ತುಮಕೂರು :132 ಮಂದಿಗೆ ಕೊರೊನಾ ಸೋಂಕು ದೃಢ!!

 ತುಮಕೂರು:       ಜಿಲ್ಲೆಯಲ್ಲಿಂದು 132 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1346ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಇಂದು ತುಮಕೂರು-56, ಶಿರಾ-5, ಪಾವಗಡ-5, ಗುಬ್ಬಿ-6, ಕುಣಿಗಲ್-22, ತಿಪಟೂರು-9, ಮಧುಗಿರಿ-8, ಚಿಕ್ಕನಾಯಕನಹಳ್ಳಿ-4, ತುರುವೇಕೆರೆ-13, ಕೊರಟಗೆರೆ-4 ಸೇರಿದಂತೆ ಒಟ್ಟು 132 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಇಂದು ಜಿಲ್ಲಾಸ್ಪತ್ರೆಯಿಂದ 33 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 636 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 667 ಸಕ್ರಿಯ ಪ್ರಕರಣಗಳಿದ್ದು, ಇಂದು ಒಬ್ಬರು ಮೃತಪಟ್ಟಿದ್ದು, ಈವರೆಗೆ 43 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದೆ ಓದಿ...

ಜನಹಿತಕ್ಕಾಗಿ ಹಲವಾರು ಕಾಯ್ದೆಗಳ ತಿದ್ದುಪಡಿ- ಸಚಿವ ಜೆ.ಸಿ.ಎಂ

 ತುಮಕೂರು:       ರಾಜ್ಯದ ಜನಹಿತಕ್ಕಾಗಿ ಹಲವಾರು ಕಾಯ್ದೆಗಳಿಗೆ ತಿದ್ದುಪಡಿ ತಂದು ಸುಧಾರಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು.       ರಾಜ್ಯ ಸರ್ಕಾರದ ಅಧಿಕಾರಕ್ಕೆ ಬಂದು ಒಂದು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿರುವ ಸಂದರ್ಭದಲ್ಲಿ ವಿಧಾನ ಸೌಧದ ಬ್ಯಾಂಕ್ವೆಂಟ್ ಹಾಲ್‍ನಲ್ಲಿ ಏರ್ಪಡಿಸಿದ್ದ ಸರ್ಕಾರದ ಸಾಧನೆಯ ಕಿರು ಹೊತ್ತಿಗೆ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮದ ನೇರ ಪ್ರಸಾರ ಕಾರ್ಯಕ್ರಮವನ್ನು ವೀಕ್ಷಿಸಲು ಜಿಲ್ಲಾ ಪಂಚಾಯತಿಯಲ್ಲಿ ಏರ್ಪಡಿಸಿದ್ದ ವೀಕ್ಷಣಾ ಕಾರ್ಯಕ್ರಮದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜನರ ವೈಯಕ್ತಿಕ ಜೀವನ, ಕೈಗಾರಿಕಾ ಅಭಿವೃದ್ಧಿ ಹಾಗೂ ವ್ಯಾಪಾರಸ್ಥರ ಅನುಕೂಲಕ್ಕಾಗಿ ಶಾಸನಾತ್ಮಕವಾಗಿ ಕೆಲಸ ಮಾಡುವ ಮೂಲಕ ಈ ಕಾಯ್ದೆಗಳಿಗೆ ತಿದ್ದುಪಡಿ ತರಲಾಗಿದೆ ಎಂದರು.       ಸಂಜೆ ಹೊತ್ತಿನಲ್ಲಿ ದುಡಿಯುವ ಮಹಿಳೆಯರ ಸುರಕ್ಷತೆಗಾಗಿ ಅಂಗಡಿ ಮತ್ತು ಸ್ಥಾಪನೆ ಕಾಯ್ದೆ ತಿದ್ದುಪಡಿ ಮಾಡಲಾಗಿದೆ ಹಾಗೂ…

ಮುಂದೆ ಓದಿ...

ಸೀಲ್’ಡೌನ್ ಆಗಿದ್ದ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನ ಓಪನ್!!

ಕೊರಟಗೆರೆ :       ತಾಲೂಕಿನ ಸುಪ್ರಸಿದ್ಧ ಕ್ಷೇತ್ರಗಳಲ್ಲೊಂದಾದ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮಿ ಕ್ಷೇತ್ರದ  ದೇವಸ್ಥಾನ ಒಂದರ ಅರ್ಚಕರ ಮಡದಿಗೆ ಕಾಣಿಸಿಕೊಂಡಿದ್ದ ಕೊರೊನಾ ಪಾಸಿಟಿವ್ ವರದಿಯಿಂದ ದೇವಸ್ಥಾನ ಹಾಗೂ ಆವರಣವನ್ನು ಸೀಲ್ಡ್ ಮಾಡಲಾಗಿತ್ತು .       ಇನ್ನೇನು ಇದೇ ತಿಂಗಳ 31 ರಂದು ವರಮಹಾಲಕ್ಷ್ಮಿ ಹಬ್ಬವಾಗಿದ್ದು ಕರುನಾಡಿನ ಸುಪ್ರಸಿದ್ಧ ಕ್ಷೇತ್ರಗಳಲ್ಲೊಂದಾದ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮಿ ದೇವಿಯ ದರ್ಶನಕ್ಕೆ ಜುಲೈ 28 ರ ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಧುಗಿರಿ ಉಪವಿಭಾಗಾಧಿಕಾರಿ ಡಾ. ನಂದಿನಿದೇವಿ ಭಾನುವಾರ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ ತಾಲ್ಲೂಕಿನ ಪುಣ್ಯಕ್ಷೇತ್ರ ಶ್ರೀ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಿಯ ದೇವಾಲಯವನ್ನು ಜುಲೈ 27 ರಂದು ತೆರೆದು ಸ್ವಚ್ಛತೆ ಮತ್ತು ಕೊರೊನಾ ಭದ್ರತಾ ಕ್ರಮ ಕೈಗೊಂಡು ಮರುದಿನ ಮುಂಜಾನೆಯಿಂದ ಭಕ್ತರಿಗೆ ದೇವಿಯ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ .   …

ಮುಂದೆ ಓದಿ...

ತುಮಕೂರು : ಟಿಎಂಸಿಸಿ 4ನೇ ಎಟಿಎಂ ಕೇಂದ್ರ ಉದ್ಘಾಟನೆ!!

ತುಮಕೂರು:      ಸೌಹಾರ್ದ, ಸಹಕಾರ ಕ್ಷೇತ್ರದಲ್ಲಿ ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಅಧ್ಯಕ್ಷ ಎನ್.ಎಸ್.ಜಯಕುಮಾರ್ ಅವರ ಸೇವೆ ಅನನ್ಯವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಭಿಪ್ರಾಯಪಟ್ಟರು.      ತುಮಕೂರು ತಾಲ್ಲೂಕು ಯಲ್ಲಾಪುರದಲ್ಲಿ ಟಿಎಂಸಿಸಿ ನಾಲ್ಕನೇ ಎಟಿಎಂ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರಿನಿಂದ ಆರಂಭವಾದ ಟಿಎಂಸಿಸಿ ಕಾರ್ಯಚಟುವಟಿಕೆ ದೇಶದ ಹಲವೆಡೆ ಕಾರ್ಯನಿರ್ವಹಿಸುವಂತಾಗಿದ್ದು, ದೇಶ ವ್ಯಾಪಿ ಟಿಎಂಸಿಸಿ ಕಾರ್ಯನಿರ್ವಹಿಸುವಂತಾಗಲಿ ಎಂದು ಆಶಿಸಿದರು.       ಬ್ಯಾಂಕ್ ಲಾಭವನ್ನು ಬಡವರ ಸೇವೆಗೆ ಉಪಯೋಗಿಸುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿರುವ ಟಿಎಂಸಿಸಿ ಈಗಾಗಲೇ ಕೊರೋನಾ ವಾರಿಯರ್ಸ್ ಗಳಿಗೆ ಪಿಪಿಇ ಕಿಟ್ ಹಾಗೂ ಪೌರ ಕಾರ್ಮಿಕರಿಗೆ ಸಮವಸ್ತ್ರಗಳನ್ನು ನೀಡಲು ಮುಂದೆ ಬಂದಿದ್ದು, ಇಂತಹ ಸೇವೆಯನ್ನು ಮಾಡಲು ಉಳ್ಳವರು ಮುಂದೆ ಬರಬೇಕೆಂದು ಸಲಹೆ ನೀಡಿದರು.       ಟಿಎಂಸಿಸಿ ನಮ್ಮ ಬ್ಯಾಂಕ್ ಎನ್ನುವ ಭಾವನೆ ಜನರಲ್ಲಿ ಮೂಡಿರುವುದರಿಂದಲೇ ಇಂದು…

ಮುಂದೆ ಓದಿ...

ಜುಲೈ 30, 31ರಂದು ಸಾಮಾನ್ಯ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ!!

 ತುಮಕೂರು:       ಜಿಲ್ಲೆಯ 21 ಪರೀಕ್ಷಾ ಕೇಂದ್ರಗಳಲ್ಲಿ ಜುಲೈ 30 ಮತ್ತು 31ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿ ಜಿಲ್ಲಾ ದಂಡಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.       ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವ ವ್ಯಕ್ತಿಗಳು ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಷೇಧಾಜ್ಞೆಯು ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 10 ರಿಂದ ಸಂಜೆ 4-30ಗಂಟೆವರೆಗೆ ಜಾರಿಯಲ್ಲಿರುತ್ತದೆ.       ಪರೀಕ್ಷಾ ಕೇಂದ್ರದ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ಈ ಅವಧಿಯಲ್ಲಿ ನಿಷೇಧಿತ ಪ್ರದೇಶಗಳಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದೆ ಓದಿ...