದೆ ಎಂದು ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಪರಮೇಶ್ ತಿಳಿಸಿದ್ದಾರೆ.ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ತುರ್ತು ಚಿಕಿತ್ಸೆಗೆ ಅಂದರೆ ಹೃದ್ರೋಗ, ಮೂತ್ರಕೋಶ ಸಮಸ್ಯೆ, ನರರೋಗ ಸೇರಿದಂತೆ ಮತ್ತಿತರ ಸಮಸ್ಯೆಗಳನ್ನು ನಿರ್ವಹಿಸಲು ತಜ್ಞ…

ಮುಂದೆ ಓದಿ...

ಗುಬ್ಬಿ: ಪ.ಪಂ. ಕಚೇರಿಗೆ ನಾಗರೀಕರಿಂದ ದಿಢೀರ್ ಮುತ್ತಿಗೆ!!

ಗುಬ್ಬಿ:       ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೇರೂರು ಕೆರೆಯ ನೀರು ಯಾವುದೇ ಶುದ್ಧೀಕರಣವಾಗದೇ ನೇರ ಸಾರ್ವಜನಿಕರಿಗೆ ತಲುಪುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಪಟ್ಟಣದ ನಾಗರೀಕರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆಯಿತು.       ಕಳೆದ ಮೂರು ತಿಂಗಳಿಂದ ಕೆಂಪು ಬಣ್ಣದಿಂದ ಕೂಡಿದ ನೀರು ಸಾರ್ವಜನಿಕರಿಗೆ ಸರಬರಾಜು ಆಗುತ್ತಿದೆ. ಇತ್ತೀಚೆಗೆ ಸಂಪೂರ್ಣ ಅಶುದ್ಧ ನೀರು ಕಂಡು ಹೌಹಾರಿದ ಸ್ಥಳೀಯರು ವಾಟ್ಸ್‍ಪ್ ಮೂಲಕ ತಮ್ಮ ಮನೆಯ ಸಂಪಿನ ನೀರಿನ ಪೋಟೋ ಹಾಕಿ ಸಿಡಿಮಿಡಿ ವ್ಯಕ್ತಪಡಿಸಿದ್ದರು.       ಈ ಅಶುದ್ಧ ನೀರು ಬಳಸಿದರೂ ಅನಾರೋಗ್ಯ ಕಟ್ಟಿಟ್ಟ ಬುತ್ತಿ ಎಂದು ಆರೋಪಿಸಿ ಪಟ್ಟಣದ ಕೆಲ ಪ್ರಜ್ಞಾವಂತ ನಾಗರೀಕರು ಸಾಮಾಜಿಕ ಜಾಲತಾಣದಲ್ಲೇ ಇಡೀ ದಿನ ಚಾಟಿಂಗ್ ಮೂಲಕ ವಿನೂತನ ರೀತಿ ಆಕ್ರೋಶ ಹೊರಹಾಕಿದ್ದರು. ಸೂಕ್ತ ಉತ್ತರ ಸಿಗದ ಕಾರಣ…

ಮುಂದೆ ಓದಿ...

ತುಮಕೂರು : 35 ಮಂದಿಗೆ ಕೋವಿಡ್-19 ಸೋಂಕು!!

ತುಮಕೂರು :      ಜಿಲ್ಲೆಯಲ್ಲಿಂದು 35 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 513ಕ್ಕೆ ಏರಿಕೆಯಾಗಿದೆ ಎಂದು ಡಿ.ಹೆಚ್.ಓ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಇಂದು ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 31, ಗುಬ್ಬಿ-2, ಕುಣಿಗಲ್-1, ಶಿರಾ-1 ಸೇರಿ ಒಟ್ಟು 35 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಇಂದು ಆಸ್ಪತ್ರೆಯಿಂದ 3 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 137 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 361 ಸಕ್ರಿಯ ಪ್ರಕರಣಗಳಿದ್ದು, ಇಂದು ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ 15 ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದೆ ಓದಿ...

ಕೋವಿಡ್ ಸೋಂಕಿತೆಗೆ ಹೆರಿಗೆ : ಆರೋಗ್ಯವಾಗಿರುವ ತಾಯಿ-ಮಗು

 ತುಮಕೂರು:       ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ 20 ವರ್ಷದ ಕೋವಿಡ್-19 ಸೋಂಕಿತೆಗೆ ಜಿಲ್ಲಾಸ್ಪತ್ರೆಯಲ್ಲಿಂದು ಹೆರಿಗೆ(ಮೊದಲ ಗರ್ಭಧಾರಣೆ)ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ವೀರಭದ್ರಯ್ಯ ತಿಳಿಸಿದ್ದಾರೆ.       ತಾಯಿಗೆ Premature Rupture of Membranes ಆಗಿದ್ದರಿಂದ ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಲಾಯಿತು. ಹೆಣ್ಣು ಮಗು ಜನನವಾಗಿದ್ದು, ಆರೋಗ್ಯವಾಗಿದೆ.       ಸ್ತ್ರೀರೋಗ ತಜ್ಞೆ ಡಾ|| ಮಹಾಲಕ್ಷ್ಮಮ್ಮ, ಅರಿವಳಿಕೆ ತಜ್ಞ ಡಾ|| ಸುರೇಶಬಾಬು ಮತ್ತು ತಂಡದವರು ಈ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಇದು ಮೊದಲ ಕೋವಿಡ್-19 ಸೋಂಕಿತ ಗರ್ಭಿಣಿಗೆ ಮಾಡಿದ ಸಿಸೇರಿಯನ್ ಶಸ್ತ್ರಚಿಕಿತ್ಸೆ ಹೆರಿಗೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಂದೆ ಓದಿ...