ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ತುಮಕೂರು:       ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಹಮದ್ ಐಮಾನ್‍ಗೆ ಅಧಿಕ ಜಿಲ್ಲಾ ಸತ್ರ ವಿಶೇಷ ನ್ಯಾಯಾಲಯವು ಪೋಕ್ಸೊ ಕಾಯ್ದೆ ಕಲಂ 6ರಡಿ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ.ದಂಡ ಮತ್ತು ಕಲಂ 366 ಐಪಿಸಿ ಅಡಿ 5 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ.       ಅಧಿಕ ಜಿಲ್ಲಾ ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣಯ್ಯ ಅವರು ಈ ತೀರ್ಪು ನೀಡಿದ್ದು, ತಿಲಕ್ ಪಾರ್ಕ್ ಪೊಲೀಸ್ ಠಾಣಾ ತನಿಖಾಧಿಕಾರಿಗಳಾದ ರಾಘವೇಂದ್ರ ಸಿ.ಪಿ.ಐ ಅವರು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ವಿಶೇಷ ಅಭಿಯೋಜಕಿ ಗಾಯತ್ರಿ ರಾಜು ಸರ್ಕಾರದ ಪರ ವಾದ ಮಂಡಿಸಿದ್ದರು.

ಮುಂದೆ ಓದಿ...

‘ಹಳೆ ಕಾಮಗಾರಿ ಪೂರ್ಣಗೊಳಿಸಿದ ಬಳಿಕವೇ ಹೊಸ ಕಾಮಗಾರಿ ಕೈಗೊಳ್ಳಿ’-ಸಚಿವ ಜೆ.ಸಿ.ಎಂ

ತುಮಕೂರು:       ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಿದ ಬಳಿಕ ಹೊಸ ಕಾಮಗಾರಿಗಳನ್ನು ಕೈಗೊಳ್ಳುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.       ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ವೇಗ ನೀಡಿ ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಈಗ ಕೈಗೊಂಡಿರುವ ರಸ್ತೆ ಕಾಮಗಾರಿಗಳಿಂದ ಸಾರ್ವಜನಿಕರ ರಸ್ತೆ ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ಸೈನೇಜ್ ಬೋರ್ಡ್‍ಗಳನ್ನು ಅಳವಡಿಸಿ ಎಂದು ಅವರು ತಿಳಿಸಿದರು.      ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಲಭ್ಯವಿರುವ ಜಾಗ ಆಧಾರದ…

ಮುಂದೆ ಓದಿ...